ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಚಲನಚಿತ್ರ ಅಕಾಡೆಮಿಯಿಂದ ತರಬೇತಿ, ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಜನವರಿ 11: ಕರ್ನಾಟಕ ಚಲನಚಿತ್ರ ಅಕಾಡೆಮಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 30 ವರ್ಷ ವಯೋಮಿತಿಯೊಳಗಿನ ಯುವತಿ, ಯುವಕರಿಗೆ ಚಲನಚಿತ್ರ ನಿರ್ದೇಶನ, ಛಾಯಾಗ್ರಹಣ, ವಿಡಿಯೋ ಸಂಕಲನ, ಸ್ಕ್ರಿಪ್ಟ್ ತಯಾರಿಕೆ, ಅಭಿನಯ ಇತ್ಯಾದಿಗಳ ಕುರಿತು ವಸತಿ ಸಹಿತ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಚಲನಚಿತ್ರ ಕ್ಷೇತ್ರದ ಬಗ್ಗೆ ಆಸಕ್ತಿ ಹೊಂದಿರುವ 30 ವರ್ಷ ವಯೋಮಿತಿಯೊಳಗಿನ ಯಾವುದೇ ಪದವೀಧರ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಯುವಕ/ಯುವತಿಯರು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಅಕಾಡೆಮಿ ವೆಬ್ ಸೈಟ್ ನಲ್ಲಿ ಡೌನ್ ಲೋಡ್ ಮಾಡಬಹುದು ಅಥವಾ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಕಚೇರಿಯಿಂದ ಖುದ್ದು ಪಡೆಯಬಹುದಾಗಿದೆ.

ಟೆಲಿವಿಷನ್ ಜರ್ನಲಿಸಂ, ಕ್ಯಾಮರಾಮ್ಯಾನ್ ತರಬೇತಿಗೆ ಅರ್ಜಿ ಆಹ್ವಾನಟೆಲಿವಿಷನ್ ಜರ್ನಲಿಸಂ, ಕ್ಯಾಮರಾಮ್ಯಾನ್ ತರಬೇತಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ: ಪದವಿಯಲ್ಲಿ ಪಡೆದಿರುವ ಸರಾಸರಿ ಅಂಕದ ಜೇಷ್ಠತೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ: 20-01-2021 ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸತಕ್ಕದ್ದು.

Application invited from SC ST for Film direction, Acting Training

ಅರ್ಜಿ ಸಲ್ಲಿಸಬೇಕಾದ ವಿಳಾಸ:
ರಿಜಿಸ್ಟಾರ್, ಕರ್ನಾಟಕ ಚಲನಚಿತ್ರ ಅಕಾಡೆಮಿ, ಕನ್ನಡ ಚಲನಚಿತ್ರ ಅಮೃತೋತ್ಸವ ಭವನ, # 20/ಎ, ನಂದಿನಿ ಲೇಔಟ್, ಪ್ರೆಸಿಡೆನ್ಸಿ ಶಾಲೆ ಪಕ್ಕ, ಬೆಂಗಳೂರು-560 096. ಈ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 20, 2021. ಕೊನೆ ದಿನಾಂಕದ ನಂತರ ಸ್ವೀಕರಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ 080-23493410 ಕ್ಕೆ ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದು.

English summary
Application invited from SC/ST candidates for training on Film direction, Cinematography, video editing, Acting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X