• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅರೆ ವೈದ್ಯಕೀಯ ತರಬೇತಿ, ತಾತ್ಕಾಲಿಕ ಸೇವೆಗೆ ನಿಯೋಜನೆ

|
Google Oneindia Kannada News

ಧಾರವಾಡ, ಮೇ 25; ಕೋವಿಡ್ ನಿಯಂತ್ರಿಸಲು ಹೆಚ್ಚುವರಿ ಅರೆ ವೈದ್ಯಕೀಯ ಸಿಬ್ಬಂದಿ ಅಗತ್ಯವಿರುವ ಹಿನ್ನೆಲೆಯಲ್ಲಿ ಆಸಕ್ತರಿಗೆ ತರಬೇತಿ ನೀಡಲಾಗುತ್ತಿದೆ. ಒಂದು ತಿಂಗಳ ತರಬೇತಿ ನೀಡಿ, ಜಿಲ್ಲಾ ಆಸ್ಪತ್ರೆಗಳಲ್ಲಿ ಆನ್‍ಜಾಬ್ ತಾತ್ಕಾಲಿಕ ಸೇವೆಗೆ ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಕೌಶಲ್ಯಾಭಿವೃದ್ಧಿ ಮಿಷನ್ ಹಾಗೂ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ ಆಸಕ್ತರಿಂದ ಅರ್ಜಿ ಕರೆಯಲಾಗಿದೆ. ತುರ್ತು ವೈದ್ಯಕೀಯ ಸೇವೆಗಳ ಬೇಸಿಕ್, ಸಾಮಾನ್ಯ ಸೇವೆಗಳ ಸಹಾಯಕರು, ತುರ್ತು ವಿಭಾಗಲ್ಲಿ ಕೇರ್, ವೈದ್ಯಕೀಯ ಉಪಕರಣಗಳ ತಾಂತ್ರಿಕ ಸಹಾಯಕರು, ಫ್ಲೆಬೋಟೋಮಿಸ್ಟ್, ವೈದ್ಯಕೀಯ ದಾಖಲೆಗಳ ನಿರ್ವಹಣೆ ಕುರಿತು ತರಬೇತಿ ನೀಡಲಾಗುತ್ತದೆ.

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; ತಕ್ಷಣ ಅರ್ಜಿ ಹಾಕಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; ತಕ್ಷಣ ಅರ್ಜಿ ಹಾಕಿ

ತರಬೇತಿ ಬಳಿಕ ತಾತ್ಕಾಲಿಕ ಉದ್ಯೋಗ ಒದಗಿಸಲಾಗುವುದು. ಆಸಕ್ತರು https://tinyurl.com/skillDwd ಲಿಂಕ್ ಮೂಲಕ ರಾಯಾಪುರದ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿಗೆ ಅಥವ dsdodwd2018@gmail.com ವಿಳಾಸಕ್ಕೆ ವಿವರ ಕಳಿಸಬಹುದಾಗಿದೆ.

ಕೋವಿಡ್ ಪ್ಯಾಕೇಜ್; ಆಟೋ ಚಾಲಕರು ಅರ್ಜಿ ಹಾಕುವುದು ಹೇಗೆ? ಕೋವಿಡ್ ಪ್ಯಾಕೇಜ್; ಆಟೋ ಚಾಲಕರು ಅರ್ಜಿ ಹಾಕುವುದು ಹೇಗೆ?

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ರಾಯಾಪುರದ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಮೊಬೈಲ್ ಸಂಖ್ಯೆ 9845437056 ಕರೆ ಮಾಡಬಹುದಾಗಿದೆ.

ಹಿರಿಯ, ಕಿರಿಯ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಹಾಕಿ ಹಿರಿಯ, ಕಿರಿಯ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಹಾಕಿ

1,763 ವೈದ್ಯರ ನೇಮಕಾತಿ ಪೂರ್ಣ; ಕೋವಿಡ್ ಸಂದರ್ಭದಲ್ಲಿ ಕಾರ್ಯ ನಿರ್ವಹಣೆ ಮಾಡಲು ರಾಜ್ಯದ ತಾಲೂಕು ಮತ್ತು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ 1,763 ವೈದ್ಯರ ನೇಮಕಾತಿಯನ್ನು ಪೂರ್ಣಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

English summary
Applications invited fir semi medical courses. Temporary jobs will be assigned after taring. Candidates can submit applications online.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X