ಕಲಬುರಗಿ; ಕೆಲಸ ಖಾಲಿ ಇದೆ, ಜೂನ್ 19ರೊಳಗೆ ಅರ್ಜಿ ಹಾಕಿ
ಕಲಬುರಗಿ, ಜೂನ್ 14; ಕಲಬುರಗಿ ಜಿಲ್ಲೆಯ ತಾಲೂಕು ಬಿ. ಆರ್. ಸಿ. ಕೇಂದ್ರಗಳಲ್ಲಿ ಖಾಲಿಯಿರುವ ಬಿ. ಐ. ಇ. ಆರ್. ಟಿ. ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಜೂನ್ 19ರ ಸಂಜೆ 5 ಗಂಟೆಯೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.
2021-22ನೇ ಸಾಲಿನಲ್ಲಿ ನೇರ ಗುತ್ತಿಗೆಯಡಿಯಲ್ಲಿ ಬಿ. ಐ. ಇ. ಆರ್. ಟಿ. (ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕ) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಸಮಗ್ರ ಶಿಕ್ಷಣ ಕರ್ನಾಟಕ ಕಲಬುರಗಿ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಹೇಳಿದ್ದಾರೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಪ್ರಾಥಮಿಕ ವಿಭಾಗಕ್ಕೆ ಪ್ರಾಥಮಿಕ ಶಾಲಾ ಶಿಕ್ಷಕರಾಗಲು ಇರುವ ವಿದ್ಯಾರ್ಹತೆಯ ಜೊತೆಗೆ ವಿಶೇಷ ಡಿ. ಇ. ಡಿ. ಅಥವಾ ಎಮ್. ಸಿ. ಟಿ. ಸಿ. ವಿದ್ಯಾರ್ಹತೆ ಮತ್ತು ಆರ್. ಸಿ. ಐ. ಪ್ರಮಾಣಪತ್ರ ಹೊಂದಿರಬೇಕು.

ಪ್ರೌಢಶಾಲಾ ವಿಭಾಗಕ್ಕೆ ಪ್ರೌಢಶಾಲಾ ಶಿಕ್ಷಕರಾಗಲು ಇರುವ ವಿದ್ಯಾರ್ಹತೆಯ ಜೊತೆಗೆ ವಿಶೇಷ ಬಿ. ಇಡಿ. ವಿದ್ಯಾರ್ಹತೆ ಮತ್ತು ಆರ್. ಸಿ. ಐ. ಪ್ರಮಾಣ ಪತ್ರ ಹೊಂದಿರಬೇಕು.
ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣ ಹತ್ತಿರದ ರಾಜಾಪುರ ರಸ್ತೆಯಲ್ಲಿರುವ ಉಪನಿರ್ದೇಶಕರು ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಬೇಕು.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯಕ ಯೋಜನಾ ಸಮನ್ವಯಾಧಿಕಾರಿ ಬಸನಗೌಡ ಬಿರಾದಾರ ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 8660995026.












Click it and Unblock the Notifications