ಸಹಾಯಕ ತಾಂತ್ರಿಕ ಸಿಬ್ಬಂದಿ ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಮೇ 26: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಆರೋಗ್ಯ ವಲಯದಲ್ಲಿ ಹೆಚ್ಚಿನ ಪರಿಣತ ಸಹಾಯಕ ತಾಂತ್ರಿಕ ಸಿಬ್ಬಂದಿಯ ಅವಶ್ಯಕತೆ ಇರುವುದರಿಂದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿಯಲ್ಲಿ ಸುಮಾರು 3 ತಿಂಗಳ ಉಚಿತ ತರಬೇತಿಯನ್ನು ಅಲ್ಪಾವಧಿ ಕೋರ್ಸ್‌ಗಳಲ್ಲಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎಸ್‌‌.ಎಸ್‌.ಎಲ್‌.ಸಿ. ಮತ್ತು 8ನೇ ತರಗತಿ ಓದಿದವರಿಗೆ ಜನರಲ್ ಡ್ಯೂಟಿ ಅಸಿಸ್ಟೆಂಟ್, ಜನರಲ್ ಡ್ಯೂಟಿ ಅಸಿಸ್ಟೆಂಟ್ ಅಡ್ವಾನ್ಸ್ಡ್ ( ಕ್ರಿಟಿಕಲ್ ಕೇರ್), ಹೋಂ ಹೆಲ್ತ್ ಏಡ್, ಪಿಯುಸಿಯಲ್ಲಿ ವಿಜ್ಞಾನ ಕೋರ್ಸ್ ಮುಗಿಸಿದವರಿಗೆ ಎಮರ್ಜೆನ್ಸಿ ಮೆಡಿಕಲ್ ಟೆಕ್ನಿಷಿಯನ್ - ಬೇಸಿಕ್, ಲೆಬೊಟಾಮಿಸ್ಟ್, ಮೆಡಿಕಲ್ ರೆಕಾರ್ಡ್ ಅಸಿಸ್ಟೆಂಟ್ ಮತ್ತು ಎಸ್‌.ಎಸ್‌.ಎಲ್‌.ಸಿ./ಐ.ಟಿ.ಐ/ಡಿಪ್ಲೋಮಾ ಓದಿದವರಿಗೆ ಮೆಡಿಕಲ್ ಎಕ್ವಿಪ್ಮೆಂಟ್ ಟೆಕ್ನಾಲಜಿ ಅಸಿಸ್ಟೆಂಟ್ ಕೋರ್ಸ್‌ಗಳಲ್ಲಿ ತರಬೇತಿ ನೀಡಲಿದ್ದಾರೆ.

Applications Invited For Assistant Technical Staff Course

ಕೋರ್ಸ್‌ಗಳಲ್ಲಿ ತರಬೇತಿ ಪಡೆಯಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳನ್ನು ದಿನಾಂಕ ಇದೇ ಮೇ31ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ಇ- ಮೇಲ್ ವಿಳಾಸ: [email protected] ಗೆ ಕಳುಹಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9731124693 ಅಥವಾ 9945817237 ಸಂಪರ್ಕಿಸಬಹುದಾಗಿದೆ ಎಂದು ಡಿ.ಎಲ್. ಕೃಷ್ಣಮೂರ್ತಿ , ಬೆಂಗಳೂರು ನಗರ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+