ಬಳ್ಳಾರಿಯಲ್ಲಿ ಕೆಲಸ ಖಾಲಿ ಇದೆ: ಡಿ.31ರೊಳಗೆ ಅರ್ಜಿ ಹಾಕಿ
ಬಳ್ಳಾರಿ, ಡಿಸೆಂಬರ್ 27: ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕು ವ್ಯಾಪ್ತಿಯ ಸೋಮಸಮುದ್ರ ಗ್ರಾಮದಲ್ಲಿನ ಸರಕಾರಿ ಪ್ರೌಢಶಾಲೆಗೆ ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 31ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
2022-23ನೇ ಸಾಲಿನ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯರು ಮಾಹಿತಿ ನೀಡಿದ್ದಾರೆ.
ಆಂಗ್ಲ, ಹಿಂದಿ, ಕಲಾ, ಸಿಬಿಝೆಡ್ ಸೇರಿದಂತೆ ನಾಲ್ಕು ವಿಷಯಗಳಿಗೆ 4 ಹುದ್ದೆಗಳಿವೆ. ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳನ್ನು ಪದವಿ ಮತ್ತು ಬಿ.ಎಡ್‍ಗಳಲ್ಲಿ ಗಳಸಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಟಿಇಟಿ ಉತ್ತೀರ್ಣ ಆದವರಿಗೆ ಆದ್ಯತೆ ನೀಡಲಾಗುತ್ತದೆ.

ಆಸಕ್ತ, ಅರ್ಹ ಅಭ್ಯರ್ಥಿಗಳು ಡಿಸೆಂಬರ್ 31ರೊಳಗೆ ತಮ್ಮ ದೃಢೀಕೃತ ಅಂಕಪಟ್ಟಿಗಳೊಂದಿಗೆ ಅರ್ಜಿಗಳನ್ನು ಮುಖ್ಯೋಪಾಧ್ಯಾಯರು ಸರಕಾರಿ ಉನ್ನತೀಕರಿಸಿದ ಪ್ರೌಢಶಾಲೆ. ಸೋಮಸಮುದ್ರ ಇವರಿಗೆ ಖುದ್ದಾಗಿ ಅಥವ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಶಾಲಾ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಬಹುದಾಗಿದೆ.
ಜಿಲ್ಲಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ; ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2023-24ನೇ ಸಾಲಿನಲ್ಲಿ ಜಲ ಸಂಜೀವಿನಿ ಯೋಜನೆಯ ಮೇಲ್ವಿಚಾರಣೆ ಮಾಡಲು ಜಲ ಸಂಜೀವಿನಿ ಜಿಲ್ಲಾ ಸಂಯೋಜಕರನ್ನು ಜಿಲ್ಲಾ ಮಟ್ಟದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನೇಮಿಸಿಕೊಳ್ಳಲಾಗುತ್ತಿದೆ.
ವಿಜಯನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣರಾವ್ ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಜಲಾನಯನ ಆಧಾರಿತ ತಂತ್ರಜ್ಞಾನಗಳನ್ನು ಬಳಸಿಕೊಂಡು ಯೋಜನೆಯನ್ನು ಅನುಷ್ಠಾನಗೊಳಿಸುವ ಸಲುವಾಗಿ ಸರ್ಕಾರದ ನಿರ್ದೇಶನದಂತೆ ವಿಜಯನಗರ ಜಿಲ್ಲೆಗೆ ಒಬ್ಬ ಜಲಸಂಜೀವಿನಿ ಜಿಲ್ಲಾ ಸಂಯೋಜಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಆಸಕ್ತರು ಅರ್ಜಿಯನ್ನು ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಕಾರ್ಯಾಲಯ, ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ ಇಲಾಖೆಗಳ ಜಿಲ್ಲಾ ಕಾರ್ಯಾಲಯಗಳಲ್ಲಿ ಪಡೆದು ಭರ್ತಿ ಮಾಡಿ ವಿಜಯನಗರ ಜಿಲ್ಲಾ ಪಂಚಾಯತ್ ಕಾರ್ಯಾಲಯಕ್ಕೆ ಸಲ್ಲಿಸಬಹುದಾಗಿದೆ.
ಅರ್ಹತೆಗಳು: ನಿವೃತ್ತಿ ಹೊಂದಿರುವ ಅಧಿಕಾರಿಗಳು ಬಿಎಸ್‍ಸಿ (ಅಗ್ರಿಕಲ್ಚರ್) ಅಥವಾ ಬಿಟೆಕ್ (ಅಗ್ರಿಕಲ್ಚರಲ್ ಇಂಜಿನಿಯರಿಂಗ್) ಪದವಿಧರರಾಗಿರಬೇಕು, ಕೃಷಿ, ಜಲಾನಯನ ಅಭಿವೃದ್ದಿ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿಗಳು, ಸಹಾಯಕ ಕೃಷಿ ನಿರ್ದೇಶಕರ ಹುದ್ದೆಯಲ್ಲಿ ನಿವೃತ್ತಿ ಹೊಂದಿರಬೇಕು.
ಸರ್ಕಾರೇತರ ಅಥವಾ ಇತರೆ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ಬಿಎಸ್‍ಸಿ (ಅಗ್ರಿಕಲ್ಚರ್) ಅಥವಾ ಬಿಟೆಕ್ (ಅಗ್ರಿಕಲ್ಚರಲ್ ಇಂಜಿನಿಯರಿಂಗ್) ಪದವಿಧರರು ಅಥವಾ GIS ತಂತ್ರಾಂಶದ ಪರಿಣಿತಿ ಹೊಂದಿರಬೇಕು. ಜಲಾನಯನ ಪ್ರದೇಶದ ಅಭಿವೃದ್ದಿ ದೂರ ಸಂವೇದಿ ಮತ್ತು ಜಿಯೋ ಸ್ಪೇಶಿಯಲ್ ಆಧಾರಿತ ತಂತ್ರಜ್ಞಾನ ಬಳಕೆಯ ಅನುಭವ ಹೊಂದಿರಬೇಕು.












Click it and Unblock the Notifications