Supreme Court Recruitment 2025: ಸುಪ್ರೀಂ ಕೋರ್ಟ್‌ನಲ್ಲಿ 241 ಹುದ್ದೆಗಳಿಗೆ ಅರ್ಜಿ ಆಹ್ವಾನ
Supreme Court Recruitment 2025: ದೇಶದ ಪ್ರತಿಷ್ಠಿತ ನ್ಯಾಯಾಲಯ ಸುಪ್ರೀಂ ಕೋರ್ಟ್‌ನಲ್ಲಿ ಖಾಲಿ ಇರುವ 241 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಅರ್ಜಿ ಸಲ್ಲಿಸಬಯಸುವವರು ಯಾವೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಮಾಸಿಕ ಸಂಬಳ ಎಷ್ಟಿರಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತೀಯ ಸುಪ್ರೀಂ ಕೋರ್ಟ್ ಖಾಲಿ ಇರುವ ಉದ್ಯೋಗಗಳನ್ನು ನೇಮಕ ಮಾಡಲು ಮುಂದಾಗಿದೆ. ಈ ಸಂಬಂಧ ಅರ್ಜಿಗಳನ್ನು ಆಹ್ವಾನ ಮಾಡಿದೆ. ಅರ್ಜಿ ಸಲ್ಲಿಕೆ ಆರಂಭ ಫೆಬ್ರವರಿ 05, 2025 ಅಂದರೆ ಇಂದಿನಿಂದ ಆರಂಭ ಆಗಿದ್ದು, ಕೊನೆ ದಿನಾಂಕ ಮಾರ್ಚ್ 03, 2025 ಆಗಿದೆ.

ಉದ್ಯೋಗದ ಹೆಸರು ಕಿರಿಯ ನ್ಯಾಯಾಲಯದ ಸಹಾಯಕ ಆಗಿದ್ದು, ಒಟ್ಟು 241 ಉದ್ಯೋಗಗಳು ಖಾಲಿ ಇವೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 72,040 ರೂಪಾಯಿ ಇರಲಿದೆ. ಅರ್ಜಿ ಸಲ್ಲಿಸಬಯಸುವವರು ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ಇಂಗ್ಲಿಷ್ ಟೈಪಿಂಗ್ ಸ್ಪೀಡ್ 35 ಡಬ್ಲು.ಪಿ.ಎಂ, ಕಂಪ್ಯೂಟರ್ ಜ್ಞಾನ ಇರಬೇಕು. ವಯೋಮಿತಿ 18 ರಿಂದ 30 ವರ್ಷಗಳು.
ಅರ್ಜಿ ಶುಲ್ಕದ ವಿಚಾರಕ್ಕೆ ಬಂದರೆ, ಜನರಲ್, ಒಬಿಸಿ, ಇಡಬ್ಲುಎಸ್ 1,000 ರೂಪಾಯಿ, ಎಸ್ಸಿ, ಎಸ್ಟಿ, ಮಾಜಿ ಸೈನಿಕ 250 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಆನ್ಲೈನ್ ಮೂಲಕ ಹಣ ಪಾವತಿ ಮಾಡಬೇಕು. ಆಯ್ಕೆ ಪ್ರಕ್ರಿಯೆಯ ವಿವಾರಕ್ಕೆ ಬಂದರೆ, ಲಿಖಿತ ಪರೀಕ್ಷೆ (100 ಪ್ರಶ್ನೆಗಳು), ಕಂಪ್ಯೂಟರ್ ಜ್ಞಾನ Objective Type Test (25 ಪ್ರಶ್ನೆಗಳು), ಕಂಪ್ಯೂಟರ್ ಟೈಪಿಂಗ್ (35 ಡಬ್ಲು.ಪಿ.ಎಂ ),
ಡಿಸ್ಕ್ರಿಪ್ಟಿವ್ ಟೈಪ್ ಪೇಪರ್ (Descriptive Test) ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆಗೆ https://cdn3.digialm.com/EForms/configuredHtml/32912/92214/Registration.html ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.
ಹೆಚ್ಚಿನ ಮಾಹಿತಿಯನ್ನು https://cdnbbsr.s3waas.gov.in/s3ec0490f1f4972d133619a60c30f3559e/uploads/2025/02/2025020434.pdf ಅಲ್ಲಿ ಪಡೆಯಬಹುದಾಗಿದೆ.
2,975 ಉದ್ಯೋಗಗಳ ಭರ್ತಿಗೆ ಯೋಜನೆ: ಇತ್ತೀಚಿನ ದಿನಗಳಲ್ಲಿ ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಲ್) ಅಕ್ಟೋಬರ್‌ನಲ್ಲಿ ಕರೆದಿದ್ದ ಅರ್ಜಿಗಳಮ್ನು ಇದೀಗ ನೇಮಕ ಮಾಡಿಕೊಳ್ಳಲು ಮುಂದಾಗಿದೆ. ಹಾಗಾದರೆ ಎಷ್ಟು ಹುದ್ದೆಗಳ ಖಾಲಿಯಿವೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕೆಪಿಟಿಸಿಲ್ 2024ರ ಅಕ್ಟೋಬರ್‌ನಲ್ಲಿ 2,975 ಉದ್ಯೋಗಗಳಿಗೆ ಅರ್ಜಿಗಳನ್ನು ಇಲಾಖೆ ಕರೆದಿತ್ತು. ಸದ್ಯ ಈ ಉದ್ಯೋಗಗಳನ್ನು ಏಪ್ರಿಲ್ ಒಳಗೆ ನೇಮಕ ಮಾಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಹೇಳಿದ್ದಾರೆ.
ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಉದ್ಯೋಗ ಭರ್ತಿ ಕುರಿತು ಮಾತನಾಡಿದ ಇಂಧನ ಸಚಿವ ಕೆ.ಜೆ ಜಾರ್ಜ್ ಅವರು, ಈಗಾಗಲೇ ಅರ್ಜಿ ಕರೆಯಲಾದ ಉದ್ಯೋಗಗಳನ್ನು ಶೀಘ್ರದಲ್ಲೇ ಅಂದರೆ ಏಪ್ರಿಲ್ ಒಳಗೆ ಭರ್ತಿ ಮಾಡಲಾಗುತ್ತದೆ. ಇಲಾಖೆಯಲ್ಲಿ ಖಾಲಿ ಇರುವಂತಹ ಕೆಲಸಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭ ಆಗಿದೆ. ಇಡೀ ರಾಜ್ಯದಲ್ಲಿ ಒಂದೇ ದಿನದಲ್ಲಿ ದೈಹಿಕ ಪರೀಕ್ಷೆ ನಡೆಸಲು ಅಧಿಕಾರಿಗಳ ಜೊತೆ ಚರ್ಚಿಸಿ ನಿರ್ಧರಿಸಲಾಗಿದೆ ಎಂದು ಹೇಳಿದರು.
ಈ ಹುದ್ದೆಗಳು ಭರ್ತಿಯಾದ ಮೇಲೆ ಎಇಇ, ಜೆಇ ಸೇರಿದಂತೆ ಇತರೆ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡು ಯೋಜನೆ ಹಾಕಿಕೊಳ್ಳಲಾಗಿದೆ. ಅಷ್ಟೇ ಅಲ್ಲದೇ ಮತ್ತಷ್ಟು ಉದ್ಯೋಗಗಳಿಗೆ ಅರ್ಜಿ ಆಹ್ವಾನ ಮಾಡುವ ಸಾಧ್ಯತೆಯಿದೆ. ಆ ಬಗ್ಗೆ ಈಗಲೇ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸಚಿವರು ಹೇಳಿದ್ದಾರೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು












Click it and Unblock the Notifications