ಬೆಂಗಳೂರಿನ ಎಚ್ಎಎಲ್‌ನಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ನವೆಂಬರ್ 30: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ಹಲವು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 11 ಸ್ಟಾಫ್ ನರ್ಸ್, ಫಾರ್ಮಾಸಿಸ್ಟ್, ಫಿಜಿಯೋಥೆರಪಿಸ್ಟ್, ಡ್ರೆಸ್ಸೆರ್ ಹುದ್ದೆಗಳಿಗೆ ಡಿಪ್ಲೊಮಾ, ಜಿಎನ್ಎಂ, ಡಿ. ಫಾರ್ಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ನವೆಂಬರ್ 24ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 14 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಖಾಲಿ ಇರುವ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನ ಅಧಿಕೃತ ವೆಬ್ಸೈಟ್ hal-india.co.inಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾದ ಮಾಹಿತಿ ಇಲ್ಲಿದೆ.

ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
ಹುದ್ದೆಯ ಹೆಸರು: ಸ್ಟಾಫ್ ನರ್ಸ್, ಫಾರ್ಮಾಸಿಸ್ಟ್, ಫಿಜಿಯೋಥೆರಪಿಸ್ಟ್, ಡ್ರೆಸ್ಸೆರ್
ಒಟ್ಟು ಹುದ್ದೆಗಳು: 11
ವಿದ್ಯಾರ್ಹತೆ: ಡಿಪ್ಲೊಮಾ, ಜಿಎನ್ಎಂ, ಡಿ.ಫಾರ್ಮಾ
ಉದ್ಯೋಗದ ಸ್ಥಳ: ಬೆಂಗಳೂರು
ವೇತನ: ಮಾಸಿಕ 15,910 ರೂ.ನಿಂದ 21,473 ರೂ.
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14/12/2021
ಅರ್ಜಿ ಶುಲ್ಕ:
ಸ್ಟಾಫ್ ನರ್ಸ್, ಫಾರ್ಮಾಸಿಸ್ಟ್, ಫಿಜಿಯೋಥೆರಪಿಸ್ಟ್, ಡ್ರೆಸ್ಸೆರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 200 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಹುದ್ದೆಯ ಮಾಹಿತಿ:
ಸ್ಟಾಫ್ ನರ್ಸ್- 07
ಫಾರ್ಮಾಸಿಸ್ಟ್ -01
ಫಿಜಿಯೋಥೆರಪಿಸ್ಟ್ -01
ಡ್ರೆಸ್ಸೆರ್ - 02 ಹುದ್ದೆಗಳು ಸೇರಿದಂತೆ ಒಟ್ಟು 11 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ
ಸ್ಟಾಫ್ ನರ್ಸ್: ಪಿಯುಸಿ ಜೊತೆಗೆ ಜನರಲ್ ನರ್ಸಿಂಗ್ ಮತ್ತು ಮಿಡ್ವೈಫರಿಯಲ್ಲಿ 3 ವರ್ಷಗಳ ಡಿಪ್ಲೋಮಾ ಮಾಡಿರಬೇಕು.
ಫಾರ್ಮಾಸಿಸ್ಟ್: ಪಿಯುಸಿ ಜೊತೆಗೆ 2 ವರ್ಷಗಳ ಪಿಜಿಯೋಥೆರಪಿ ಡಿಪ್ಲೋಮಾ ಮಾಡಿರಬೇಕು.
ಫಿಜಿಯೋಥೆರಪಿಸ್ಟ್: ಪಿಯುಸಿ ಜೊತೆಗೆ 2 ವರ್ಷಗಳ ಡಿ. ಫಾರ್ಮಾ ಮಾಡಿರಬೇಕು.
ಡ್ರೆಸ್ಸೆರ್: ಪಿಯುಸಿ ಜೊತೆಗೆ ಭಾರತೀಯ ರೆಡ್ ಕ್ರಾಸ್ ಅಥವಾ ಸೇಂಟ್ ಜಾನ್ಸ್ ಆಂಬ್ಯುಲೆನ್ಸ್ ಅಸೋಸಿಯೇಷನ್ ಅಥವಾ ಅಂತಹ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಪ್ರಥಮ ಚಿಕಿತ್ಸೆಯಲ್ಲಿ ತರಬೇತಿಯ ಪ್ರಮಾಣಪತ್ರ ಹೊಂದಿರಬೇಕು.
ವಯೋಮಿತಿ:
ಸ್ಟಾಫ್ ನರ್ಸ್, ಫಾರ್ಮಾಸಿಸ್ಟ್, ಫಿಜಿಯೋಥೆರಪಿಸ್ಟ್, ಡ್ರೆಸ್ಸೆರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 28 ವರ್ಷ ಮೀರಿರಬಾರದು.
ಉದ್ಯೋಗದ ಸ್ಥಳ:
ಸ್ಟಾಫ್ ನರ್ಸ್, ಫಾರ್ಮಾಸಿಸ್ಟ್, ಫಿಜಿಯೋಥೆರಪಿಸ್ಟ್, ಡ್ರೆಸ್ಸೆರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ವೇತನ:
ಸ್ಟಾಫ್ ನರ್ಸ್, ಫಾರ್ಮಾಸಿಸ್ಟ್, ಫಿಜಿಯೋಥೆರಪಿಸ್ಟ್, ಡ್ರೆಸ್ಸೆರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 15,910 ರೂ.ನಿಂದ 21,473 ರೂ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನ
Recommended Video
-
ದ್ವಿತೀಯ ಪಿಯುಸಿ 'ಕಲಾ' ವಿಭಾಗದಲ್ಲಿ ಶೇ.72.86 ರಷ್ಟು ಫಲಿತಾಂಶ: ಟಾಪರ್ಸ್ ಲಿಸ್ಟ್ ಇಲ್ಲಿದೆ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು












Click it and Unblock the Notifications