ಎಸ್ ಸಿ, ಎಸ್ ಟಿ ಅಭ್ಯರ್ಥಿಗಳಿಗೆ ಯುಪಿಎಸ್ ಸಿ ನೇಮಕಾತಿ ತರಬೇತಿಗೆ ಅರ್ಜಿ ಆಹ್ವಾನ
ಕೊಪ್ಪಳ, ಮೇ. 09 : ಯುಪಿಎಸ್ ಸಿ ಹುದ್ದೆಗಳಿಗೆ ನಡೆಯುವ ಪರೀಕ್ಷಾ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಯುಪಿಎಸ್ ಸಿ ಹುದ್ದೆಗಳ ಪರೀಕ್ಷೆ ತೆಗೆದುಕೊಳ್ಳುವ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲು ಉದ್ದೇಶಿಸಲಾಗಿದ್ದು, ಈ ತರಬೇತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿ, ಉಚಿತವಾಗಿ 7 ರಿಂದ 9 ತಿಂಗಳ ಅವಧಿಯ ತರಬೇತಿ ನೀಡಲಾಗುವುದು.

* ವಯೋಮಿತಿ: ಯು.ಪಿ.ಎಸ್.ಸಿ ಹುದ್ದೆಗಳಿಗೆ ನಡೆಯುವ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವಭಾವಿ ತರಬೇತಿ ಪಡೆಯುವ ಅಭ್ಯರ್ಥಿಗಳು, 21 ರಿಂದ 35 ವರ್ಷ ವಯೋಮಿತಿಯಲ್ಲಿರಬೇಕು.
* ವಿದ್ಯಾರ್ಹತೆ: ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
ಇತರೆ ವಿಶೇಷ ಸೂಚನೆಗಳು:
* ಕರ್ನಾಟಕ ರಾಜ್ಯದವರಾಗಿರಬೇಕು.
* ಪರೀಕ್ಷೆಗಳಿಗೆ ವಿಧಿಸುವ ಎಲ್ಲಾ ನಿಬಂಧನೆಗಳನ್ನು ಪೂರೈಸಬೇಕು.
* ಅಭ್ಯರ್ಥಿಯು/ ಪೋಷಕರ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ. 6 ಲಕ್ಷ ಮೀರಿರಬಾರದು.
* ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಹಾಗೂ ವಿವಿಧ ಸಂಸ್ಥೆಗಳಲ್ಲಿ ಲಭ್ಯವಿರುವ ಸೀಟುಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
* ಅರ್ಜಿಗಳನ್ನು ವೆಬ್ ಸೈಟ್ ನಲ್ಲಿ ಮೇ 20ರ ಸಂಜೆ 5-30 ಗಂಟೆಯೊಳಗಾಗಿ ಸಲ್ಲಿಸಲು ಕೋರಿದೆ.
* ಹೆಚ್ಚಿನ ವಿವರಗಳಿಗಾಗಿ ಇಲಾಖೆ ವೆಬ್ ಸೈಟ್ ನೋಡಬಹುದು ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications