ಹಾಸನ; ಜನರಲ್ ಫಿಜಿಶಿಯನ್ ಹುದ್ದೆಗೆ ಅರ್ಜಿ ಆಹ್ವಾನ
ಹಾಸನ, ಡಿಸೆಂಬರ್ 17: ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ ಜನರಲ್ ಫಿಜಿಶಿಯನ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 23ರ ಸಂಜೆ 4ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಎನ್. ಪಿ. ಡಿ. ಸಿ. ಎಸ್/ ಎನ್. ಪಿ. ಎಚ್. ಸಿ. ಇ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ರಾಷ್ಟೀಯ ಆರೋಗ್ಯ ಅಭಿಯಾನದ ಷರತ್ತು ಮತ್ತು ನಿಬಂಧನೆಗೊಳಪಟ್ಟು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳ ವಯೋಮಿತಿ 40 ವರ್ಷ ಮೀರರಬಾರದು.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಂಬಿಬಿಎಸ್ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮೆಡಿಕಲ್ ಕೌನ್ಸಿಲ್ ಅಫ್ ಇಂಡಿಯಾದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.

ಒಟ್ಟು 17 ಹುದ್ದೆಗಳು ಖಾಲಿ ಇದ್ದು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಎಲ್ಲ ಧೃಡೀಕೃತ ದಾಖಲೆಗಳೊಂದಿಗೆ ಅರ್ಜಿಯನ್ನು ಡಿಸೆಂಬರ್ 23ರಂದು ಸಂಜೆ 4 ಗಂಟೆ ಒಳಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ವಿದ್ಯಾರ್ಹತೆ ಅನುಭವ ಮೀಸಲಾತಿ ಆದ್ಯತೆ ಮತ್ತು ಹೆಚ್ಚಿನ ಮಾಹಿತಿಗಾಗಿ ಕಾರ್ಯಲಯದ ಅವಧಿಯಲ್ಲಿ ಜಿಲ್ಲಾ ಎನ್. ಸಿ. ಡಿ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08172-245110.












Click it and Unblock the Notifications