ಕೃಷಿ ಇಲಾಖೆಯಲ್ಲಿ ಕೆಲಸ ಖಾಲಿ ಇದೆ, ನ.28ರೊಳಗೆ ಅರ್ಜಿ ಹಾಕಿ
ಬೆಂಗಳೂರು, ನವೆಂಬರ್ 17; ಕರ್ನಾಟಕದ ಕೃಷಿ ಇಲಾಖೆಯ 'ಆತ್ಮ ಯೋಜನೆ' ಅಡಿಯಲ್ಲಿ ಗುತ್ತಿಗೆ ಆಧಾರಿತವಾದ ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹರು ನವೆಂಬರ್ 28ರೊಳಗೆ ಅರ್ಜಿ ಸಲ್ಲಿಸಬಹುದು.
ಆತ್ಮ ಯೋಜನೆಯಡಿ ಕೃಷಿ ಇಲಾಖೆಯ ಕಚೇರಿಯಲ್ಲಿ ಖಾಲಿ ಇರುವ ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಅರ್ಜಿಗಳನ್ನು ಕರೆಯಲಾಗಿದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ಕೃಷಿ ಮತ್ತು ಕೃಷಿ ಸಂಬಂಧಿತ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ವ್ಯವಸ್ಥಾಪಕ ಅಥವಾ ಮೇಲ್ವಿಚಾರಣಾ ಸಾಮರ್ಥ್ಯದಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅಭ್ಯರ್ಥಿ ಆಯ್ಕೆಯು ಜಿಲ್ಲಾ ಮಟ್ಟದ ನೇಮಕಾತಿ ಸಮಿತಿ ಮೂಲಕ ಮಾಡಲಾಗುತ್ತದೆ. ಅಭ್ಯರ್ಥಿಗಳು ಭಾವಚಿತ್ರ ಲಗತ್ತಿಸಿ, ವೈಯಕ್ತಿಕ ಮಾಹಿತಿ, ವಿದ್ಯಾರ್ಹತೆ, ಅನುಭವ ಪ್ರಮಾಣ ಪತ್ರ, ನಡತೆ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ, ಆಧಾರ ಪ್ರತಿಗಳ ದೃಢೀಕೃತ ದಾಖಲಾತಿಗಳ ಜೊತೆ ಅರ್ಜಿಗಳನ್ನು ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹರು ನವೆಂಬರ್ 28ರೊಳಗಾಗಿ ಅರ್ಜಿಗಳನ್ನು ಧಾರವಾಡ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಕೃಷಿ ಇಲಾಖೆ ಫೆಸಿಲಿಟಿಟರ್ ಹುದ್ದೆಗೆ ಅರ್ಜಿ ಆಹ್ವಾನ; ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ದೇಶಿ (ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಗಳ ಡಿಪ್ಲೋಮಾ ಕೋರ್ಸ್) ಯೋಜನೆಯಡಿಯಲ್ಲಿ ಫೆಸಿಲಿಟೆಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಒಂದು ವರ್ಷದ ಅವಧಿಗೆ ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಬಯಸುವ ಅಭ್ಯರ್ಥಿಗಳು ನವೆಂಬರ್ 30ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಶ್ವವಿದ್ಯಾಲಯ, ಧಾರವಾಡ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ದೃಢೀಕೃತ ಎರಡು ಪ್ರತಿಗಳನ್ನು ತರಬೇಕು ಎಂದು ಸೂಚನೆ ನೀಡಲಾಗಿದೆ.












Click it and Unblock the Notifications