Metro Recruitment: ಮೆಟ್ರೋದಲ್ಲಿ ಮಾಸಿಕ ₹65,000 ವೇತನದ ಹುದ್ದೆಗೆ ಅರ್ಜಿ ಆಹ್ವಾನ
Metro Recruitment: ಮೆಟ್ರೋದಲ್ಲಿ ಖಾಲಿಯಿರುವ 13 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಅರ್ಜಿ ಅರ್ಜಿ ಸಲ್ಲಿಕೆ ಕೊನೇ ದಿನಾಂಕ, ಹುದ್ದೆಯ ಹೆಸರೇನು? ನೇಮಕಾತಿ ಪ್ರಕ್ರಿಯೆ ಹಾಗೂ ಆಯ್ಕೆ ಆದವರಿಗೆ ಮಾಸಿಕ ವೇತನ ಎಷ್ಟಿರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ನೀಡಿದೆ. ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಜನವರಿ 28, 2025 ಆಗಿದ್ದು, ಇನ್ನೊಂದೇ ದಿನ ಬಾಕಿಯಿದೆ. ಆದ್ದರಿಂದ ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಕೆ ಮಾಡಬಹುದು.

ಸಿಸ್ಟಮ್ ಸೂಪರ್‌ವೈಸರ್, ಸಿಸ್ಟಮ್ ಟೆಕ್ನಿಷಿಯನ್ ಸೇರಿ ಒಟ್ಟು 13 ಹುದ್ದೆಗಳು ಖಾಲಿಯಿದ್ದು, ಇವುಗಳಿಗೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 40 ವರ್ಷಗಳಾಗಿರಬೇಕು. ಅಂಚೆ ಅಥವಾ ಇ-ಮೇಲ್ ಅರ್ಜಿ ಭರ್ತಿ ಮಾಡಿ ಕಳುಹಿಸಬಹುದಾಗಿದೆ.
ಅರ್ಜಿ ಸಲ್ಲಿಸುವವರು ಐಟಿಐ, ಡಿಪ್ಲೊಮಾ, ಬಿಇ/ಬಿ.ಟೆಕ್ ವಿದ್ಯಾರ್ಹತೆ ಪಡೆದಿರಬೇಕಾಗುತ್ತದೆ. ಅಭ್ಯರ್ಥಿಗಳಿಗೆ ನೇರ ಸಂದರ್ಶನ ಇರಲಿದ್ದು, ಸಂದರ್ಶನದಲ್ಲಿ ಆಯ್ಕೆಯಾದವರಿಗೆ ಉದ್ಯೋಗಕ್ಕೆ ಹಾಜರಾಗಬಹುದು. ಇದಕ್ಕೂ ಮುನ್ನ ಅಭ್ಯರ್ಥಿಗಳಿಗೆ ವೈದ್ಯಕೀಯ ಫಿಟ್ನೆಸ್ ಪರೀಕ್ಷೆ ನಡೆಸಲಾಗುವುದು. ಆಸಕ್ತರು ಈ ಕೂಡಲೇ ಅರ್ಜಿಯನ್ನ ದೆಹಲಿ ಮೆಟ್ರೋ ವಿಳಾಸಕ್ಕೆ ಕಳಿಸಬಹುದು ಅಥವಾ ಇಮೇಲ್ ಮಾಡಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ವೇತನ 46,000-65,000 ರೂಪಾಯಿಗಳವರೆಗೂ ವೇತನ ಇರಲಿದೆ.
350 ಹುದ್ದೆಗಳಿಗೆ ಅರ್ಜಿ ಆಹ್ವಾನ: ಖಾಲಿಯಿರುವ 350 ಹುದ್ದೆಗಳಿಗೆ ಬಿಇಎಲ್ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಅರ್ಜಿ ಸಲ್ಲಿಸಬಯಸುವವರು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಬಳ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ತಾಂತ್ರಿಕ ವಿಭಾಗದಲ್ಲಿ ವ್ಯಾಸಂಗ ಮಾಡಿದವರಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು ಖಾಲಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ವಿಜ್ಞಾನ ವಿಭಾಗದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅಲ್ಲದೇ ಬಿಇಎಲ್ ಕಂಪನಿಯು ಪ್ರತಿಷ್ಠಿತಿ ಸಂಸ್ಥೆ ಆಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎಲ್ಲಾ ಸರ್ಕಾರಿ ಸೌಕರ್ಯಗಳು ಸರಿಯಾದ ಸಮಯಕ್ಕೆ ಲಭ್ಯ ಆಗಲಿವೆ.
ವರ್ಗವಾರು ಹುದ್ದೆಗಳು ವರ್ಗೀಕರಣ: ಸಾಮಾನ್ಯ 143, ಇಡಬ್ಲುಎಸ್ 35, ಒಬಿಸಿ 94, ಎಸ್ಸಿ 52 ಹಾಗೂ ಎಸ್ಟಿ ವರ್ಗದವರಿಗೆ 26 ಉದ್ಯೋಗಗಳು ಖಾಲಿಯಿವೆ. ಉದ್ಯೋಗದ ಹೆಸರು ಪ್ರೊಬೇಷನರಿ ಇಂಜಿನಿಯರ್ ಆಗಿದ್ದು, ಪ್ರೊಬೇಷನರಿ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್)- 200, ಪ್ರೊಬೇಷನರಿ ಇಂಜಿನಿಯರ್ (ಮೆಕನಿಕಲ್)- 150 ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 40,000ದಿಂದ 1,40,000 ರೂಪಾಯಿವರೆಗೂ ಇರಲಿದೆ. ಅರ್ಜಿ ಸಲ್ಲಿಸಬಯಸುವವರು ಹೆಚ್ಚಿನ ಬಿಇಎಲ್ ಸಂಸ್ಥೆಯ https://bel-india.in/ ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.












Click it and Unblock the Notifications