ಕೊಡಗಿನಲ್ಲಿ ಕೆಲಸ ಖಾಲಿ ಇದೆ: ಹುದ್ದೆ, ಇತರ ವಿವರಗಳು
ಮಡಿಕೇರಿ, ಜನವರಿ 25: ಕೊಡಗು ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದಿದೆ. ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಯ 10 ಗ್ರಾಮ ಪಂಚಾಯಿತಿಗಳಿಗೆ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ, ಅರ್ಹರು ಅರ್ಜಿ ಸಲ್ಲಿಸಬಹುದು.
ಜಿಲ್ಲಾ ಪಂಚಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಆಯ್ಕೆ ಸಮಿತಿ ಸಭೆಯಲ್ಲಿ ಕೊಡಗು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಖಾಲಿ ಇರುವ 10 ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ರೋಸ್ಟರ್ ಬಿಂದುವನ್ನು ಗುರುತಿಸಿ ನೇಮಕಾತಿ ಮಾಡಲು ತೀರ್ಮಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕೊಡಗು ಜಿಲ್ಲೆಯ ವೆಬ್‍ಸೈಟ್‌ನಲ್ಲಿ https://kodogu.nic.in ಆನ್‍ಲೈನ್ ಮೂಲಕ ಭರ್ತಿ ಮಾಡಿ ಅಗತ್ಯ ದೃಢೀಕರಿಸಿದ ದಾಖಲೆಗಳೊಂದಿಗೆ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಯಾವ ಪಂಚಾಯಿತಿಗಳಿಗೆ ನೇಮಕ: ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು (ಪರಿಶಿಷ್ಟ ಜಾತಿ, ಸಾಮಾನ್ಯ). ಚೆನ್ನಯ್ಯನಕೋಟೆ (ಸಾಮಾನ್ಯ). ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ (ಪರಿಶಿಷ್ಟ ಪಂಗಡ, ಸಾಮಾನ್ಯ). ಕುಟ್ಟ (ಸಾಮಾನ್ಯ ಮಹಿಳಾ ಅಭ್ಯರ್ಥಿ).
ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ (ಪ್ರವರ್ಗ-1, ಸಾಮಾನ್ಯ). ಸೋಮವಾರಪೇಟೆ ತಾಲ್ಲೂಕಿನ ನಿಡ್ತ (ಸಾಮಾನ್ಯ, ಗ್ರಾ.ಅ.). ಕುಶಾಲನಗರ ತಾಲ್ಲೂಕಿನ ಶಿರಂಗಾಲ (ಪ್ರವರ್ಗ-2(ಎ), ಸಾಮಾನ್ಯ).
ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪ (ಸಾಮಾನ್ಯ, ಅಂ.ವಿ.,). ವಿರಾಜಪೇಟೆ ತಾಲ್ಲೂಕಿನ ಅರ್ಜಿ (ಪರಿಶಿಷ್ಟ ಜಾತಿ, ಮಹಿಳಾ ಅಭ್ಯರ್ಥಿ) ಹಾಗೂ ಪೊನ್ನಂಪೇಟೆ ತಾಲ್ಲೂಕಿನ ಕೆ.ಬಾಡಗ (ಸಾಮನ್ಯ, ಮಹಿಳಾ ಅಭ್ಯರ್ಥಿ) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳನ್ನು ಸಂಪರ್ಕಿಸಬಹುದು.
ಪ್ರವಾಸೋದ್ಯಮ ಇಲಾಖೆಯಿಂದ ಅರ್ಜಿ ಆಹ್ವಾನ: ಪ್ರವಾಸೋದ್ಯಮ ಇಲಾಖೆ 2024-25ನೇ ಸಾಲಿನಲ್ಲಿ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಇಂಟರ್‍ನ್‍ಶಿಪ್ ಪ್ರೋಗ್ರಾಂ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರವಾಸಿ ತಾಣದಲ್ಲಿ ಮೊಬೈಲ್ ಕ್ಯಾಂಟೀನ್ ವಾಹನವನ್ನು ಖರೀದಿಸಲು ಸಹಾಯಧನ ನೀಡಲು ಉದ್ದೇಶಿಸಿದೆ.
ಈ ತರಬೇತಿ ಹಾಗೂ ಸಹಾಯಧನಕ್ಕಾಗಿ ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ 2 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 1 ಅಭ್ಯರ್ಥಿಗಳ ಗುರಿಯನ್ನು ಪ್ರಸ್ತುತ ಸಾಲಿನಲ್ಲಿ ನಿಗದಿಪಡಿಸಿದೆ. ಈ ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮ ಜಾರಿಗೊಳಿಸಲು ಸಹ ಉದ್ದೇಶಿಸಲಾಗಿದೆ.
ಈ ತರಬೇತಿ ಕಾರ್ಯಕ್ರಮಗಳ ವಿವರ/ ಅಭ್ಯರ್ಥಿಗಳ ವಿದ್ಯಾರ್ಹತೆಯ ವಿವರ ಇಂಟರ್ನ್‌ಶಿಪ್ ಪ್ರೋಗ್ರಾಮ್ (ಇಪಿ) ಎಸ್‍ಸಿ/ ಎಸ್‍ಟಿ ಅಭ್ಯರ್ಥಿಗಳಿಗೆ ಕನಿಷ್ಠ ವಿದ್ಯಾರ್ಹತೆ 10ನೇ ತರಗತಿ, ತರಬೇತಿ ಅವಧಿ 1 ತಿಂಗಳು, 20 ರಿಂದ 45 ವರ್ಷದೊಳಗಿರಬೇಕು.
ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ 2, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಗುರಿ 1 ಆಗಿದೆ. ಈ ತರಬೇತಿಯನ್ನು ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜನವರಿ 31ರ ತನಕ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಕಛೇರಿಯಲ್ಲಿ ಅರ್ಜಿ ಪಡೆಯಬಹುದು.
ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಗಳಲ್ಲಿ ಜನವರಿ 31ರ ಸಂಜೆ 5 ಗಂಟೆಯೊಳಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಕಛೇರಿಗೆ ಸಲ್ಲಿಸಲು ತಿಳಿಸಿದೆ.
ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ 571201 ಸಂಪರ್ಕಿಸಿ, ದೂರವಾಣಿ ಸಂಖ್ಯೆ 08272-200519 ಅಥವಾ ಇ-ಮೇಲ್ [email protected].












Click it and Unblock the Notifications