• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಹಾಸನ; ಜನರಲ್‍ ಫಿಜಿಶಿಯನ್ ಹುದ್ದೆಗೆ ಅರ್ಜಿ ಆಹ್ವಾನ

|

ಹಾಸನ, ಡಿಸೆಂಬರ್ 17: ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ ಜನರಲ್‍ ಫಿಜಿಶಿಯನ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 23ರ ಸಂಜೆ 4ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಎನ್. ಪಿ. ಡಿ. ಸಿ. ಎಸ್/ ಎನ್. ಪಿ. ಎಚ್. ಸಿ. ಇ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ರಾಷ್ಟೀಯ ಆರೋಗ್ಯ ಅಭಿಯಾನದ ಷರತ್ತು ಮತ್ತು ನಿಬಂಧನೆಗೊಳಪಟ್ಟು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳ ವಯೋಮಿತಿ 40 ವರ್ಷ ಮೀರರಬಾರದು.

ಗದಗದಲ್ಲಿ ಕೆಲಸ ಖಾಲಿ ಇದೆ; ಜನವರಿ 11ರೊಳಗೆ ಅರ್ಜಿ ಹಾಕಿ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಂಬಿಬಿಎಸ್ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮೆಡಿಕಲ್ ಕೌನ್ಸಿಲ್ ಅಫ್ ಇಂಡಿಯಾದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.

ಬಿಇಎಲ್ ನೇಮಕಾತಿ 2020: 137 ಟ್ರೈನಿ ಇಂಜಿನಿಯರ್ ಹುದ್ದೆಗಳಿವೆ

ಒಟ್ಟು 17 ಹುದ್ದೆಗಳು ಖಾಲಿ ಇದ್ದು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಎಲ್ಲ ಧೃಡೀಕೃತ ದಾಖಲೆಗಳೊಂದಿಗೆ ಅರ್ಜಿಯನ್ನು ಡಿಸೆಂಬರ್ 23ರಂದು ಸಂಜೆ 4 ಗಂಟೆ ಒಳಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.

ವಿವಾಹಿತೆ ಎಂಬ ಕಾರಣಕ್ಕೆ ಮಗಳಿಗೆ ಅನುಕಂಪದ ನೇಮಕಾತಿ ನಿರಾಕರಿಸುವಂತಿಲ್ಲ: ಹೈಕೋರ್ಟ್

ವಿದ್ಯಾರ್ಹತೆ ಅನುಭವ ಮೀಸಲಾತಿ ಆದ್ಯತೆ ಮತ್ತು ಹೆಚ್ಚಿನ ಮಾಹಿತಿಗಾಗಿ ಕಾರ್ಯಲಯದ ಅವಧಿಯಲ್ಲಿ ಜಿಲ್ಲಾ ಎನ್. ಸಿ. ಡಿ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08172-245110.

English summary
Applications invited for the general physician post at Hassan. Candidates can submit applications till December 23, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X