SSLC: 10ನೇ ತರಗತಿ ಪಾಸ್, ಈ ಕೌಶಲ್ಯಾಭಿವೃದ್ಧಿ ತರಬೇತಿ ಪಡೆಯಿರಿ
ಮಡಿಕೇರಿ, ಮೇ 09: ಕರ್ನಾಟಕದ 2024ರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬುಧವಾರ ಪ್ರಕಟವಾಗಿದೆ. 10 ತರಗತಿ ವಿದ್ಯಾರ್ಹತೆ ಹೊಂದಿದ್ದು, 18 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಕರೆಯಲಾಗಿದೆ.
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ, ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ಧಿ (ತಾಂತ್ರಿಕ ನೈಪುಣ್ಯತೆ) ತರಬೇತಿಗೆ ಆಪ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ಅರ್ಜಿ ನಮೂನೆಯೊಂದಿಗೆ ದಾಖಲಾತಿಗಳನ್ನು ಕೂಡಲೇ ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸುವುದು. ಅಭ್ಯರ್ಥಿಯು ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಪ್ರತಿ (ಕಡ್ಡಾಯ), ಜಾತಿ ಪ್ರಮಾಣ ಪತ್ರ, ಪಡಿತರ ಚೀಟಿ, ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರದ ಪ್ರತಿ ಹಾಗೂ ಮೊಬೈಲ್ ಸಂಖ್ಯೆ ಸಲ್ಲಿಸಬೇಕು.
ಮಲ್ಟಿ ಸ್ಕಿಲ್ ಟೆಕ್ನೀಷಿಯನ್(ಎಲೆಕ್ಟ್ರಿಕಲ್), ಸೆಲ್ಫ್ ಎಂಪ್ಲಾಯ್ಡ್ ಟೈಲರ್, ಅಸಿಸ್ಟೆಂಟ್ ಬ್ಯೂಟಿ ಥೆರಪಿಸ್ಟ್ ತರಬೇತಿಗೆ 8ನೇ ತರಗತಿ ವಿದ್ಯಾರ್ಹತೆ ಹೊಂದಿದ್ದು, 18 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡೊಮೆಸ್ಟಿಕ್ ಡಾಟಾ ಎಂಟ್ರಿ ಆಫರೇಟರ್‌ಗೆ 10 ತರಗತಿ ವಿದ್ಯಾರ್ಹತೆ ಹೊಂದಿದ್ದು, 18 ರಿಂದ 45 ವರ್ಷದೊಳಗಿರಬೇಕು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ತಾಲ್ಲೂಕು ಇವರನ್ನು ಸಂಪರ್ಕಿಸಬೇಕು. ದೂರವಾಣಿ ಸಂಖ್ಯೆ 08272-225531, ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ತಾಲ್ಲೂಕು ದೂರವಾಣಿ ಸಂಖ್ಯೆ 9480843155, ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ತಾಲ್ಲೂಕು 08276-281115 ಹಾಗೂ ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ, ವಿರಾಜಪೇಟೆ ತಾಲ್ಲೂಕು 9480843157 ಇವರನ್ನು ಸಂಪರ್ಕಿಸಬಹುದು.
ತರಬೇತಿಗೆ ಅರ್ಜಿ ಆಹ್ವಾನ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದಲ್ಲಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ತರಬೇತಿ ನೀಡಲು ಕೌಶಲ್‍ಕರ್ ಪೋರ್ಟಲ್ ಅನಾವರಣಗೊಳಿಸಿದೆ. ಈ ಪೋರ್ಟಲ್ ಮೂಲಕ ತರಬೇತಿಗೆ ಅರ್ಜಿ ಕರೆಯಲಾಗಿದೆ.
ಅರ್ಜಿ ಸಲ್ಲಿಕೆ ಮಾಡುವವರು 18 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳಾಗಿರಬೇಕು. ಕೌಶಲ್‍ಕರ್ ಪೋರ್ಟಲ್‍ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಈ ಪೋರ್ಟಲ್‍ನಲ್ಲಿ ಹಲವಾರು ಜಾಬ್‍ರೋಲ್‍ಗಳಿದ್ದು, ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಕೌಶಲ್ಯ ಹಾಗೂ ಅನುಭವವನ್ನು http://www.kaushalkar.com ನಲ್ಲಿ ನೋಂದಾಯಿಸಿ.
ತರಬೇತಿ ಪೂರ್ಣಗೊಂಡ ನಂತರ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುವುದು. ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9738361502 ಸಂಖ್ಯೆಗೆ ಕರೆ ಮಾಡಬಹುದು.












Click it and Unblock the Notifications