Jobs: ಭೋವಿ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ
ಧಾರವಾಡ, ಸೆಪ್ಟಂಬರ್ 18: ಕರ್ನಾಟಕ ಸರ್ಕಾರಿ ವ್ಯಾಪ್ತಿಯ ಸಂಸ್ಥೆಗಳಾದ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ವಿವಿಧ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಯೋಜನೆಗಳ ಲಾಭ ಪಡೆಯುವವರು ಕೂಡಲೇ ಅರ್ಜಿ ಸಲ್ಲಿಸಬೇಕು. ಇನ್ನೂ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ವಿಕಲಚೇತನರಿಂದಲೂ ಅರ್ಜಿಗಳನ್ನು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕೊನೆಯ ದಿನಾಂಕ ನೋಡಿಕೊಂಡು ಅರ್ಜಿ ಹಾಕಬೇಕು.
ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿಆರ್‍ಡಬ್ಲ್ಯೂ) ಮತ್ತು ನಗರ ಪ್ರದೇಶಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರ (ಯು.ಆರ್.ಡಬ್ಲ್ಯೂ) ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಈ ಸಂಬಂಧ ವಿಕಲಚೇತನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಧಾರವಾಡ ಜಿಲ್ಲೆಯ ವ್ಯಾಪ್ತಿಯ ಬೇಲೂರ, ಗುಳೇದಕೊಪ್ಪ, ಅಳ್ನಾವರ ತಾಲೂಕಿನ ಕಡಬಗಟ್ಟಿ, ಹುಬ್ಬಳ್ಳಿ ತಾಲೂಕಿನ ಅರಳೀಕಟ್ಟಿ, ಮಲಿಗವಾಡ, ಬಂಡಿವಾಡ, ಕುಂದಗೋಳ ತಾಲೂಕಿನ ಮತ್ತಿಗಟ್ಟಿ, ಬಾರದ್ವಾಡ, ರಾಮನಕೊಪ್ಪ, ಇಂಗಳಗಿ, ಪಶುಪತಿಹಾಳ, ತರ್ಲಘಟ್ಟ, ಹರಲಾಪೂರ ಮತ್ತು ಕಲಘಟಗಿ ತಾಲೂಕಿನ ಬೋಗೆನಾಗರಕೊಪ್ಪ ಗ್ರಾಮ ಪಂಚಾಯತಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಖಾಲಿ ಇವೆ.
ಹುಬ್ಬಳ್ಳಿ ನಗರದಲ್ಲಿ ವಲಯ ಕಚೇರಿ 9, 10, 11 ಸಂಬಂಧಿಸಿದಂತೆ ನಗರ ಪುನರ್ವಸಿ ಕಾರ್ಯಕರ್ತರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಾಹಿತಿ ನೀಡಿದರು.
ಅಕ್ಟೋಬರ್ 10ರೊಳಗೆ ಅರ್ಜಿ ಸಲ್ಲಿಸಿ
ಆಸಕ್ತ ವಿಕಲಚೇತನ ಅಭ್ಯರ್ಥಿಗಳು, ಅರ್ಜಿ ನಮೂನೆಯಲ್ಲಿ ವೈಯಕ್ತಿಕ ವಿವರಗಳನ್ನು ಬರೆದು ಆಯಾ ತಾಲೂಕಿನ ತಾಲೂಕು ಪಂಚಾಯತಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂಆರ್‍ಡಬ್ಲ್ಯೂ) ಮುಂದಿನ ಅಕ್ಟೋಬರ್ 10ರೊಳಗೆ ಅರ್ಜಿ ಸಲ್ಲಿಸಬೇಕು. ಕೊನೆಯ ದಿನಾಂಕವರೆಗೆ ಕಾಯದೇ ಈ ಕೂಡಲೇ ಅರ್ಜಿ ಸಲ್ಲಿಸಬೇಕೆಂದು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ನೀವು ತಾಲೂಕು ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು (ಎಂ.ಆರ್.ಡಬ್ಲ್ಯೂ) ಸಂಪರ್ಕಿಸಬೇಕು. ದೂರವಾಣಿ ಸಂಖ್ಯೆ 0836-2744474 ಗೆ ಸಂಪರ್ಕಿಸಬಹುದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ: ಅರ್ಜಿ ಆಹ್ವಾನ
ಪ್ರಸಕ್ತ 2024-25 ನೇ ಸಾಲಿಗೆ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸ್ವಯಂ ಉದ್ಯೋಗ ಯೋಜನೆಯಡಿ ನೇರಸಾಲ, ಉದ್ಯಮಶೀಲತಾ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.
ಆಸಕ್ತರು ಸೇವಾಸಿಂಧು ಪೋರ್ಟಲ್ http://sevasindhu.karantaka.gov.in ಮೂಲಕ ಕರ್ನಾಟಕ ಒನ್, ಗ್ರಾಮ್ ಒನ್, ಹುಬ್ಬಳ್ಳಿ, ಧಾರವಾಡ ಒನ್ ಕೇಂದ್ರಗಳಲ್ಲಿ ಮುಂದಿನ ತಿಂಗಳು ಅಕ್ಟೋಬರ್ 10ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2447151 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮಾಹಿತಿ ನೀಡಿದೆ.












Click it and Unblock the Notifications