ಚಿತ್ರದುರ್ಗ ಜಿಲ್ಲೆಯಲ್ಲಿ ಗೃಹರಕ್ಷಕ ದಳ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ, ಆಗಸ್ಟ್‌, 24: ಚಿತ್ರದುರ್ಗ ಜಿಲ್ಲೆಯ ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ವಯಂ ಸೇವಕ ಸ್ಥಾನಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 15ಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಜಿಗಳನ್ನು ಸೆಪ್ಟೆಂಬರ್ 1 ರಿಂದ 9 ರವರೆಗೆ ವಿತರಿಸಲಾಗುವುದು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೃಹರಕ್ಷಕರ ಆಯ್ಕೆ ಸಮಿತಿ ಅಧ್ಯಕ್ಷರು, ಚಿತ್ರದುರ್ಗ ಇವರ ಆದೇಶದ ಮೇರೆಗೆ ಜಿಲ್ಲೆಯ ವಿವಿಧ ಘಟಕಗಳಲ್ಲಿ 79 ಗೃಹರಕ್ಷಕ ಸದಸ್ಯರ ಹುದ್ದೆಗಳು ಖಾಲಿ ಇವೆ. ಖಾಲಿ ಇರುವ ಗೃಹರಕ್ಷಕರ ಗೌರವ ಸದಸ್ಯ ಸ್ಥಾನಗಳಿಗೆ ಅರ್ಹರಿರುವ ಹಾಗೂ ಸ್ವಯಂ ಸೇವಕ ಗೃಹರಕ್ಷಕ ಸದಸ್ಯರಾಗಲು ಭಯಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ದಾಖಲೆಗಳೊಂದಿಗೆ ಗೃಹರಕ್ಷಕದಳ ಕಚೇರಿ, ಚಿತ್ರದುರ್ಗ ಜಿಲ್ಲೆ, ಚಿತ್ರದುರ್ಗ ಇಲ್ಲಿಗೆ ನಿಗಧಿತ ಅವಧಿಯೊಳಗೆ ಸಲ್ಲಿಸಲು ಸೂಚಿಸಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಖಾಲಿ ಇರುವ ಹುದ್ದೆಗಳ ಸಂಖ್ಯೆ

ಚಿತ್ರದುರ್ಗ ಘಟಕದಲ್ಲಿ 37 ಪುರುಷ ಹಾಗೂ 15 ಮಹಿಳಾ ಖಾಲಿ ಸ್ಥಾನಗಳು ಸೇರಿದಂತೆ, 52 ಸದಸ್ಯತ್ವ ಸ್ಥಾನಗಳು, ಹಿರಿಯೂರು ಘಟಕದಲ್ಲಿ13 ಪುರುಷ ಸದಸ್ಯ ಸ್ಥಾನಗಳು, ಮೊಳಕಾಲ್ಮೂರು ಘಟಕದಲ್ಲಿ 14 ಸದಸ್ಯತ್ವ ಸ್ಥಾನಗಳು ಸೇರಿದಂತೆ ಒಟ್ಟು ಖಾಲಿ ಇರುವ 79 ಸ್ವಯಂ ಸೇವಕ ಗೃಹರಕ್ಷಕ ಸದಸ್ಯತ್ವ ಸ್ಥಾನಕ್ಕೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

Application invited for Home Guard and Various Posts in Chitradurga District

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು

ಕನಿಷ್ಠ 19 ರಿಂದ 45 ವರ್ಷ ಒಳಗಿನ ವಯೋಮಿತಿಯವರಾಗಿರಬೇಕು. 10ನೇ ತರಗತಿ ಉತ್ತೀರ್ಣರಾಗಿರಬೇಕು. ಗೃಹರಕ್ಷಕ ಸದಸ್ಯತ್ವಕ್ಕೆ ಸೇರಬಯಸುವ ಅಭ್ಯರ್ಥಿಗಳು ಗರಿಷ್ಠ 5 ಕಿಲೋ ಮೀಟರ್‌ ಒಳಗಿನವರಾಗಿರಬೇಕು. ಯಾವುದೇ ಕ್ರಿಮಿನಲ್ ಮೊಕದ್ದಮೆ ದಾಖಲಾಗಿರಬಾರದು. ಯಾವುದೇ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿರಬಾರದು. ಉತ್ತಮ ದೇಹದಾಢ್ಯತೆಯನ್ನು ಹೊಂದಿರಬೇಕು. ಪುರುಷರಿಗೆ ಎತ್ತರ 168 ಸೆಂ.ಮೀ., ತೂಕ-50 ಕೆ.ಜಿ ಇರಬೇಕು. ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ಅವಕಾಶ ಇರುವುದಿಲ್ಲ. ಸ್ವಯಂ ಸೇವಾ ಮನೋಭಾವದಲ್ಲಿ ಆಸಕ್ತಿ ಇರುವಂತಹ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದೆ.

ಚಿತ್ರದುರ್ಗ ನಗರದ ಮೆದೇಹಳ್ಳಿ ರಸ್ತೆಯ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಅರ್ಜಿಗಳು ದೊರೆಯಲಿವೆ. ಅರ್ಜಿಗಳನ್ನು ಸೆಪ್ಟೆಂಬರ್ 1 ರಿಂದ 9 ರವರೆಗೆ ವಿತರಿಸಲಾಗುವುದು. ಸೆಪ್ಟೆಂಬರ್ 15 ಸಂಜೆ 5:30ರ ಒಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08194-200311, ಬೋಧಕರು-9481047857, 9663698179ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಗೃಹರಕ್ಷಕದಳದ ಅಧಿಕಾರಿಗಳು ತಿಳಿಸಿದ್ದಾರೆ.

ಆಗಸ್ಟ್ 25 ರಂದು ಉದ್ಯೋಗ ಮೇಳ

ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಸುವರ್ಣಾವಕಾಶ ದೊರೆತಿದೆ. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಗಸ್ಟ್ 25ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆವರೆಗೆ ಮಿನಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಆಸಕ್ತ ನಿರುದ್ಯೋಗಿಗಳು ಈ ಮೇಳದಲ್ಲಿ ಭಾಗವಹಿಸಿ ಉದ್ಯೋಗ ಪಡೆಯಬಹುದಾಗಿದೆ.

Application invited for Home Guard and Various Posts in Chitradurga District

ಉದ್ಯೋಗ ಮೇಳದಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಆಗಮಿಸಲಿವೆ. ಕಂಪನಿಗಳಲ್ಲಿ ಕಾರ್ಯನಿರ್ವಹಿಸಲು 18ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಇ., ಬಿಕಾಂ, ಬಿ.ಎಸ್‌ಸಿ ಮತ್ತು ಇತರೆ ಪದವೀಧರರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು

ಬಯೋಡಾಟಾ, 6 ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಫೋಟೋಸ್, ಆಧಾರ್ ಕಾರ್ಡ್ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ಮತ್ತು ದೂರವಾಣಿ ಸಂಖ್ಯೆ 8105619020, 8310785143, 9945587060ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+