ಬೆಂಗಳೂರಿನಲ್ಲಿ ₹75,000 ಸಂಬಳದ ಹುದ್ದೆಗೆ ಅರ್ಜಿ ಆಹ್ವಾನ-ಮಾಹಿತಿ ತಿಳಿಯಿರಿ
ಬೆಂಗಳೂರು, ಜನವರಿ, 22: ಬೆಂಗಳೂರು ಬೆಳೆದಂತೆಲ್ಲ ಉದ್ಯೋಗಗಳು ಕೂಡ ತೆರೆದುಕೊಳ್ಳುತ್ತಿವೆ. ಇದೀಗ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಎಷ್ಟು ಹುದ್ದೆಗಳು, ಮಾಸಿಕ ಸಂಬಳ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬಂಗಳೂರಿನಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್‌ನಲ್ಲಿ ಒಟ್ಟು 1 ಪ್ರಾಜೆಕ್ಟ್ ಎಂಜಿನಿಯರ್-I ಹುದ್ದೆ ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಬೇಕಾದರೆ ಬಿಇ/ಬಿ.ಟೆಕ್, ಪದವಿ ಪಡೆದಿರಬೇಕಾಗುತ್ತದೆ. ಜನವರಿ 25ರಂದು ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನಂತರ ಆಯ್ಕೆಯಾದವರಿಗೆ ಮಾಸಿಕ ವೇತನ ₹75,000 ನೀಡಲಾಗುತ್ತದೆ. ಇನ್ನು ಉದ್ಯೋಗದ ಸ್ಥಳ ಬೆಂಗಳೂರು ಆಗಿರುತ್ತದೆ ಎಂದು ತಿಳಿಸಿದೆ.

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಗ್ರಿ, ಬಿಇ/ಬಿ.ಟೆಕ್, ಪದವಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳ ವಯಸ್ಸು ಗರಿಷ್ಠ 32 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಬೆಂಗಳೂರಿನ ನಿಮ್ಹಾನ್ಸ್‌ನ ಎಕ್ಸಿಕ್ಯೂಟಿವ್ ಚೇಂಬರ್‌ನ 2ನೇ ಮಹಡಿ ನಿರ್ದೇಶಕರ ಕಛೇರಿಯಲ್ಲಿ ಲಿಖಿತ ಪರೀಕ್ಷೆ ನಡೆಯಲಿದ್ದು, ಬಳಿಕ ಸಂದರ್ಶನ ನಡೆಯಲಿದೆ. ಈಗಾಗಲೇ ನೋಟಿಫಿಕೇಶನ್ ಜನವರರು 1ರಂದು ಬಿಡುಗಡೆಯಾಗಿದ್ದು, ಸಂದರ್ಶನ ಜನವರಿ 25ರ ಬೆಳಗ್ಗೆ 9 ಗಂಟೆಗೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications