ಶಿವಮೊಗ್ಗ; ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ, ಜನವರಿ 01; ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಶಿವಮೊಗ್ಗ 12 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರ ಮತ್ತು ಕೇಂದ್ರ ಕಾರಾಗೃಹ ಶಿವಮೊಗ್ಗ ಇಲ್ಲಿ ಖಾಲಿ ಇರುವ ಒಟ್ಟು 12 ವೈದ್ಯಾಧಿಕಾರಿಗಳ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ಭರ್ತಿ ಮಾಡಲಾಗುತ್ತಿದೆ.
ಅರ್ಹ ಎಂಬಿಬಿಎಸ್ ಪದವೀಧರು 07/01/2023ರ ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ. ಹೆಚ್. ರಸ್ತೆ ಶಿವಮೊಗ್ಗ ಇಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.

ಅಭ್ಯರ್ಥಿಗಳು ವಿದ್ಯಾರ್ಹತೆಯ/ ತರಬೇತಿಯ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗೆ ಖುದ್ದಾಗಿ ಕಚೇರಿಗೆ ಭೇಟಿ ನೀಡಬಹುದು ಅಥವಾ 08182-222382 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ತಿಳಿಸಿದ್ದಾರೆ.
ಟೆಕ್ನಿಕಲ್ ಆಫೀಸರ್ ಹುದ್ದೆಗಳು; ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೆಎಸ್‍ಎಪಿಎಸ್ ವತಿಯಿಂದ ವೈರಲ್ ಲೋಡ್ ಲ್ಯಾಬೋರೆಟರಿ ಮಂಜೂರಾಗಿದೆ.
ಇಲ್ಲಿ ಗುತ್ತಿಗೆ ಆಧಾರದಲ್ಲಿ ಸಂಚಿತ ವೇತನದಡಿ ಕೆಲಸ ಮಾಡಲು ಟೆಕ್ನಿಕಲ್ ಆಫೀಸರ್ ಹುದ್ದೆಗೆ ನೇಮಕಾಗಿ ಮಾಡಿಕೊಳ್ಳಲು ನೇರ ಸಂದರ್ಶನ ಆಯೋಜಿಸಲಾಗಿದೆ.
ಆಸಕ್ತರು ಅರ್ಜಿ ನಮೂನೆಯನ್ನು ಸಂಸ್ಥೆಯ ವೆಬ್‍ಸೈಟ್ www.sims-shimoga.com ರಲ್ಲಿ ಪಡೆದು, ಭರ್ತಿಮಾಡಿದ ಅರ್ಜಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.
ಆಸಕ್ತರು ಸಿಮ್ಸ್ ನಿರ್ದೇಶಕರ ಸಭಾ ಕೊಠಡಿಯಲ್ಲಿ ಜನವರಿ 5ರಂದು ನೇರ ಸಂದರ್ಶನಕ್ಕೆ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.
ಜೆಸಿಬಿ ಆಪರೇಟರ್ ತರಬೇತಿ; ಕೆನರಾ ಬ್ಯಾಂಕ್ ದೇಶಪಾಂಡೆ ರೂಡ್ ಸೆಟ್ ಹಳಿಯಾಳ ಹಾಗೂ ಜೆಸಿಬಿ ಇಂಡಿಯಾ ಇವರ ಜಂಟಿ ಸಹಯೋಗದಲ್ಲಿ 30 ದಿನದ ಜೆಸಿಬಿ ಆಪರೇಟರ್ ತರಬೇತಿಯನ್ನು ಉಚಿತವಾಗಿ ನೀಡುತ್ತಿದೆ.
18-45 ವರ್ಷ ವಯೋಮಿತಿಯೊಳಗಿನ ಯುವಕರು ಅರ್ಜಿ ಸಲ್ಲಿಸಬಹುದು. ಆಸಕ್ತರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಹಾಲಿ ಮಾಡುತ್ತಿರುವ ಕೆಲಸದ ವಿವರ ಬರೆದು ಸಲ್ಲಿಸಬೇಕು.
ಅರ್ಜಿಯನ್ನು ಜನವರಿ 12 ರೊಳಗಾಗಿ ಕೆನರ ಬ್ಯಾಂಕ್ ದೇಶಪಾಂಡೆ ರೂಡ್‌ಸೆಟ್ ವಿಸ್ತರಣಾ ಕೇಂದ್ರ ಹಸನಮಾಳ್, ದಾಂಡೇಲಿ-581325, ವಿಳಾಸಕ್ಕೆ ಕಳುಹಿಸುವುದು. ಈ ತರಬೇತಿ ಊಟ, ವಸತಿ ಸಹಿತ ಉಚಿತವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಲು ನಂಬರ್‌ಗಳು 08284-298547/ 8050741744/ 9632143217/ 9449782425. ತರಬೇತಿಯ ನಂತರ ಉದ್ಯೋಗ ನಿಯೋಜನೆ ಮಾರ್ಗದರ್ಶನ ನೀಡಲಾಗುತ್ತದೆ.












Click it and Unblock the Notifications