ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಬುರಗಿ, ಕೊಪ್ಪಳದಲ್ಲಿ ಭತ್ಯೆ ಸಹಿತ ತರಬೇತಿಗೆ ಅರ್ಜಿ ಆಹ್ವಾನ

|
Google Oneindia Kannada News

ಕಲಬುರಗಿ, ಅಕ್ಟೋಬರ್ 21; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2022-23ನೇ ಸಾಲಿನಲ್ಲಿ ಕಾನೂನು ಪದವಿ ಪಡೆದವರಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲಿದೆ. ಇದಕ್ಕಾಗಿ ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದಾರೆ. ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಜನಾಂಗಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಕೆಎಂಎಫ್ ನೇಮಕಾತಿ; 487 ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ ಕೆಎಂಎಫ್ ನೇಮಕಾತಿ; 487 ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ

ಈ ಹಿಂದೆ ಆಯ್ಕೆಯಾದ 14 ಅಭ್ಯರ್ಥಿಗಳ ತರಬೇತಿ ಅವಧಿಯು 2022ರ ಅಕ್ಟೋಬರ್ 31 ಮುಕ್ತಾಯಗೊಳ್ಳಲಿದೆ. ಆದ್ದರಿಂದ ಖಾಲಿ 14 ಸ್ಥಾನಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಗ್ರಾಮ ಲೆಕ್ಕಿಗರ ನೇಮಕಾತಿ; ಸ್ಪರ್ಧಾತ್ಮಕ ಪರೀಕ್ಷೆ ಹೇಗಿರಲಿದೆ? ಗ್ರಾಮ ಲೆಕ್ಕಿಗರ ನೇಮಕಾತಿ; ಸ್ಪರ್ಧಾತ್ಮಕ ಪರೀಕ್ಷೆ ಹೇಗಿರಲಿದೆ?

Applications Invites For Judicial Administration Training

ಅರ್ಹತೆಗಳು; ಅರ್ಜಿ ಸಲ್ಲಿಸಲು ನಿಗದಿಪಡಿಸಿದ 3 ವರ್ಷದೊಳಗೆ ಅಭ್ಯರ್ಥಿಗಳು ವಕೀಲ ವೃತ್ತಿ ಕೈಗೊಳ್ಳಲು ನಿಗದಿಪಡಿಸಿದ ಕಾನೂನು ಪದವಿ ಪಡೆದಿರಬೇಕು. ತರಬೇತಿ ಅವಧಿ 4 ವರ್ಷ ಇದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಲಾ ಮಾಸಿಕ 4,000 ರೂ.ಗಳ ತರಬೇತಿ ಭತ್ಯೆ ನೀಡಲಾಗುವುದು.

KPSC ನೇಮಕಾತಿ; ಜಲ ಸಂಪನ್ಮೂಲ ಇಲಾಖೆ 169 ಇಂಜಿನಿಯರ್ ಹುದ್ದೆಗಳು KPSC ನೇಮಕಾತಿ; ಜಲ ಸಂಪನ್ಮೂಲ ಇಲಾಖೆ 169 ಇಂಜಿನಿಯರ್ ಹುದ್ದೆಗಳು

ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಅಕ್ಟೋಬರ್ 31ರ ಸಂಜೆ 5.30ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 9148489157.

ವಿದ್ಯಾರ್ಥಿಗಳಿಗೆ ವೃತ್ತಿ ತರಬೇತಿ; ಕೊಪ್ಪಳ ಸಮಾಜ ಕಲ್ಯಾಣ ವತಿಯಿಂದ 2022-23ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.

ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ನೀಡಲು 2ನೇ ಬಾರಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ವೆಬ್‌ಸೈಟ್ www.sw.kar.nic.in ನಲ್ಲಿ ಮತ್ತು ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ವೆಬ್‌ಸೈಟ್ www.tw.kar.nic.in ಮುಖಾಂತರ ಅರ್ಜಿ ಸಲ್ಲಿಸಬೇಕು.

ನವೆಂಬರ್ 2 ರಿಂದ ನ. 30 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಆನ್‌ಲೈನ್ ಅರ್ಜಿ ಪ್ರತಿಯೊಂದಿಗೆ ಸೂಕ್ತ ದಾಖಲಾತಿಗಳನ್ನು ತಮ್ಮ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಅಥವಾ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕು.

English summary
Karnataka backward classes welfare department invited applications for the judicial administration training. Candidates can apply till October 31.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X