ಹಾವೇರಿ; ಕೆಲಸ ಖಾಲಿ ಇದೆ; ಜೂನ್ 17ರೊಳಗೆ ಅರ್ಜಿ ಹಾಕಿ
ಹಾವೇರಿ, ಜೂನ್ 15; ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ಪ್ರೌಢ ಮತ್ತು ಪ್ರಾಥಮಿಕ ವಿಭಾಗದ ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು 17/6/2021ರ ತನಕ ಅರ್ಜಿಗಳನ್ನು ಸಲ್ಲಿಸಬಹುದು.
ಪ್ರೌಢಶಾಲಾ ವಿಭಾಗದಲ್ಲಿ 14, ಪ್ರಾಥಮಿಕ ಶಾಲಾ ವಿಭಾಗದಲ್ಲಿ 5 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ನೇರ ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಆರ್. ಸಿ. ಐ ಪ್ರಕಾರ ನಿಗದಿಪಡಿಸಿರುವ ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಮತ್ತು ಡಿ. ಇಡಿ, ಪದವಿ ಮತ್ತು ಬಿ. ಇಡಿ ಶಿಕ್ಷಣ ಪೂರ್ಣಗೊಳಿಸಿರಬೇಕು. ಕಾರ್ಯಾನುಭವ ಉಳ್ಳವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅರ್ಜಿಯ ಜೊತೆ ಶೈಕ್ಷಣಿಕ ದಾಖಲೆಗಳ ಝೆರಾಕ್ಸ್ ಪ್ರತಿಗಳನ್ನು ಸಲ್ಲಿಕೆ ಮಾಡಬೇಕು.

ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ. ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸಲ್ಲಿಕೆ ಮಾಡಬೇಕು. 17/6/2021ರ ಸಂಜೆ 5.30 ಅರ್ಜಿಗಳನ್ನು ಸಲ್ಲಿಕೆ ಮಾಡಲು ಕೊನೆಯ ದಿನವಾಗಿದೆ.
ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ; ಉಪ ನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಹಾವೇರಿ.
ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಕಲಬುರಗಿ ಜಿಲ್ಲೆಯ ತಾಲೂಕು ಬಿ. ಆರ್. ಸಿ. ಕೇಂದ್ರಗಳಲ್ಲಿ ಖಾಲಿಯಿರುವ ಬಿ. ಐ. ಇ. ಆರ್. ಟಿ. ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಜೂನ್ 19ರ ತನಕ ಆಸಕ್ತರು ಅರ್ಜಿಗಳನ್ನು ಸಲ್ಲಿಸಬೇಕು.
ನೇರ ಗುತ್ತಿಗೆಯಡಿಯಲ್ಲಿ ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಸಮಗ್ರ ಶಿಕ್ಷಣ ಕರ್ನಾಟಕ ಕಲಬುರಗಿ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಹೇಳಿದ್ದಾರೆ.












Click it and Unblock the Notifications