ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಕನ್ನಡ: SSLC ಪಾಸ್ ಆಗಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ

|
Google Oneindia Kannada News

ಉತ್ತರ ಕನ್ನಡ, ಜುಲೈ 27: ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಸದರಿ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿರುವ ಅವಧಿಯಲ್ಲಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವುದಕ್ಕೆ ಆಗಸ್ಟ್ 5 ಕೊನೆಯ ದಿನಾಂಕವಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿನ ಹುದ್ದೆಗೆ ಅರ್ಜಿ ಸಲ್ಲಿಸುವುದಕ್ಕೆ ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಈ ವರದಿಯನ್ನು ಓದಿ.

 Applications invited for the vacancies in Uttara Kannada District Gram Panchayat Library

ವಿದ್ಯಾರ್ಹತೆ:

* ಗ್ರಾಮ ಪಂಚಾಯತ್ ನೇಮಕಾತಿ ಗ್ರಂಥಾಲಯ ಮೇಲ್ವಿಚಾರಕರ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದಿರುವ ಶಿಕ್ಷಣ ಸಂಸ್ಥೆಗಳಲ್ಲಿ ಎಸ್ಎಸ್ಎಲ್ ಸಿ ಅಥವಾ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

* ಸ್ಥಳೀಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಾಗಿರಬೇಕು

* ನಿಗದಿಪಡಿಸಿರುವ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು

* ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದವರಿಗೆ ಆದ್ಯತೆ ನೀಡಲಾಗುವುದು

ವಯೋಮಿತಿ ಎಷ್ಟಿರಬೇಕು?:

* ಕನಿಷ್ಠ ವಯೋಮಿತಿ 18 ವರ್ಷವಾಗಿರಬೇಕು

* ಸಾಮಾನ್ಯ ವರ್ಗದ ಅಭ್ಯರ್ಥಿ ಗರಿಷ್ಠ ವಯೋಮಿತಿ 35 ವರ್ಷ

* ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ

* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗೆ ಗರಿಷ್ಠ 40 ವರ್ಷ

ಅರ್ಜಿ ಸಲ್ಲಿಸುವ ವಿಧಾನ:

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಅಧಿಕೃತ ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಆನ್ ಲೈನ್ ಅರ್ಜಿಯಲ್ಲಿ ಎಲ್ಲಾ ದಾಖಲೆಗಳನ್ನು ಲಗತ್ತಿಸುವುದರ ಜೊತೆಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡುವುದು. ಈ ಹುದ್ದೆಗಾಗಿ ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಈ ಹುದ್ದೆಗ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸುವುದಕ್ಕೆ ಆಗಸ್ಟ್ 5 ಕೊನೆಯ ದಿನಾಂಕವಾಗಿದೆ.

English summary
Applications invited for the vacancies in Uttara Kannada District Gram Panchayat Library. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X