ಯಾದಗಿರಿಯಲ್ಲಿ ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

ಯಾದಗಿರಿ, ಮಾರ್ಚ್ 17: ಯಾದಗಿರಿ ಜಿಲ್ಲೆಯಲ್ಲಿ ಯುವ ಪರಿವರ್ತಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಮಾರ್ಚ್ 23ರೊಳಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಅರ್ಜಿಗಳನ್ನು ಸಲ್ಲಿಸಬಹುದು.

ಯುವಜನರ ಮಾನಸಿಕ ಆರೋಗ್ಯದ ಸರ್ವತೋಮುಖ ಬೆಳವಣಿಗೆ ಪೂರಕ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಯಾದಗಿರಿ ಜಿಲ್ಲೆಯ ಗುರುಮಠಕಲ್ ಮತ್ತು ಸುರಪುರ ತಾಲ್ಲೂಕಿನಲ್ಲಿ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸಲಿರುವ ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಯುವ ಸ್ಪಂದನ ಯುವಜನ ಮಾನಸಿಕ ಆರೋಗ್ಯ ಪೂರಕ ಸೇವೆಗಳನ್ನು ಒದಗಿಸಿ ಕೊಡುವ ನಿಟ್ಟಿನಲ್ಲಿ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಯುವಜನರನ್ನು ತಲುಪಿ ಯುವಜನರಿಂದಲೇ ನಡೆಸಿ, ಯುವಜನರನ್ನು ಸಬಲೀಕರಣಗೊಳಿಸಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಪೂರಕಗೊಳಿಸುವುದು ಈ ಯೋಜನೆಯ ಉದ್ಧೇಶವಾಗಿದೆ.

Jobs: Application Invite For Yuva Parivartaka Posts In Yadagiri

ಅರ್ಹತೆಗಳು:

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪದವೀಧರರಾಗಿರಬೇಕು. ಹಾಗೂ 21ರಿಂದ 35 ವರ್ಷದೊಳಗಿನವರಾಗಿರಬೇಕು. ಕನ್ನಡ ಭಾಷೆ ಸ್ಪಷ್ಟವಾಗಿ ಮಾತನಾಡುವುದು, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯಗಳನ್ನು ಹೊಂದಿರಬೇಕು. ಸಮುದಾಯದಲ್ಲಿ ಯುವಜನರಿಗೆ ತರಬೇತಿಯಂತಹ ಕಾರ್ಯಕ್ರಮಗಳನ್ನು ನಡೆಸಲು ಮತ್ತು ಕಂಪ್ಯೂಟರ್ ಬಳಕೆ ಜ್ಞಾನವನ್ನು ಹೊಂದಿರುವುರವರಿಗೆ ಆದ್ಯತೆ ನೀಡಲಾಗುವುದು.

ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳೊಂದಿಗೆ ಯುವಸ್ಪಂದನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಡಾನ್ ಬಾಸ್ಕೋ ಶಾಲೆ ಎದುರು, ಯಾದಗಿರಿ ಇಲ್ಲಿ ಮಾರ್ಚ್ 23, 2021ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ-8618549355 ಹಾಗೂ 8867323635 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯಾದಗಿರಿ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+