ಐಡಿಬಿಐ ಬ್ಯಾಂಕ್‌ನಲ್ಲಿ 500 ಹುದ್ದೆಗಳು ಖಾಲಿ ಇವೆ

ಬೆಂಗಳೂರು, ಜೂ. 17 : ಐಡಿಬಿಐ ಬ್ಯಾಂಕ್‍ನಲ್ಲಿ ಸಹಾಯಕ ವ್ಯವಸ್ಥಾಪಕರ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 500 ಹುದ್ದೆಗಳಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 24, 2015.

ಇಂಡಸ್ಟ್ರಿಯಲ್ ಡೆವಲಪ್​ವೆುಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದಾದರು ಪದವಿ ಪಡೆದಿರಬೇಕು. ವಯೋಮಿತಿ 01-06-2015ಕ್ಕೆ 20 ರಿಂದ 28 ವರ್ಷದೊಳಗಿರಬೇಕು. ಗರಿಷ್ಟ ವಯೋಮಿತಿಯಲ್ಲಿ ಪರಿಶಿಷ್ಟಜಾತಿ/ಪಂಗಡ/ ಓಬಿಸಿ (ಕೇಂದ್ರ) ಇವರಿಗೆ ಕ್ರಮವಾಗಿ 5-3 ವರ್ಷ ರಿಯಾಯಿತಿ ಇರುತ್ತದೆ. [ನೇಮಕಾತಿ ಆದೇಶ ಓದಿ]

bank

ಅಭ್ಯರ್ಥಿಗಳು ಜೂನ್ 24ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಉಪಮುಖ್ಯಸ್ಥರು, ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಗ್ರಂಥಾಲಯ ಕಟ್ಟಡ, ಮಾನಸ ಗಂಗೋತ್ರಿ, ಮೈಸೂರು ವಿಶ್ವವಿದ್ಯಾಲಯ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 0821-2516844. [ಅರ್ಜಿ ಸಲ್ಲಿಸಲು ವಿಳಾಸ]

ಚಾಲನಾ ತರಬೇತಿಗೆ ಅರ್ಜಿ ಆಹ್ವಾನ : 2015-16ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದವರಿಗೆ ಚಾಲನಾ ತರಬೇತಿ ನೀಡುವ ಯೋಜನೆಯನ್ನು ಆರಂಭಿಸಲಾಗಿದೆ. ಉಪ ಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಯಶವಂತಪುರ, ಬೆಂಗಳೂರು (ಉತ್ತರ) ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.[ತುಮಕೂರು : ಬ್ಯಾಂಕ್ ನಲ್ಲಿ ಕೆಲಸ ಖಾಲಿ ಇದೆ]

8ನೇ ತರಗತಿ ಅಥವ ಎಸ್.ಎಸ್.ಎಲ್.ಸಿ. ಉತ್ತೀರ್ಣಗೊಂಡ ಪರಿಶಿಷ್ಟ ಜಾತಿಯ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಟೋರಿಕ್ಷಾ, ಹಾಗೂ ಲಘು ಮೋಟಾರು ವಾಹನ ತರಬೇತಿಯನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 10, 2015.

ವಿವರ ಮತ್ತು ಅರ್ಜಿಗಳಿಗಾಗಿ ಸಂಪರ್ಕಿಸಬೇಕಾದ ವಿಳಾಸ

ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ
ಬೆಂಗಳೂರು (ಉತ್ತರ)
2ನೇ ಮಹಡಿ, ಬೆಂಗಳೂರು ಮಹಾನಗರ ಪಾಲಿಕೆ ವಾಣಿಜ್ಯ ಸಂಕೀರ್ಣ
ಯಶವಂತಪುರ, ಬೆಂಗಳೂರು - 560022
ಸಮಯ ಬೆಳಗ್ಗೆ 10.30 ರಿಂದ ಸಂಜೆ 4.30

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+