ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ರಂಥಾಲಯ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಅ. 15: ಕರ್ನಾಟಕ ಸಚಿವಾಲಯದ ಗ್ರಂಥಾಲಯದಲ್ಲಿ 2020-21 ನೇ ಸಾಲಿನ ಒಂದು ವರ್ಷದ ಅವಧಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

ಅಪ್ರೆಂಟಿಸ್ ತರಬೇತಿಗೆ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಅನುಗುಣವಾಗಿ ಆಯ್ಕೆ ಮಾಡಲಾಗುವುದು. ಗ್ರಾಜುಯೇಟ್ ಅಪ್ರೆಂಟಿಸ್ (ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ) ತರಬೇತಿಗೆ ಲೈಬ್ರರಿ ಸೈನ್ಸ್‌ನಲ್ಲಿ ಪದವಿ (ಬಿ.ಎಲ್.ಐ.ಎಸ್.ಸಿ) ಪಡೆದಿರಬೇಕು. ಇವರಿಗೆ ಪ್ರತಿ ತಿಂಗಳಿಗೆ 10.000 ರೂ. ಗೌರವಧನ ನೀಡಲಾಗುವುದು. ಟೆಕ್ನಿಶಿಯನ್ ಅಪ್ರೆಂಟಿಸ್ (ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ) ಗೆ ಲೈಬ್ರರಿ ಸೈನ್ಸ್‍ನಲ್ಲಿ ಡಿಪ್ಲೋಮಾ ಪಡೆದಿರಬೇಕು. ಇವರಿಗೆ ಪ್ರತಿ ತಿಂಗಳಿಗೆ 8,000 ರೂ. ಸ್ಟೈಫಂಡ್ ನೀಡಲಾಗುವುದು. ಹಾಗೂ ಟೆಕ್ನಿಶಿಯನ್ ಅಪ್ರೆಂಟಿಸ್ (ಕರ್ಮಷಿಯಲ್ ಪ್ರಾಕ್ಟಿಸ್) ಗೆ ಕರ್ಮಷಿಯಲ್ ಪ್ರಾಕ್ಟಿಸ್‍ನಲ್ಲಿ ಡಿಪ್ಲೋಮಾ ಪಡೆದಿರಬೇಕು. ಅವರಿಗೆ ಪ್ರತಿ ತಿಂಗಳು 8,000 ರೂಪಾಯಿ ಗೌರವಧನ ನೀಡಲಾಗುವುದು.

ಮೈಸೂರು ಮಹಾನಗರ ಪಾಲಿಕೆಯಿಂದ ವಿವಿಧ ಹುದ್ದೆಗೆ ಅರ್ಜಿ ಆಹ್ವಾನಮೈಸೂರು ಮಹಾನಗರ ಪಾಲಿಕೆಯಿಂದ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಪ್ರಧಾನ ಮುಖ್ಯ ಗ್ರಂಥಾಧಿಕಾರಿ, ಸಚಿವಾಲಯ ಗ್ರಂಥಾಲಯ, ಕೊಠಡಿ ಸಂ: 11 ನೆಲಮಹಡಿ, ವಿಧಾನ ಸೌಧ ಬೆಂಗಳೂರು-560001 ಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನವೆಂಬರ್ 11 ಕೊನೆಯ ದಿನವಾಗಿರುತ್ತದೆ.

application to apprentice training for one year from 2020-21 at karnataka ministry library

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್ ಹಾಗೂ ದೂರವಾಣಿ ಸಂಖ್ಯೆ: 080-22033462/3011 ಗೆ ಸಂಪರ್ಕಿಸಬಹುದು ಎಂದು ಪ್ರಧಾನ ಮುಖ್ಯ ಗ್ರಂಥಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಗಳು ತಿಳಿಸಿದ್ದಾರೆ.

English summary
Applications have been invited from applicants for apprentice training for a period of one year from 2020-21 at Karnataka Ministry Library.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X