ಐಡಿಬಿಐ ಬ್ಯಾಂಕ್‌ನಲ್ಲಿ 1044 ಹುದ್ದೆಗೆ ಅರ್ಜಿ ಆಹ್ವಾನ
ಐಡಿಬಿಐ (IDBI) ಬ್ಯಾಂಕ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ 1044 ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಜೂನ್ 17, 2022 ಕೊನೆಯ ದಿನವಾಗಿದೆ.
ಒಟ್ಟು 1044 ಕಾರ್ಯನಿರ್ವಾಹಕ (Executives) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಖುದ್ದಾಗಿ, ಅಂಚೆ ಅಥವಾ ಕೊರಿಯರ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಎಸ್‌ಬಿಐ ಬ್ಯಾಂಕ್ ನೇಮಕಾತಿ; 641 ಹುದ್ದೆಗಳಿಗೆ ಅರ್ಜಿ ಹಾಕಿ
ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ ನಡೆಸಲಾಗುತ್ತದೆ. ದಾಖಲೆ ಪರಿಶೀಲನೆ ನಂತರ, ನೇಮಕಾತಿ ಪೂರ್ವ ವೈದ್ಯಕೀಯ ಪರೀಕ್ಷೆಯ ನಂತರ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಾಗಿದೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಕಾರ್ಯ ನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ ಸೈಟ್ idbibank.in ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಸೂಚಿಸಲಾಗಿದೆ.

ಅರ್ಜಿ ಸಲ್ಲಿಕೆಯ ವಯೋಮಿತಿ:
ಕಾರ್ಯನಿರ್ವಾಹಕ ಹುದ್ದೆಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿಗಳನ್ನು ಸಲ್ಲಿಕೆ ಮಾಡಲು ಕನಿಷ್ಠ ವಯೋಮಿತಿ 20 ವರ್ಷಗಳು. ಅಭ್ಯರ್ಥಿಯು ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಗರಿಷ್ಠ 25 ವರ್ಷಗಳನ್ನು ಮೀರಿರಬಾರದು.
ಅರ್ಜಿ ಸಲ್ಲಿಕೆಯ ಶುಲ್ಕ?:
ಎಸ್‌ಸಿ, ಎಸ್‌ಟಿ, ವಿಶೇಷ ಚೇತನರಿಗೆ ಅರ್ಜಿ ಶುಲ್ಕ 200 ರೂಪಾಯಿ ನಿಗದಿಪಡಿಸಿದ್ದು, ಇತರೆ ಸಾಮಾನ್ಯ ಅಭ್ಯರ್ಥಿಗಳಿಗೆ 1000 ರೂಪಾಯಿ ನಿಗದಿಪಡಿಸಲಾಗಿದೆ. ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ನಗದು ಕಾರ್ಡ್‌ಗಳು ಮೊಬೈಲ್ ವ್ಯಾಲೆಟ್‌ಗಳ ಮೂಲಕ ಪರೀಕ್ಷಾ ಶುಲ್ಕವನ್ನು ಪಾವತಿಸಬಹುದಾಗಿದೆ. ದಿನಾಂಕ ಜೂನ್ 3, 2022 ರಿಂದ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಜೂನ್ 17, 2022 ಕೊನೆಯ ದಿನಾಂಕವಾಗಿದೆ. ಶುಲ್ಕ ಪಾವತಿಸಲು ಜೂನ್ 17 ಕೊನೆಯ ದಿನಾಂಕವಾಗಿದೆ. ಜುಲೈ 9 ರಂದು ಆನ್‌ಲೈನ್ ಪರೀಕ್ಷೆ ನಡೆಯಲಿದೆ.
ಮಾಸಿಕ ವೇತನ ಎಷ್ಟು?:
ಇನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ 29000 ರೂಪಾಯಿ ಮಾಸಿಕ ವೇತನ ನಿಗದಿಪಡಿಸಲಾಗಿದೆ. 1044 ಅಭ್ಯರ್ಥಿಗಳಲ್ಲಿ ಎಸ್‌ಸಿ ವರ್ಗಕ್ಕೆ 175, ಎಸ್‌ಟಿ ವರ್ಗಕ್ಕೆ 79, ಒಬಿಸಿ 268, ಆರ್ಥಿಕವಾಗಿ ಹಿಂದುಳಿದ ವರ್ಗ (EWS) 104, ಇತರೆ (UR) 418 ಹುದ್ದೆಗಳನ್ನು ಮೀಸಲಿಡಲಾಗಿದೆ.












Click it and Unblock the Notifications