Court Recruitment: ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೋರ್ಟ್‌ನಲ್ಲಿ 58 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Court Recruitment: 10 ಮತ್ತು 12ನೇ ತರಗತಿಯಲ್ಲಿ ಉತ್ತೀರ್ಣರಾದವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೋರ್ಟ್‌ನಿಂದ 58 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಯಾವೆಲ್ಲ ಹುದ್ದೆಗಳಿವೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯವು 58 ಪೀವನ್ ಮತ್ತು ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 2024ರ ಡಿಸೆಂಬರ್ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಕೊನೆಯ ದಿನಾಂಕ ಜನವರಿ 6, 2025 ಆಗಿದೆ.

ಪೀವನ್ ಹುದ್ದೆಗೆ ಅರ್ಜಿ ಸಲ್ಲಿಸಬಯಸುವವರು ಎಸ್‌ಎಸ್‌ಎಲ್‌ಸಿ ಮತ್ತು ಟೈಪಿಸ್ಟ್ ಹುದ್ದೆಗೆ ಪಿಯುಸಿ ಅಥವಾ ಡಿಪ್ಲೋಮಾ ವಿಧ್ಯಾರ್ಹತೆ ಹೊಂದಿರಬೇಕಾಗುತ್ತದೆ. ವೇತನ ಮತ್ತು ವಯೋಮಿತಿಯ ಮಾಹಿತಿಯನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೋರ್ಟ್‌ನ ಅಧಿಕೃತ ವೆಬ್‌ಸೈಟ್ bengalururural.dcourts.gov.inಗೆ ಭೇಟಿ ನೀಡಿ. ಬಳಿಕ ಖಾಲಿ ಹುದ್ದೆಯನ್ನು ಪರಿಶೀಲಿಸಿ ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಆಸಕ್ತರು 06 ಜನವರಿ 2025ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
28 ಪೀವನ್ ಮತ್ತು 30 ಟೈಪಿಸ್ಟ್ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೆಲಸದ ಸ್ಥಳ ಬೆಂಗಳೂರು ಆಗಿದೆ. ವಯಸ್ಸಿನ ಮಿತಿ ನೋಡುವುದಾದರೆ, ಪೀವನ್ ಹುದ್ದೆಗೆ 18-35 ವರ್ಷ, ಟೈಪಿಸ್ಟ್ ಹುದ್ದೆಗೆ 18-38 ವರ್ಷಗಳ ವಯೋಮಿತಿಯವರು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
60,000 ಉದ್ಯೋಗ ನೇಮಕಾತಿ: ವಿ.ಸೋಮಣ್ಣ ಅವರು ಬರೀ ಕೇಂದ್ರ ಸಚಿರಾದಾಗಿನಿಂದಲೂ ರಾಜ್ಯ ರೈಲ್ವೆ ಅಭಿವೃದ್ಧಿ ಕಾಮಗಾರಿ ಅಲ್ಲದೆ, ಉದ್ಯೋಗವಕಾಶ ಕಲ್ಪಿಸಿಕೊಡುವಲ್ಲಿಯೂ ಗಮನ ಸೆಳೆಯುತ್ತಿದ್ದಾರೆ. ಇದೀಗ ಶೀಘ್ರದಲ್ಲೇ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಇಲಾಖೆಯಲ್ಲಿ 60,000 ಉದ್ಯೋಗ ನೇಮಕಾತಿ ನಡೆಯಲಿದೆ. ಕನ್ನಡ ಭಾಷೆಯಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕದ ಯುವ ಸಮುದಾಯ ಈ ಅವಕಾಶಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಚಿವ ವಿ.ಸೋಮಣ್ಣ ಮನವಿ ಮಾಡಿದ್ದಾರೆ. ಶನಿವಾರ (ಡಿಸೆಂಬರ್ 28) ಬೆಂಗಳೂರು ಅರಮನೆ ಮೈದಾನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದ್ದ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ದೂರದೃಷ್ಟಿ ಯೋಜನೆ ರೂಪಿಸಿದ್ದಾರೆ. ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ರೈಲ್ವೇ ಮತ್ತು ಜಲಶಕ್ತಿ ಇಲಾಖೆಗೂ ಸಾವಿರಾರು ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಈ ಮೂಲಕ ದೇಶದ ಶ್ರೇಯೋಭಿವೃದ್ಧಿಯ ವಿಚಾರದಲ್ಲಿ ದೊಡ್ಡ ಹೆಜ್ಜೆ ಇರಿಸಿದ್ದಾರೆ ಎಂದು ತಿಳಿಸಿದರು.












Click it and Unblock the Notifications