ಬಳ್ಳಾರಿ, ಧಾರವಾಡ, ಕೊಪ್ಪಳದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಸೆ.27 : 2022-23ನೇ ಸಾಲಿನಲ್ಲಿ ಸಿಡಬ್ಲ್ಯೂಎಸ್‍ಎನ್ (ವಿಶೇಷ ಮಕ್ಕಳು) ಮಕ್ಕಳ ಫಿಜಿಯೋಥೆರಪಿ ಚಿಕಿತ್ಸೆ ನೀಡಲು ಫಿಜಿಯೋಥೆರಪಿಸ್ಟ್ ಹುದ್ದೆ ಮತ್ತು ವೈದ್ಯರ ಸಹಾಯಕ್ಕಾಗಿ ಒಬ್ಬ ಮಹಿಳಾ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
01 ಹುದ್ದೆ ಫಿಜಿಯೋಥೆರಪಿಸ್ಟ್ ಮತ್ತು ಒಬ್ಬ ಮಹಿಳಾ ಸಹಾಯಕಿ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳವುದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಿಆರ್‍ಎಸ್ ಬಳ್ಳಾರಿ ಕುರುಗೋಡು ವಲಯದ ಕ್ಷೇತ್ರ ಸಮನ್ವಯಾಧಿಕಾರಿಗಳು ತಿಳಿಸಿದ್ದಾರೆ.
ಅಕ್ಟೋಬರ್ 2022ರಿಂದ ಮಾರ್ಚ್ 2022 ರವರೆಗೆ (ಆರು ತಿಂಗಳು ಮಾತ್ರ) ಹುದ್ದೆಗೆ ನೇಮಿಸಿಕೊಳ್ಳಲಾಗುತ್ತಿದ್ದು, ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅಕ್ಟೋಬರ್ 03ರ ಸಂಜೆ 5.30ರೊಳಗೆ ಅರ್ಜಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು ಎಂದು ತಿಳಿಸಿದ್ದಾರೆ.

ವಿದ್ಯಾರ್ಹತೆ: ವೈದ್ಯರ ಹುದ್ದೆಗೆ ಬ್ಯಾಚುಲರ್ ಆಫ್ ಫಿಜಿಯೋಥೆರಪಿ ಅಥವಾ ಡಿಪ್ಲೋಮಾ ಆಫ್ ಫಿಜಿಯೋಥೆರಪಿ ವಿದ್ಯಾರ್ಹತೆ ಹೊಂದಿರಬೇಕು.
ಬಳ್ಳಾರಿ ನಗರದ ಕೋಟೆ ಆವರಣದ ಬಿ.ಆರ್.ಸಿ ಬಳ್ಳಾರಿ ಪಶ್ಚಿಮ ಕುರುಗೋಡು ವಲಯದ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.08392-66239, 9480695067, 9480695075, 9449217326 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನ:
ಧಾರವಾಡ ನಗರದ ಕೃಷಿ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದಲ್ಲಿ ದೈಹಿಕ ಶಿಕ್ಷಣ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ದೈಹಿಕ ಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿಯನ್ನು ಶೇ.55 ಅಂಕಗಳೊಂದಿಗೆ ನೆಟ್ ಅಥವಾ ದೈಹಿಕ ಶಿಕ್ಷಣದಲ್ಲಿ ಡಾಕ್ಟರೇಟ ಪದವಿ ಅಥವಾ ಎರಡು ನಾಸ ರೆಟೆಡ್ ರಿಸರ್ಚ ಪೇಪರ ಆಗಿರಬೇಕು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೃಷಿ ಮಹಾವಿದ್ಯಾಲಯದ ನಮೂದಿಸಿದ ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಸೆಪ್ಟೆಂಬರ್ 28 ರಂದು ಬೆಳಿಗ್ಗೆ 11 ಗಂಟೆಗೆ ಕೃಷಿ ಮಹಾವಿದ್ಯಾಲಯದ ಡೀನ್(ಕೃಷಿ) ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 9448495304 ಕ್ಕೆ ಕರೆ ಮಾಡಬಹುದು ಎಂದು ಕೃಷಿ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

ಕೊಪ್ಪಳದಲ್ಲಿ ತಾತ್ಕಾಲಿಕ ಫಿಜಿಯೋತೆರೆಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ ಕ್ಷೇತ್ರಶಿಕ್ಷಣಾಧಿಕಾರಿಗಳು ಹಾಗೂ ತಾಲ್ಲೂಕಾ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ ಅಭಿಯಾನ ಇವರ ವತಿಯಿಂದ 2022-23ನೇ ಸಾಲಿನಲ್ಲಿ ಸಮನ್ವಯ ಶಿಕ್ಷಣ ಅಡಿಯಲ್ಲಿ ವಿಶೇಷ ಚೇತನ ಮಕ್ಕಳಿಗೆ ಚಿಕಿತ್ಸೆ ನೀಡಲು ಫಿಜಿಯೋಥೆರಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಫಿಜಿಯೋಥೆರಪಿಸ್ಟ್ ಹುದ್ದೆಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಅಡಿಯಲ್ಲಿ ಕ್ಷೇತ್ರಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ವತಿಯಿಂದ ಸಮನ್ವಯ ಶಿಕ್ಷಣ ಚಟುವಟಿಕೆ ಅಡಿಯಲ್ಲಿ ತೀವ್ರ ನ್ಯೂನತೆ ಹೊಂದಿರುವ ಬಹುವಿಧ ನ್ಯೂನತೆ, ಸೆರೆಬ್ರಲ್ ಪಾಲ್ಸಿ, ಮಕ್ಕಳಿಗೆ ಫಿಜಿಯೋತೆರೆಪಿ ಚಿಕಿತ್ಸೆ ನೀಡಲು ಅರ್ಹ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಅರ್ಹ ಬ್ಯಾಚುಲರ್ ಆಫ್ ಫಿಜಿಯೋತೆರೆಪಿ (ಬಿ.ಪಿಟಿ) ಅಥವಾ ಡಿಪ್ಲೋಮಾ ಇನ್ ಫಿಜಿಯೋತೆರೆಪಿ (ಡಿ.ಪಿಟಿ) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಹ ಅಭ್ಯರ್ಥಿಗಳು ಸೆ. 30 ರೊಳಗಾಗಿ ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ, ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲಾ ಆವರಣ ಸ್ಟೇಷನ್ ರಸ್ತೆ, ಕೊಪ್ಪಳ ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications