ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Job News: ರಾಜ್ಯ ಸರ್ಕಾರದಡಿ ಕೆಲಸ ಮಾಡಲು ಬಯಸುವವರಿಗೆ ಗುಡ್ ನ್ಯೂಸ್‌ವೊಂದನ್ನು ನೀಡಲಾಗಿದೆ.ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಇಂದೇ (ಜನವರಿ 03, 2025) ಕೊನೇ ದಿನವಾಗಿದೆ. ಹಾಗಾದರೆ ಸಂಪೂರ್ಣ ಮಾಹಿತಿ ಇಲ್ಲಿದೆ ಗಮನಿಸಿ.
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಖಾಲಿ ಇರುವ ಉಲಿದ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಕಿರಿಯ ಸಹಾಯಕರ ಹುದ್ದೆ ಸೇರಿ ಇತರೆ ಉದ್ಯೋಗಗಳನ್ನು ಭರ್ತಿ ಮಾಡಲಾಗುತ್ತಿದೆ. ಈಗಾಗಲೇ ಈ ಹುದ್ದೆಗಳನ್ನು ಆಹ್ವಾನ ಮಾಡಲಾಗಿತ್ತು. ಆದರೆ ಇದೀಗ ವಯೋಮಿತಿ ಸಡಿಲಿಕೆ ಮಾಡಿದ ಹಿನ್ನೆಲೆ ಅರ್ಜಿಯನ್ನು ಮತ್ತೆ ಕರೆಯಲಾಗಿದೆ. ಆದ್ದರಿಂದ ಆಸಕ್ತರು ಇದೇ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಹಳಿಗೆ ಎಲ್ಲ ವರ್ಗದವರಿಗೂ 3 ವರ್ಷದ ವಯೋಮಿತಿಯನ್ನು ಹೆಚ್ಚಿಗೆ ಮಾಡಲಾಗಿದೆ. 2024ರ ಮಾರ್ಚ್‌ನಲ್ಲಿ ಈ ಉದ್ಯೋಗಗಳಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಅಧಿಸೂಚನೆಯಲ್ಲಿನ ಎಲ್ಲಾ ಹುದ್ದೆಗಳಗೆ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಕನಿಷ್ಠ 18 ವರ್ಷದಿಂದ ಗರಿಷ್ಠ 43 ವರ್ಷಗಳ ಒಳಗಿನವರಿಗೆ ಮಾತ್ರ ಅವಕಾಶ ನೀಡಲಾಗಿದೆ.
ಕಿರಿಯ ಸಹಾಯಕ ಸೇರಿ ಒಟ್ಟು 7 ಹುದ್ದೆಗಳು ಖಾಲಿಯಿವೆ. ಉಳಿಕೆ ಮೂಲ ವೃಂದಕ್ಕೆ 06, ಕಲ್ಯಾಣ ಕರ್ನಾಟಕಕ್ಕೆ 01 ಹುದ್ದೆ ಇದೆ. ಇನ್ನು ಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ವೇತನ ₹34,100ರಿಂದ ₹67,600 ಇರಲಿದೆ.ಇನ್ನು ವಯೋಮಿತಿ ಸಡಿಲಿಕೆ ವಿಚಾರಕ್ಕೆ ಬಂದರೆ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35- 38 ವರ್ಷ ಸಡಿಲಿಕೆ ಇರಲಿದೆ.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38- 41 ವರ್ಷ ಹಾಗೂ ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 40- 43 ವರ್ಷ ಸಡಿಲಿಕೆ ಇರಲಿದೆ. ಅರ್ಜಿ ಸಲ್ಲಿಸಬಯಸುವವರು https://cetonline.karnataka.gov.in ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.
ವಿ.ಸೋಮಣ್ಣ ಹೇಳಿದ್ದೇನು?: ವಿ.ಸೋಮಣ್ಣ ಅವರು ಬರೀ ಕೇಂದ್ರ ಸಚಿರಾದಾಗಿನಿಂದಲೂ ರಾಜ್ಯ ರೈಲ್ವೆ ಅಭಿವೃದ್ಧಿ ಕಾಮಗಾರಿ ಅಲ್ಲದೆ, ಉದ್ಯೋಗವಕಾಶ ಕಲ್ಪಿಸಿಕೊಡುವಲ್ಲಿಯೂ ಗಮನ ಸೆಳೆಯುತ್ತಿದ್ದಾರೆ. ಇದೀಗ ಶೀಘ್ರದಲ್ಲೇ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಇಲಾಖೆಯಲ್ಲಿ 60,000 ಉದ್ಯೋಗ ನೇಮಕಾತಿ ನಡೆಯಲಿದೆ. ಕನ್ನಡ ಭಾಷೆಯಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕದ ಯುವ ಸಮುದಾಯ ಈ ಅವಕಾಶಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಚಿವ ವಿ.ಸೋಮಣ್ಣ ಮನವಿ ಮಾಡಿದ್ದಾರೆ. ಶನಿವಾರ (ಡಿಸೆಂಬರ್ 28) ಬೆಂಗಳೂರು ಅರಮನೆ ಮೈದಾನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದ್ದ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ದೂರದೃಷ್ಟಿ ಯೋಜನೆ ರೂಪಿಸಿದ್ದಾರೆ. ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ರೈಲ್ವೇ ಮತ್ತು ಜಲಶಕ್ತಿ ಇಲಾಖೆಗೂ ಸಾವಿರಾರು ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಈ ಮೂಲಕ ದೇಶದ ಶ್ರೇಯೋಭಿವೃದ್ಧಿಯ ವಿಚಾರದಲ್ಲಿ ದೊಡ್ಡ ಹೆಜ್ಜೆ ಇರಿಸಿದ್ದಾರೆ ಎಂದು ತಿಳಿಸಿದರು.
ಕೇಂದ್ರ ಸೇವೆಯಲ್ಲಿ ಶೇಕಡ 20ರಿಂದ 30 ಮಂದಿ ಕನ್ನಡಿಗರು ಇರಬೇಕು ಎಂಬುದು ನಮ್ಮ ಆಸೆಯಾಗಿದೆ. ಶೀಘ್ರದಲ್ಲೇ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಇಲಾಖೆಯಲ್ಲಿ 60,000 ಉದ್ಯೋಗ ನೇಮಕಾತಿ ನಡೆಯಲಿದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆಯಬೇಕು. ನಾನು ಕೇಂದ್ರ ಸಚಿವನಾಗುವ ಮೊದಲು ವಿನಯ್ ಗುರೂಜಿ ಅವರು ಕನ್ನಡ ಭಾಷೆಯಲ್ಲಿ ಕೇಂದ್ರ ಸೇವೆ ಪರೀಕ್ಷೆ ಬರೆಯಲು ಅನುಕೂಲ ಕಲ್ಪಿಸಬೇಕೆಂದು ಮನವಿ ಮಾಡಿದ್ದರು. ಕನ್ನಡಿಗರ ಹಿತದೃಷ್ಟಿಯಿಂದ ಸಚಿವನಾದ ಕೂಡಲೇ ಕನ್ನಡಿಗರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಿದೆ ಎಂದು ಹೇಳಿದರು.












Click it and Unblock the Notifications