ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ, ಅರ್ಜಿ ಸಲ್ಲಿಕೆಗೆ ಅರ್ಹತೆಗಳ ವಿವರಗಳು

ಕೊಪ್ಪಳ, ಜನವರಿ 27: ಕೊಪ್ಪಳದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಜಿಲ್ಲೆಯಲ್ಲಿ ಹುದ್ದೆಗಳ ಭರ್ತಿ, ತರಬೇತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು, ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು, ವಿವರಗಳು ಇಲ್ಲಿವೆ. ಆಸಕ್ತರು ಉದ್ಯೋಗದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

ಅಡುಗೆ ಸಿಬ್ಬಂದಿಗಳ ನೇಮಕಾತಿ. ಬಿಸರಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೈನಳ್ಳಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ವಯೋನಿವೃತ್ತಿಯಿಂದ ಹಾಗೂ ರಾಜೀನಾಮೆಯಿಂದ ತೆರವಾಗಿರುವ ಅಡುಗೆ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.

Applications Invited For Recruitment In Koppal Qualifications Listed

ಮೈನಳ್ಳಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಅಡುಗೆದಾರರ (ಸಾಮಾನ್ಯ) 1 ಮತ್ತು ಸಹಾಯಕ ಅಡುಗೆದಾರರ (1 ಪರಿಶಿಷ್ಟ ಜಾತಿ ಹಾಗೂ 1 ಒಬಿಸಿ (ಅ) ) 2 ಹುದ್ದೆಗಳು ಸೇರಿ ಒಟ್ಟು 3 ಹುದ್ದೆಗಳು ಖಾಲಿಯಿದ್ದು, ಅರ್ಹ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬೇಕು.

ವಿಧವೆಯರು, ಸಂಕಷ್ಟದಲ್ಲಿರುವವರಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು 30 ವರ್ಷ ಮೇಲ್ಪಟ್ಟಿರಬೇಕು. ಅಡುಗೆಯನ್ನು ಶುಚಿ-ರುಚಿಯಿಂದ ಮಾಡುವ ಅನುಭವ ಹೊಂದಿರಬೇಕು. ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಂತರಾಗಿರಬೇಕು.
ಅಕ್ಷರ ದಾಸೋಹ ಕಾರ್ಯಕ್ರಮದಡಿ ಅಡುಗೆ ಸಿಬ್ಬಂದಿಯವರಿಗೆ ವಹಿಸಿದ ಜವಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುವುದು ಹಾಗೂ ವಿಧಿಸಲಾದ ಸಾಮಾನ್ಯ ಷರತ್ತುಗಳು/ ನಿಬಂಧನೆಗಳಿಗೆ ಬದ್ಧರಿರಬೇಕು. ಮಕ್ಕಳ ಹಕ್ಕುಗಳ ರಕ್ಷಣೆಗೆ ಬದ್ಧರಾಗಿರಬೇಕು.

ಅರ್ಜಿ ಸಲ್ಲಿಸಲು ಫೆಬ್ರವರಿ 3 ಕೊನೆಯ ದಿನವಗಿದ್ದು, ಮುಖ್ಯ ಅಡುಗೆಯವರು ಕನಿಷ್ಠ 7ನೇ ತರಗತಿ ಉತ್ತೀರ್ಣರಾಗಿರಬೇಕು. ಸಹಾಯಕ ಅಡುಗೆಯವರಿಗೆ ವಿದ್ಯಾರ್ಹತೆ ಕಡ್ಡಾಯವಲ್ಲ, ಆದರೆ ಅಕ್ಷರಸ್ಥರಿಗೆ ಆದ್ಯತೆ ನೀಡಲಾಗುವುದು.

ಅರ್ಜಿಯನ್ನು ಶಾಲೆಯಿಂದ ಅಥವಾ ಬಿಸರಹಳ್ಳಿ ಗ್ರಾಮ ಪಂಚಾಯತಿ ಕಾರ್ಯಾಲಯದಿಂದ ಪಡೆದು ಭರ್ತಿ ಮಾಡಿ, ಆಧಾರ್ ಕಾರ್ಡ್ ಪ್ರತಿ, ಚುನಾವಣೆ ಮತದಾರರ ಗುರುತಿನ ಪ್ರತಿ, ಪಡಿತರ ಚೀಟಿ ಪ್ರತಿ, ಜಾತಿ ಪ್ರಮಾಣ ಪತ್ರದ ಪ್ರತಿ, ಶೈಕ್ಷಣಿಕ ವಿದ್ಯಾರ್ಹತೆಯ ಪ್ರಮಾಣ ಪತ್ರ ಪ್ರತಿ ಹಾಗೂ ಅರ್ಜಿದಾರರ ಹೆಸರಿನಲ್ಲಿರುವ ಬ್ಯಾಂಕ್ ಪಾಸ್ ಬುಕ್ ದಾಖಲೆಗಳೊಂದಿಗೆ ಸಲ್ಲಿಸಬೇಕು.

ತರಬೇತಿಗೆ ಅರ್ಜಿ ಆಹ್ವಾನ: ಪ್ರವಾಸೋದ್ಯಮ ಇಲಾಖೆಯಿಂದ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಕರೆಯಲಾಗಿದೆ.

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು Enterprenuership ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡಲು ಉದ್ದೇಶಿಸಲಾಗಿದೆ.

ಈ ತರಬೇತಿ ಹಾಗೂ ಸಹಾಯಧನಕ್ಕಾಗಿ ಕೊಪ್ಪಳ ಜಿಲ್ಲೆಗೆ ಪರಿಶಿಷ್ಟ ಜಾತಿಗೆ ಸೇರಿದ 4 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 3 ಅಭ್ಯರ್ಥಿಗಳ ಗುರಿಯನ್ನು ಪ್ರಸ್ತುತ ಸಾಲಿನಲ್ಲಿ ನಿಗದಿಪಡಿಸಿದೆ. ಈ ತರಬೇತಿಯನ್ನು ವಸತಿಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ.

ತರಬೇತಿಗಾಗಿ ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದು, ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು 20 ರಿಂದ 45 ವರ್ಷ ವಯೋಮಿತಿಯಲ್ಲಿರಬೇಕು. ಆಸಕ್ತರು ಕಛೇರಿಯ ವೇಳೆಯಲ್ಲಿ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, 2ನೇ ಮಹಡಿ, ಜಿಲ್ಲಾಡಳಿತ ಭವನ, ಹೊಸಪೇಟೆ ರಸ್ತೆ, ಕೊಪ್ಪಳ ಇಲ್ಲಿಂದ ಅರ್ಜಿಯನ್ನು ಉಚಿತವಾಗಿ ಪಡೆದು 31 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಛೇರಿ ಭೇಟಿ ನೀಡಬಹುದು ಹಾಗೂ ದೂರವಾಣಿ ಸಂಖ್ಯೆ 08539-225566.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+