ಮೈಸೂರಿನಲ್ಲಿ ಕೆಲಸ ಖಾಲಿ ಇದೆ, ವಿವರಗಳು

ಮೈಸೂರು, ಜು.03 : ಮೈಸೂರು ನಗರ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿರುವ 3 ಅಂಗನವಾಡಿ ಕಾರ್ಯಕರ್ತೆ ಹಾಗೂ 9 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವ ಧನದ ಆಧಾರದ ಮೇಲೆ ಭರ್ತಿ ಮಾಡಲು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 23 ಕೊನೆಯ ದಿನ.

ಅಂಗನವಾಡಿ ಸಹಾಯಕಿಯರ ಹುದ್ದೆಗೆ 4ನೇ ತರಗತಿ, ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 18ರಿಂದ 35 ವರ್ಷಗಳು. [ಪೊಲೀಸ್ ನೇಮಕಾತಿ ವಿವರಗಳು]

job

ಅರ್ಜಿಗಳನ್ನು ಬನ್ನಿಮಂಟಪದ ಬಾಲಭವನ ಆವರಣದಲ್ಲಿರುವ ಮೈಸೂರು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿ, 2015ರ ಜುಲೈ 23ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 0821-2491962 ಸಂಖ್ಯೆಗೆ ಕರೆ ಮಾಡಬಹುದಾಗಿದೆ. [ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಿದ KPSC]

ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ : ಮೈಸೂರು ತಾಲ್ಲೂಕಿನ ಗೋಪಾಲಪುರ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಯನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 31, 2015. ಎಸ್‌ಎಸ್‌ಎಲ್‌ಸಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತರು ಗೋಪಾಲಪುರ ಗ್ರಾಮ ಪಂಚಾಯಿತಿ ಕಚೇರಿ, ಮೈಸೂರು ತಾಲ್ಲೂಕಿನ ಶಾಖಾ ಗ್ರಂಥಾಲಯದಿಂದ ಅರ್ಜಿ ಪಡೆಯಬಹುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 5,500 ರೂ. ಗೌರವ ಸಂಭಾವನೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ 0821-2425875 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+