5,962 ಗ್ರಾ.ಪಂಗಳಲ್ಲಿ ಪಿಡಿಒ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಡಿಸೆಂಬರ್ 29: ರಾಜ್ಯದಲ್ಲಿರುವ 5,962 ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾ.ಪಂ ಕಾರ್ಯದರ್ಶಿ ಗ್ರೇಡ್-1, 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಸಾವಿರಾರು ಹುದ್ದೆಗಳು ಖಾಲಿ ಇವೆ.
ಪಿಡಿಒ 727, ಗ್ರಾ.ಪಂ ಕಾರ್ಯದರ್ಶಿ ಗ್ರೇಡ್ 1, 2- 1,591, ದ್ವಿತೀಯ ದರ್ಜೆ ಲೆಕ್ಕ ಸಹಾಯಕರ 505 ಹುದ್ದೆಗಳು ಸೇರಿ ಒಟ್ಟು 2,800ಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದು ಆಸಕ್ತ ಆಬ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ವೃಂದದ ನೇಮಕಾತಿಗಾಗಿ ಜಿಲ್ಲಾ ಪಂಚಾಯಿತಿಗಳ ಉಪ ಕಾರ್ಯದರ್ಶಿ (ಅಭಿವೃದ್ಧಿ) ನೇತೃತ್ವದಲ್ಲಿ ಪ್ರಾಧಿಕಾರ ರಚಿಸಲಾಗಿದೆ.

ಅರ್ಹತೆ ಆಧಾರದ ಮೇಲೆ ಮುಂಬಡ್ತಿ ಮೂಲಕ ಭರ್ತಿ ಮಾಡಲು ಸರ್ಕಾರದಿಂದ ಎಲ್ಲ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ.
ಹುದ್ದೆಗಳು
ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾ.ಪಂ ಕಾರ್ಯದರ್ಶಿ ಗ್ರೇಡ್-1, 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ
ಪಿಡಿಒ ಒಟ್ಟು ಹುದ್ದೆಗಳು: 727
ಗ್ರಾ.ಪಂ ಕಾರ್ಯದರ್ಶಿ ಗ್ರೇಡ್ 1, 2 ಹುದ್ದೆಗಳು: 1,591,
ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳು: 505
ಒಟ್ಟು ಹುದ್ದೆಗಳು: 2,800
ಹೆಚ್ಚಿನ ಮಾಹಿತಿಗೆ: https://www.karnatakacareers.in/karnataka-govt-jobs/
ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-2 ವೃಂದದ 343 ಹುದ್ದೆಗಳಿಗೆ (80 ಕಲ್ಯಾಣ ಕರ್ನಾಟಕ , 263 ನೇರ ನೇಮಕಾತಿ ಮಾಡಿಕೊಳ್ಳಲು ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ 158 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ 55, ಕಲ್ಯಾಣ ಕರ್ನಾಟಕ ಹೊರತುಪಡಿಸಿ 103) ನೇರ ನೇಮಕಾತಿ ಮಾಡಲು ನಿರ್ಧರಿಸಲಾಗಿದೆ.
ಪಿಡಿಒ, ಎಫ್‌ಡಿಎ ಪರೀಕ್ಷೆಗಾಗಿ ಪದವಿ, ಸ್ನಾತಕೋತ್ತರ ಪದವಿ ಪಡೆದ ಸಾಕಷ್ಟು ಅಭ್ಯರ್ಥಿಗಳು ಅನೇಕ ವರ್ಷಗಳಿಂದ ಸಿದ್ಧತೆ ನಡೆಸಿದ್ದು, ಸರ್ಕಾರಿ ಹುದ್ದಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗುವುದನ್ನೇ ಕಾಯುತ್ತಿದ್ದಾರೆ.
ಯಾವ ಜಿಲ್ಲೆಗಳಲ್ಲಿ ಎಷ್ಟು ಪಿಡಿಒ ಖಾಲಿ ಹುದ್ದೆಗಳಿವೆ?
ಬಾಗಲಕೋಟೆ: 5
ಬೆಳಗಾವಿ: 32
ಬಳ್ಳಾರಿ: 53
ಬೆಂಗಳೂರು ಗ್ರಾಮಾಂತರ: 4
ಬೀದರ್: 32
ಚಾಮರಾಜನಗರ: 27
ಚಿಕ್ಕಬಳ್ಳಾಪುರ: 15
ಚಿಕ್ಕಮಗಳೂರು: 27
ಚಿತ್ರದುರ್ಗ: 3
ದಕ್ಷಿಣ ಕನ್ನಡ: 30
ದಾವಣಗೆರೆ: 45
ಧಾರವಾಡ: 18
ಗದಗ: 24
ಹಾಸನ: 11
ಹಾವೇರಿ: 38
ಕಲಬುರಗಿ: 67
ಕೊಡಗು: 24
ಕೋಲಾರ: 23
ಕೊಪ್ಪಳ: 17
ಮಂಡ್ಯ: 14
ಮೈಸೂರು: 11
ರಾಯಚೂರು: 34
ರಾಮನಗರ: 3
ಶಿವಮೊಗ್ಗ: 31
ತುಮಕೂರು: 51
ಉಡುಪಿ: 17
ಉತ್ತರ ಕನ್ನಡ: 48
ವಿಜಯಪುರ: 5
ಯಾದಗಿರಿ: 18
Recommended Video
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ











Click it and Unblock the Notifications