ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ, 15 ಸಾವಿರ ರೂ. ಸ್ಟೈಫಂಡ್

ಬೆಂಗಳೂರು, ಅಕ್ಟೋಬರ್ 27; ಪತ್ರಿಕೋದ್ಯಮ ಪದವಿ/ ಸ್ನಾತಕೋತ್ತರ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ, ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಲು ನವೆಂಬರ್ 30 ಕೊನೆಯ ದಿನವಾಗಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ 2022-23ನೇ ಸಾಲಿನಲ್ಲಿ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಕರೆದಿದೆ.

ಪತ್ರಿಕೋದ್ಯಮ ಪದವಿ/ ಸ್ನಾತಕೋತ್ತರ ಪದವೀಧರರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಿಂದ ಅರ್ಜಿ ಪಡೆದು ಕಚೇರಿಯಲ್ಲಿಯೇ ಸಲ್ಲಿಸಬೇಕು.

Applications Invited For One Year Apprenticeship Training

ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಹಾಗೂ ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಈ ಮೊದಲು ಅಪ್ರೆಂಟಿಸ್ ತರಬೇತಿ ಪಡೆದವರಿಗೆ ಅವಕಾಶವಿಲ್ಲ.

ಬಳ್ಳಾರಿ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಒಬ್ಬರು ಹಾಗೂ ಪರಿಶಿಷ್ಟ ಪಂಗಡದ ಒಬ್ಬರನ್ನು ಹಾಗೂ ವಿಜಯನಗರ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಒಬ್ಬರು ಹಾಗೂ ಪರಿಶಿಷ್ಟ ಪಂಗಡದ ಒಬ್ಬರನ್ನು ತರಬೇತಿಗೆ ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ತರಬೇತಿಯು ಜನವರಿ 2023ರಿಂದ ಡಿಸೆಂಬರ್ ತನಕ ಒಂದು ವರ್ಷದ ಅವಧಿಯದ್ದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 15 ಸಾವಿರ ರೂಪಾಯಿ ಸ್ಟೈಫಂಡ್ ನೀಡಲಾಗುವುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಳ್ಳಾರಿ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08392-275198.

ವಿಜಯನಗರ ಜಿಲ್ಲೆಯ ಹೊಸಪೇಟೆಯ ತಾಲೂಕು ಕಚೇರಿ ಆವರಣದಲ್ಲಿರುವ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು.

ತರಬೇತಿಗೆ ಆಹ್ವಾನ; ಶಿವಮೊಗ್ಗ ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2022-23ನೇ ಸಾಲಿನ ಜಿಲ್ಲಾ ವಲಯದ ತರಬೇತಿ ಹಆಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ ಉಪಕರಣ ವಿತರಣೆ ಕಾರ್ಯಕ್ರಮದಡಿ ಜಿಲ್ಲೆಯ ವ್ಯಾಪ್ತಿಗೊಳಪಡುವ ಗ್ರಾಮೀಣ ಪ್ರದೇಶದ 18 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳಿಗೆ 270 ಗಂಟೆಗಳ ಅವಧಿಯ ಬೇಸಿಕ್ ಹೊಲಿಗೆ ತರಬೇತಿ ನೀಡುತ್ತಿದೆ.

ಆಯಾ ತಾಲೂಕಿನ ನಿರ್ದಿಷ್ಟಪಡಿಸಿದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ತರಬೇತಿ ಆಯೋಜಿಸಲಾಗಿದ್ದು, ತರಬೇತಿ ನೀಡಲಿರುವ ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸ್ವಾಮ್ಯಕ್ಕೊಳಪಡುವ ಅಥವಾ ಅನುದಾನ ಪಡೆಯುತ್ತಿರುವ ಸಂಸ್ಥೆಗಳಿಗೆ ಮೊದಲ ಆದ್ಯತೆ ನೀಡುವುದರಿಂದ ಈ ಸಂಬಂಧ ದಾಖಲೆಯನ್ನು ಒದಗಿಸುವುದು, ತರಬೇತಿ ನೀಡುವ ಸಂಸ್ಥೆಯು ಸ್ಥಳೀಯ ಸಂಸ್ಥೆಯಾಗಿದ್ದು, ತರಬೇತಿಗಳನ್ನು ನೀಡಲು ಎಲ್ಲಾ ಮೂಲಭೂತ ಸೌಲಭ್ಯವನ್ನು ಹೊಂದಿರಬೇಕು.

ಜಿಲ್ಲೆಯಲ್ಲಿ ಕನಿಷ್ಠ 5 ವರ್ಷ ಹೊಲಿಗೆ ತರಬೇತಿಯನ್ನು ನೀಡಿ ಅನುಭವ ಹೊಂದಿರುವ ಮತ್ತು ಜಿಲ್ಲೆಯಲ್ಲಿ ತರಬೇತಿ ನೀಡಲು ಅಗತ್ಯ ಕಾರ್ಯಜಾಲವನ್ನು ಹೊಂದಿರಬೇಕು ಮತ್ತು ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಹೊಲಿಗೆ ತರಬೇತಿಗಳನ್ನು ನೀಡಿರುವ ಅನುಭವ ಹೊಂದಿರಬೇಕು. ತರಬೇತಿ ನೀಡಲು ಅಗತ್ಯ ಹೊಲಿಗೆ ಯಂತ್ರಗಳು ಮತ್ತು ನುರಿತ ಶಿಕ್ಷಕರನ್ನು ಹೊಂದಿರಬೇಕು.

ಈ ಎಲ್ಲಾ ಅರ್ಹತೆಯನ್ನು ಹೊಂದಿರುವ ಸಂಸ್ಥೆಗಳು 4/11/2022 ರೊಳಗಾಗಿ ಉಪನಿರ್ದೇಶಕರ ಕಚೇರಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, 3ನೇ ಮಹಡಿ, ಶಿವಪ್ಪ ನಾಯಕ ಕಚೇರಿ ಸಂಕೀರ್ಣ, ನೆಹರೂ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಸಂಪರ್ಕಿಸುವಂತೆ ಸೂಚಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+