ಮಡಿಕೇರಿಯಲ್ಲಿ ಉದ್ಯೋಗಾವಕಾಶ: ಅರ್ಹರು ವಿವರಗಳೊಂದಿಗೆ ಅರ್ಜಿ ಸಲ್ಲಿಸಿ
ಮಡಿಕೇರಿ, ನವೆಂಬರ್ 14: ಸರ್ಕಾರ ರಾಜ್ಯದ ಯುವ ಜನತೆಗಾಗಿ ಜಾರಿಗೆ ತಂದಿರುವ 'ಯುವ ಸ್ಪಂದನ' ಯೋಜನೆ ಅಡಿಯಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರಿಗೆ ಅವಕಾಶವೊಂದು ತೆರೆದುಕೊಂಡಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ 'ಯುವ ಸ್ಪಂದನ' ಯೋಜನೆ ಅನುಷ್ಠಾನಗೊಳ್ಳುತ್ತಿದೆ.
ಈ ಯೋಜನೆಯಲ್ಲಿ ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ವಿರಾಜಪೇಟೆ, ಸೋಮವಾರಪೇಟೆ, ಮಡಿಕೇರಿ, ಪೊನ್ನಂಪೇಟೆಯಲ್ಲಿ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಹಿನ್ನೆಲೆಯಲ್ಲಿ 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟ ವಿದ್ಯಾಭ್ಯಾಸ ಮಾಡಿರುವ, ಕನ್ನಡ ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹದು.
ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ನವೆಂಬರ್ 26 ರಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮಡಿಕೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಉದ್ಯೋಗದ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ ಕೊಡಗು, ದೂ.ಸಂ. 08272-220986, ಆನಂದ 9632104204, ಲಕ್ಷ್ಮಿ 7204363367 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.












Click it and Unblock the Notifications