ಬೆಂಗಳೂರಿನ ಐಐಎಸ್ಸಿಯಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಡಿಸೆಂಬರ್ 2: ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.
ಒಟ್ಟು 14 ಎಲೆಕ್ಟ್ರಾನಿಕ್ ಸಂಪನ್ಮೂಲ ನಿರ್ವಹಣೆ ಪ್ರಾಜೆಕ್ಟ್ ಟ್ರೈನಿ, ಲೈಬ್ರರಿ ಮತ್ತು ಇನ್ಫರ್ಮೇಶನ್ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್, ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ನವೆಂಬರ್ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 14 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ವಿಜ್ಞಾನ ಸಂಸ್ಥೆಯ ಅಧಿಕೃತ ವೆಬ್ಸೈಟ್ www.iisc.ac.in/ಗೆ ಭೇಟಿ ನೀಡಬಹುದಾಗಿದೆ.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯವಾಗಿದ್ದು, ಈ ಕುರಿತು ಎಲ್ಲದರ ಮಾಹಿತಿ ಇಲ್ಲಿದೆ.
ಸಂಸ್ಥೆ: ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು
ಹುದ್ದೆಯ ಹೆಸರು: ಎಲೆಕ್ಟ್ರಾನಿಕ್ ರಿಸೋರ್ಸ್ ಮ್ಯಾನೇಜ್ಮೆಂಟ್ ಪ್ರಾಜೆಕ್ಟ್ ಟ್ರೇನಿ, ಲೈಬ್ರರಿ ಮತ್ತು ಇನ್ಫರ್ಮೇಶನ್ ಮ್ಯಾನೇಜ್ಮೆಂಟ್ ಟ್ರೈನಿ
ಒಟ್ಟು ಹುದ್ದೆಗಳು: 14
ವಿದ್ಯಾರ್ಹತೆ: ಬಿಇ, ಬಿ.ಟೆಕ್, ಪದವಿ, ಸ್ನಾತಕೋತ್ತರ ಪದವಿ
ಉದ್ಯೋಗದ ಸ್ಥಳ: ಬೆಂಗಳೂರು
ವೇತನ: ಮಾಸಿಕ 25,000 ರೂ.
ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14/12/2021
ಹುದ್ದೆಗಳು ಮಾಹಿತಿ
ಲೈಬ್ರರಿ ಮತ್ತು ಇನ್ಫರ್ಮೇಶನ್ ಮ್ಯಾನೇಜ್ಮೆಂಟ್ ಟ್ರೈನಿ: 12
ಎಲೆಕ್ಟ್ರಾನಿಕ್ ರಿಸೋರ್ಸ್ ಮ್ಯಾನೇಜ್ಮೆಂಟ್ ಪ್ರಾಜೆಕ್ಟ್ ಟ್ರೇನಿ: 02
ಒಟ್ಟು 14 ಹುದ್ದೆಗಳು

ವಿದ್ಯಾರ್ಹತೆ:
ಲೈಬ್ರರಿ ಮತ್ತು ಇನ್ಫರ್ಮೇಶನ್ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಕಡ್ಡಾಯವಾಗಿ ಲೈಬ್ರರಿ ಮತ್ತು ಇನ್ಫರ್ಮೇಶನ್ ಮ್ಯಾನೇಜ್ಮೆಂಟ್ನಲ್ಲಿ ಪದವಿ ಪಡೆದಿರಬೇಕು.
ಎಲೆಕ್ಟ್ರಾನಿಕ್ ರಿಸೋರ್ಸ್ ಮ್ಯಾನೇಜ್ಮೆಂಟ್ ಪ್ರಾಜೆಕ್ಟ್ ಟ್ರೇನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಕಡ್ಡಾಯವಾಗಿ ಎಂಜಿನಿಯರಿಂಗ್ ಪದವಿ ಪಡೆದಿರಬೇಕು.
ವಯೋಮಿತಿ:
ಎಲೆಕ್ಟ್ರಾನಿಕ್ ರಿಸೋರ್ಸ್ ಮ್ಯಾನೇಜ್ಮೆಂಟ್ ಪ್ರಾಜೆಕ್ಟ್ ಟ್ರೇನಿ, ಲೈಬ್ರರಿ ಮತ್ತು ಇನ್ಫರ್ಮೇಶನ್ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು.
ವೇತನ:
ಎಲೆಕ್ಟ್ರಾನಿಕ್ ರಿಸೋರ್ಸ್ ಮ್ಯಾನೇಜ್ಮೆಂಟ್ ಪ್ರಾಜೆಕ್ಟ್ ಟ್ರೇನಿ, ಲೈಬ್ರರಿ ಮತ್ತು ಇನ್ಫರ್ಮೇಶನ್ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 25,000 ರೂ. ವೇತನ ನೀಡಲಾಗುತ್ತದೆ.
ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.












Click it and Unblock the Notifications