ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ, ವಿವರಗಳು
ಕೊಪ್ಪಳ, ಜುಲೈ 09 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗಂಗಾವತಿ ತಾಲೂಕಿನ ಕನಕಗಿರಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ತೆರವಾಗಿರುವ 4 ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 12 ಕೊನೆಯ ದಿನ.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ 10ನೇ ತರಗತಿ, ಹಾಗೂ ಸಹಾಯಕಿಯರ ಹುದ್ದೆಗಳಿಗೆ 9ನೇ ತರಗತಿ ಪಾಸಾದ ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಗೋಲಿ, ಗೌರಿಪುರ, ಚಿಕ್ಕಡಂಕನಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಯಕರ್ತೆಯರ ಹುದ್ದೆಗಳು ಖಾಲಿ ಇವೆ. [ಮೈಸೂರಿನಲ್ಲಿ ಕೆಲಸ ಖಾಲಿ ಇದೆ, ವಿವರಗಳು]

ಸಹಾಯಕಿಯರ ಹುದ್ದೆಗಳು : ಮಲ್ಲಿಗೆವಾಡ, ಗುಡದೂರು, ನಾಗನಕಲ್, ಮೈಲಾಪುರ, ಕಿಂದಿಕ್ಯಾಂಪ್, ಆದಾಪುರ, ಕೆ. ಮಲ್ಲಾಪುರ, ಕಾರಟಗಿ, ಜೀರಾಳ, ಸಿಂಗನಾಳ, ಶ್ರೀರಾಮನಗರ, ಜಂಗಮರಕಲ್ಗುಡಿ ಮುಂತಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಹಾಯಕಿಯರ ಹುದ್ದೆಗಳು ಖಾಲಿ ಇವೆ. [ಕೆಪಿಎಸ್ ಸಿ ನೇಮಕಾತಿ ವಿವರಗಳು]
ಅರ್ಜಿಗಳನ್ನು ನಮೂನೆಗಳನ್ನು ಆಯಾ ಗ್ರಾಮ ಪಂಚಾಯಿತಿ, ಶಾಲಾ ಮುಖ್ಯಸ್ಥರು ಅಥವಾ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರ ಬಳಿ ಪಡೆದು, ವಿದ್ಯಾರ್ಹತೆಯ ಝೆರಾಕ್ಸ್ ಪ್ರತಿಯನ್ನು ಲಗತ್ತಿಸಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಕನಕಗಿರಿ ಗ್ರಾಮೀಣ ಇವರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ನವಲಿ ರಸ್ತೆ, ಕನಕಗಿರಿ ಗ್ರಾಮೀಣ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 8147965458.












Click it and Unblock the Notifications