ಮಾಸಿಕ ₹18,000 ವೇತನದ ಹುದ್ದೆಗೆ ಅರ್ಜಿ ಆಹ್ವಾನ
ಇತ್ತೀಚಿನ ದಿನಗಳಲ್ಲಿ ಹೆಚ್ಚೆಚ್ಚು ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ಕೊಡಗು ಜಿಲ್ಲೆಯ ಈ ಭಾಗಗಳಲ್ಲಿ ಖಾಲಿಯಿರುವ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವೀಚಾರಕರ ಒಟ್ಟು 10 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಅರ್ಜಿ ಸಲ್ಲಿಸುವವರು ಗಮನಿಸಬೇಕಾದ ಅಂಶಗಳು ಹಾಗೂ ಮಾಸಿಕ ವೇತನ ಎಷ್ಟಿರಲಿದೆ ಎಂದು ಇಲ್ಲಿ ತಿಳಿಯಿರಿ.
ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ ಮಾಡುವ ಬಗ್ಗೆ ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ. ಜಿಲ್ಲೆಯ ಬೇರೆ-ಬೇರೆ ತಾಲೂಕುಗಳಲ್ಲಿ ಈ ಉದ್ಯೋಗಗಳು ಖಾಯಿಯಿವೆ. ಸದ್ಯ ಇವುಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ ಫೆಬ್ರುವರಿ 13, 2025 ಆಗಿದೆ.

ವಿರಾಜಪೇಟೆ-ಚೆಂಬೆಬೆಳ್ಳೂರು, ಚೆನ್ನಯ್ಯನ ಕೋಟೆ, ಆರ್ಜಿ, ಪೊನ್ನಂಪೇಟೆ-ಬಾಳೆಲೆ, ಕುಟ್ಟ, ಗೋಣಿಕೊಪ್ಪ, ಕೆ.ಬಾಡಗ, ಸೋಮವಾರಪೇಟೆ-ಶನಿವಾರ ಸಂತೆ, ನಿಡ್ತ, ಕುಶಾಲನಗರ-ಶಿರಂಗಾಲ ಇಲ್ಲಿರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ನೇಮಕಾತಿ ಕುರಿತು ಅರ್ಜಿ ಆಹ್ವಾನಿಸಲಾಗಿದೆ.
ಮಾಸಿಕ ವೇತನ ಎಷ್ಟು?: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 18,606 ರೂಪಾಯಿ ಇರಲಿದೆ. ವಿದ್ಯಾರ್ಹತೆ ವಿಚಾರಕ್ಕೆ ಬಂದರೆ, ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಸರ್ಟಿಫಿಕೇಶನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್‌ನಲ್ಲಿ ಪ್ರಮಾಣ ಪತ್ರ ಪಡೆದಿರಬೇಕು. ಮಾನ್ಯತೆ ಪಡೆದ ಸಂಸ್ಥೆಯಲ್ಲಿ 3 ತಿಂಗಳ ಕಂಪ್ಯೂಟರ್ ಕೋರ್ಸ್ ಮಾಡಿರಬೇಕು.
ವಯೋಮಿತಿ ವಿವರ: ಒಂದು ವೇಳೆ ಇಬ್ಬರು ಸಮನವಾದ ಅಂಕ ಹೊಂದಿದ್ದರೇ ವಯಸ್ಸಿನಲ್ಲಿ ಹಿರಿಯರನ್ನು ಪರಿಗಣಿಸಲಾಗುತ್ತದೆ. ಈ ಕೆಲಸಕ್ಕೆ ಅರ್ಜಿ ಸಲ್ಲಿಸಬಯಸುವವರು ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿ ಆಗಿರಬೇಕು. ವಯಸ್ಸಿನ ಮಿತಿ 18 ರಿಂದ 40 ವರ್ಷಗಳು. ಅರ್ಜಿ ಸಲ್ಲಿಕೆಗೆ https://www.kodagu.nic.in ಗೆ ಭೇಟಿ ನೀಡಬೇಕು.
ಅರ್ಜಿ ಶುಲ್ಕದ ವಿವರ: ಅರ್ಜಿ ಸಲ್ಲಿಕೆಗೆ ಸಾಮಾನ್ಯ ಅಭ್ಯರ್ಥಿಗಳು- 500 ರೂಪಾಯಿ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು- 300 ರೂಪಾಯಿ, ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಪ್ರವರ್ಗ-1 ಅಭ್ಯರ್ಥಿಗಳು- 200 ರೂಪಾಯಿ, ವಿಶೇಷ ಚೇತನ ಅಭ್ಯರ್ಥಿಗಳು- 100 ರೂಪಾಯಿ ಶುಲ್ಕ ಪಾವತಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ https://cdn.s3waas.gov.in/s3c8ed21db4f678f3b13b9d5ee16489088/uploads/2025/01/2025012948.pdf ಗೆ ಭೇಟಿ ನೀಡಬಹುದಾಗಿದೆ.












Click it and Unblock the Notifications