• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕಲಬುರಗಿ; ತಜ್ಞ ಹಾಗೂ ಎಂಬಿಬಿಎಸ್ ವೈದ್ಯರಿಂದ ಅರ್ಜಿ ಆಹ್ವಾನ

|
Google Oneindia Kannada News

ಕಲಬುರಗಿ, ಏಪ್ರಿಲ್ 28; ಕಲಬುರಗಿ ನಗರ ಹಾಗೂ ಜಿಲ್ಲೆಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಹಾಗೂ ಈ ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಅನುಕೂಲವಾಗುವಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

ಕಲಬುರಗಿ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತಾತ್ಕಾಲಿಕವಾಗಿ 6 ತಿಂಗಳ ಅವಧಿಗೆ ತಜ್ಞ ಹಾಗೂ ಕರ್ತವ್ಯ ನಿರತ ವೈದ್ಯರ ಸೇವೆಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಕಲಬುರಗಿಯ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.

ಸರಕು ಸಾಗಣೆ ನಿಗಮದಲ್ಲಿ ನೇಮಕಾತಿ, 1072 ಹುದ್ದೆಗಳಿವೆ ಸರಕು ಸಾಗಣೆ ನಿಗಮದಲ್ಲಿ ನೇಮಕಾತಿ, 1072 ಹುದ್ದೆಗಳಿವೆ

ಜನರಲ್ ಫಿಜಿಶಿಯನ್ಸ್ 3 ಹುದ್ದೆಗಳಿಗೆ ಎಂಬಿಬಿಎಸ್, ಎಂಡಿ (Gen Medicine) ವಿದ್ಯಾರ್ಹತೆ ಹೊಂದಿರಬೇಕು. ಮಾಸಿಕ ವೇತನ 80,000 ರೂ. ನೀಡಲಾಗುತ್ತದೆ.

ಶಿವಮೊಗ್ಗ, ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಅರ್ಜಿ ಹಾಕಿ ಶಿವಮೊಗ್ಗ, ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಅರ್ಜಿ ಹಾಕಿ

ಅರಿವಳಿಕೆ ತಜ್ಞರು 3 ಹುದ್ದೆಗಳಿಗೆ ಎಂಬಿಬಿಎಸ್, ಎಂಡಿ ವಿದ್ಯಾರ್ಹತೆ ಹೊಂದಿರಬೇಕು. ಮಾಸಿಕ ವೇತನ 80,000 ರೂ. ವೇತನ. ಎಂಬಿಬಿಎಸ್ ವೈದ್ಯರು 3 ಹುದ್ದೆಗಳಿಗೆ ಎಂಬಿಬಿಎಸ್ ವಿದ್ಯಾರ್ಹತೆ ಹೊಂದಿರಬೇಕು. ಮಾಸಿಕ 60,000 ರೂ.ಗಳ ವೇತನ ನೀಡಲಾಗುತ್ತದೆ.

ಇನ್ಫೋಸಿಸ್‌ನಿಂದ ಈ ವರ್ಷ 25, 000 ಹೊಸ ನೇಮಕಾತಿ ಇನ್ಫೋಸಿಸ್‌ನಿಂದ ಈ ವರ್ಷ 25, 000 ಹೊಸ ನೇಮಕಾತಿ

ಈಗ ನೇಮಕ ಮಾಡಲಾದ ಹುದ್ದೆಗಳನ್ನು ಜಿಮ್ಸ್ ಸಂಸ್ಥೆಯ ಕೋವಿಡ್ ಆಸ್ಪತ್ರೆಗೆ ಬಳಸಲು ನಿರ್ಧರಿಸಲಾಗಿದೆ. ತಜ್ಞ ಹಾಗೂ ಕರ್ತವ್ಯ ನಿರತ ವೈದ್ಯ ಅಭ್ಯರ್ಥಿಗಳು ತಮ್ಮ ಭರ್ತಿ ಮಾಡಿದ ಅರ್ಜಿಯೊಂದಿಗೆ ಶೈಕ್ಷಣಿಕ ದಾಖಲೆಗಳನ್ನು ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ directorgimsgulbarga@gmail.com ಇ-ಮೇಲ್ ವಿಳಾಸಕ್ಕೆ ಸಲ್ಲಿಸಬೇಕು.

ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ 2021ರ ಮೇ 1ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬೇಕು. ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಎಲ್ಲಾ ಹುದ್ದೆಗಳು ತಾತ್ಕಾಲಿಕವಾಗಿದ್ದು, ಆರು ತಿಂಗಳ ಅವಧಿಗೆ ಮಾತ್ರ ನೇಮಕ ಮಾಡಲಾಗುತ್ತಿದೆ.

ವಿದ್ಯಾರ್ಹತೆ, ಅರ್ಹತೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ 9535394783, 9448586357 ಹಾಗೂ ಕಲಬುರಗಿ ಜಿಮ್ಸ್‍ನ ವೆಬ್‍ಸೈಟ್‌ಗೆ ಭೇಟಿ ನೀಡಬಹುದು.

English summary
Applications invited for specialist and MBBS doctor post at Gulbarga institute of medical sciences. Candidates can submit applications till May 1, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X