ಈಗಲೇ ಅರ್ಜಿ ಸಲ್ಲಿಸಿ: ಕೆಎಂಎಫ್‌ನಲ್ಲಿ ಹಲವು ಹುದ್ದೆಗಳು ಖಾಲಿ ಇವೆ
ಬೆಂಗಳೂರು, ಡಿಸೆಂಬರ್ 5: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್) ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಕರ್ನಾಟಕದ ಪ್ರತಿಯೊಂದು ಗ್ರಾಮದಲ್ಲೂ ಕರ್ನಾಟಕ ಮಿಲ್ಕ್ ಫೆಡರೇಷನ್‌ನ ಹಾಲಿನ ಡೈರಿ ಇದೆ. ಹಾಗೆ ಪ್ರತಿಯೊಂದು ಜಿಲ್ಲೆಯ ತಾಲೂಕು ಹಾಗೂ ಗ್ರಾಮಗಳಲ್ಲಿ ಕೆಎಂಎಫ್‌ನ ಹುದ್ದೆಗಳು ಖಾಲಿ ಇದ್ದು ಯಾವ ಜಿಲ್ಲೆಗಳಲ್ಲಿ ಖಾಲಿ ಇವೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಕೆಎಂಎಫ್‌ನ https://virtualofficeerp.com/rbkmul2023/instruction ಈ ವೆಬ್‌ಸೈಟಿನಲ್ಲಿ ನೀಡಿಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 7ನೇ ತಾರೀಖು ಕೊನೆ ದಿನವಾಗಿದೆ.
ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ ಹೆಸರು: ಡೈರಿ ಸುಪರ್‌ವೈಸರ್, ಡ್ರೈವರ್, ಎಂಐಎಸ್
ಶೈಕ್ಷಣಿಕ ಅರ್ಹತೆ: 10, ಐಟಿಐ, ಡಿಪ್ಲೋಮೊ, ಪದವಿ, ಬಿಟೆಕ್,
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 7 ಡಿಸೆಂಬರ್ 2023.












Click it and Unblock the Notifications