BESCOM Recruitment: ಬೆಸ್ಕಾಂನಲ್ಲಿ ಖಾಲಿ 510 ಹುದ್ದೆಗಳಿಗೆ ಅರ್ಜಿ ಆಹ್ವಾನ
BESCOM Recruitment: ಇತ್ತೀಚಿನ ದಿನಗಳಲ್ಲಿ ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ವಿದ್ಯುತ್ ಸರಬರಾಜು ಕಂಪನಿಯಾಗಿರುವ ಬೆಸ್ಕಾಂ ಖಾಲಿಯಿರುವ 510 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಅರ್ಜಿ ಸಲ್ಲಿಸಬಯಸುವವರು ಯಾವೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಮಾಸಿಕ ವೇತನ ಎಷ್ಟಿರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಕರ್ನಾಟಕ ಸರ್ಕಾರದ ಸಂಪೂರ್ಣ ಸ್ವಾಮ್ಯಕ್ಕೆ ಒಳಪಟ್ಟಿದೆ. ಇಲ್ಲಿ ಪ್ರಸ್ತುತ ಅಗತ್ಯ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಡಿಪ್ಲೋಮಾ, ಬಿಇ, ಬಿ.ಟೆಕ್, ಬಿಎ, ಇತರೆ ಯಾವುದೇ ಡಿಗ್ರಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಎಲ್ಲಾ ಬ್ರ್ಯಾಂಚ್‌ಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ 2024-25ನೇ ಸಾಲಿನ ಇಂಜಿನಿಯರಿಂಗ್ ಗ್ರಾಜುಯೇಟ್ಸ್ / ನಾನ್ ಇಂಜಿನಿಯರಿಂಗ್ ಗ್ರಾಜುಯೇಟ್ಸ್ / ಡಿಪ್ಲೋಮಾ ಟೆಕ್ನೀಷಿಯನ್‌ಗಳನ್ನು ಭರ್ತಿ ಮಾಡುತ್ತಿದೆ. ಬಿ.ಇ. / ಬಿ.ಟೆಕ್ - ಇ ಅಂಡ್ ಇ ಇಂಜಿನಿಯರಿಂಗ್ 130, ಬಿ.ಎ/ ಬಿ.ಎಸ್ಸಿ/ ಬಿಕಾಂ/ ಬಿಬಿಎ/ಬಿಸಿಎ/ ಬಿಬಿಎಮ್/ ಬಿ.ಇ./ ಬಿ.ಟೆಕ್ (ಇ&ಇ ಇಂಜಿನಿಯರಿಂಗ್ ಹೊರತುಪಡಿಸಿ) 305, ಡಿಪ್ಲೋಮಾ ಪಾಸದವರಿಗೆ 75 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬಿ.ಇ. / ಬಿ.ಟೆಕ್ - ಇ ಅಂಡ್ ಇ ಇಂಜಿನಿಯರಿಂಗ್ 9,008 ರೂಪಾಯಿ, ಬಿ.ಎ/ ಬಿ.ಎಸ್ಸಿ/ ಬಿಕಾಂ/ ಬಿಬಿಎ/ಬಿಸಿಎ/ ಬಿಬಿಎಮ್/ ಬಿ.ಇ./ ಬಿ.ಟೆಕ್ (ಇ&ಇ ಇಂಜಿನಿಯರಿಂಗ್ ಹೊರತುಪಡಿಸಿ 9,008 ರೂಪಾಯಿ, ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳಿಗೆ ಮಾಸಿಕ 8,000 ರೂಪಾಯಿ ವೇತನ ನೀಡಲಾಗುತ್ತದೆ.
ಟೆಕ್ನಿಕಲ್ ಗ್ರಾಜುಯೇಟ್ಸ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಬಯಸುವವರು ಬಿ.ಇ. / ಬಿ.ಟೆಕ್ - ಇ ಅಂಡ್ ಇ ಇಂಜಿನಿಯರಿಂಗ್ ಟೆಕ್ನಿಕಲ್ ಕೋರ್ಸ್‌ಗಳನ್ನು ಮಾಡಿರಬೇಕಾಗುತ್ತದೆ. ನಾನ್ ಇಂಜಿನಿಯರಿಂಗ್ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗೆ ಬಿ.ಎ/ ಬಿ.ಎಸ್ಸಿ/ ಬಿಕಾಂ/ ಬಿಬಿಎ/ಬಿಸಿಎ/ ಬಿಬಿಎಮ್,
ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಬಯಸುವವರು ಯಾವುದೇ ಬ್ರ್ಯಾಂಚ್‌ನಲ್ಲಿ ಡಿಪ್ಲೋಮಾ ಉತ್ತೀರ್ಣರಾಗಿರಬೇಕು.
ಅಭ್ಯರ್ಥಿಗಳಿಗೆ 01 ವರ್ಷ ತರಭೇತಿ ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ ಫೆಬ್ರವರಿ 1ರಿಂದ ಆರಂಭವಾಗಲಿದ್ದು, ಕೊನೇ ದಿನಾಂಕ ಫೆಬ್ರವರಿ 20 ಆಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಇಂಜಿನಿಯರಿಂಗ್ ಪದವೀಧರರು, ಇತರೆ ತಾಂತ್ರಿಕೇತರ ವಿಷಯಗಳ ಪದವೀಧರರು, ಡಿಪ್ಲೊಮಾ ಈ ಎಲ್ಲಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು 2020ರ ನಂತರ ಹುದ್ದೆಗಳಿಗೆ ಸಂಬಂಧಿತ ಶಿಕ್ಷಣಗಳನ್ನು ಪಡೆದಿರಬೇಕು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧಿಕೃತ ವೆಬ್‌ಸೈಟ್ https://bescom.karnataka.gov.inಗೆ ಭೇಟಿ ನೀಡಬಹುದಾಗಿದೆ. ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
ಮೂಲ ದಾಖಲೆಗಳ ಪರಿಶೀಲನೆ ವಿಳಾಸ BESCOM, HRD Centre, 1st Floor, Crescent Tower, Crescent Road, Near Mallige Nursing Home, Race Course, Bangalore 560001 ಆಗಿದೆ.
ಅಭ್ಯರ್ಥಿಗಳನ್ನು ನಿಗದಿತ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಅಪ್ರೆಂಟಿಸ್ ಹುದ್ದೆಗಳಿಗೆhttps://nats.education.gov.in/ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್‌ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications