ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ರಾಮ ಲೆಕ್ಕಿಗರ ನೇಮಕಾತಿ; 102 ಹುದ್ದೆಗಳಿಗೆ ಅರ್ಜಿ ಹಾಕಿ

|
Google Oneindia Kannada News

ಕಾರವಾರ, ಏಪ್ರಿಲ್ 11; ಉತ್ತರ ಕನ್ನಡ ಜಿಲ್ಲೆಯ ಕಂದಾಯ ಘಟಕದಲ್ಲಿ ಬರುವ ತಾಲೂಕು ಕಚೇರಿಗಳಲ್ಲಿ ಹಾಗೂ ಭೂಮಿ ಕೇಂದ್ರಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 10/5/2022.

ತಾಲೂಕ ಕಚೇರಿಗಳಲ್ಲಿ ಹಾಗೂ ಇತರೇ ತಾಲೂಕಿನ ಕಚೇರಿಗಳಲ್ಲಿ ಹೊಸದಾಗಿ ಸೃಜಿಸಲಾದ, ಮುಂಬಡ್ತಿ, ಘಟಕೀಯ ವರ್ಗಾವಣೆ, ವಯೋನಿವೃತ್ತಿಯಿಂದ ತೆರವಾದ ಗ್ರಾಮ ಲೆಕ್ಕಿಗ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಒಟ್ಟು 102 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಕೆ ಮಾಡಬೇಕು.

ನೈಋತ್ಯ ರೈಲ್ವೆ ನೇಮಕಾತಿ; 147 ಹುದ್ದೆ, ಹುಬ್ಬಳ್ಳಿಯಲ್ಲಿ ಕೆಲಸ ನೈಋತ್ಯ ರೈಲ್ವೆ ನೇಮಕಾತಿ; 147 ಹುದ್ದೆ, ಹುಬ್ಬಳ್ಳಿಯಲ್ಲಿ ಕೆಲಸ

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕರ್ನಾಟಕ ಪಿಯು ಬೋರ್ಡ್ ನಡೆಸುವ ಪಿಯೂಸಿ ಪರೀಕ್ಷೆ ಅಥವ ಸಿಬಿಎಸ್‌ಇ ಅಥವ ಐಸಿಎಸ್‌ಸಿ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ದೂರ ಶಿಕ್ಷಣದ ಮೂಲಕ ಪಿಯುಸಿ ಅಥವ ಸಮಾನಾಂತರ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಕೆ ಮಾಡಲು ಅರ್ಹರಲ್ಲ.

ಕರ್ನಾಟಕ ಬ್ಯಾಂಕ್ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ ಕರ್ನಾಟಕ ಬ್ಯಾಂಕ್ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ

Apply For 102 Village Accountant Post At Uttara Kannada

ವಯೋಮಿತಿ; ಅರ್ಜಿಗಳನ್ನು ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಗಿನ ವಯೋಮಿತಿಯನ್ನು ಹೊಂದಿರಬೇಕು. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮತಿ ಪರಿಶಿಷ್ಟ ಜಾರಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 40 ವರ್ಷಗಳು. 2ಎ/ 2ಬಿ/ 3ಎ/ 3ಬಿ 38 ವರ್ಷಗಳು, ಸಾಮಾನ್ಯ ವರ್ಗ 35 ವರ್ಷಗಳು.

RDPR Recruitment 2022 : ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿ; 6406 ಹುದ್ದೆಗಳು RDPR Recruitment 2022 : ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿ; 6406 ಹುದ್ದೆಗಳು

ಎಸ್ಎಸ್‌ಎಲ್‌ಸಿ ಅಂಕಪಟ್ಟಿ ಅಥವ ವರ್ಗಾವಣೆ ಪ್ರಮಾಣ ಪತ್ರದಲ್ಲಿ ನಮೂದಿಸಿರುವ ಜನ್ಮ ದಿನಾಂಕವನ್ನು ಆಯ್ಕೆ ಪ್ರಾಧಿಕಾರ ಪರಿಗಣಿಸುತ್ತದೆ. ಇತರೆ ಯಾವುದೇ ದಾಖಲಾತಿಯನ್ನು ಪರಿಗಣಿಸುವುದಿಲ್ಲ ಎಂದು ನೇಮಕಾತಿ ಆದೇಶ ಸ್ಪಷ್ಟಪಡಿಸಿದೆ.

ಅರ್ಜಿಗಳನ್ನು ಸಲ್ಲಿಕೆ ಮಾಡುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 100 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ (ಬ್ಯಾಂಕ್ ಶುಲ್ಕ ಪ್ರತ್ಯೇಕ). ಇತರೆ ಅಭ್ಯರ್ಥಿಗಳಿಗೆ 200 ರೂ. ಶುಲ್ಕವಿದೆ (ಬ್ಯಾಂಕ್ ಶುಲ್ಕ ಪ್ರತ್ಯೇಕ).

ಅಭ್ಯರ್ಥಿಗಳು ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿಲ್ಲ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಮಾಡಲು ವಿಳಾಸ http://uttarakannada.nic.in ಅರ್ಜಿ ಸಲ್ಲಿಕೆ ಮಾಡಿದ ಬಳಿಕ ಆನ್‌ಲೈನ್ ಮೂಲಕವೇ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

Apply For 102 Village Accountant Post At Uttara Kannada

ಹೆಚ್ಚಿನ ಮಾಹಿತಿಗಾಗಿ ಅರ್ಜಿ ಸಲ್ಲಿಕೆ ಮಾಡಲು ನೀಡಿರುವ ವೆಬ್ ಸೈಟ್‌ನಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಬೇಕು. ದೂರವಾಣಿ ಸಂಖ್ಯೆ 08382-229587 ಅಥವ [email protected] ವಿಳಾಸಕ್ಕೆ ಇ-ಮೇಲ್ ಮಾಡಬಹುದಾಗಿದೆ.

ಸೂಚನೆಗಳು; ಅರ್ಜಿ ಸಲ್ಲಿಸುವವರು ಭಾರತೀಯ ನಾಗರಿಕನಾಗಿರಬೇಕು. ಅಭ್ಯರ್ಥಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತನಾಗಿರಬೇಕು. ಅವರ ನೇಮಕಾತಿಯು ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವವಿರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತವಾಗಿರಬೇಕು.

ನಿಗದಿತ ಶೈಕ್ಷಣಿಕ ಅರ್ಹತೆಯ ಜೊತೆಗೆ ಈ ಮೇಲ್ಕಂಡ ಅರ್ಹತೆಗಳನ್ನು ಹೊಂದಿ ವಯೋಮಿತಿಯೊಳಗಿರುವ ಅಭ್ಯರ್ಥಿಗಳು ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಅರ್ಹತೆಯನ್ನು ಹೊಂದಿರುತ್ತಾರೆ.

ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆಯ ಎಲ್ಲಾ ವರ್ಷಗಳ ಅಂಕಪಟ್ಟಿಗಳು ಹಾಗೂ ಪ್ರಮಾಣ ಪತ್ರಗಳನ್ನು ಹೊಂದಿರಬೇಕು. ಜನನ ಪ್ರಮಾಣ ಪತ್ರ ಅಥವ ಜನ್ಮ ದಿನಾಂಕವನ್ನು ನಮೂದಿಸಿರುವ ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆಯ ಪತ್ರ ಹೊಂದಿರಬೇಕು.

ಸೂಚನೆಗಳು; ನೇಮಕಾತಿ ಬಗ್ಗೆ ಅಂತಿಮ ತೀರ್ಮಾನವನ್ನು ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಉತ್ತರ ಕನ್ನಡ ಜಿಲ್ಲೆ ಕಾರವಾರ ಇವರು ಕಾಯ್ದಿರಿಸಿಕೊಂಡಿರುತ್ತಾರೆ.

ಅಭ್ಯರ್ಥಿಯ ಹೆಸರು ಅಂತಿಮ ಆಯ್ಕೆ ಪಟ್ಟಿಯಲ್ಲಿ ಬಂದಿದೆ ಎಂಬುದರ ಆಧಾರದ ಮೇಲೆ ಅಭ್ಯರ್ಥಿಗೆ ನೇಮಕಾತಿಯ ಯಾವುದೇ ಹಕ್ಕು ದೊರೆಯುವುದಿಲ್ಲ. ಆಯ್ಕೆಯ ಸಂಬಂಧವಾಗಿ ಈ ಕಚೇರಿಯೊಂದಿಗೆ ಯಾವುದೇ ಪತ್ರ ವ್ಯವಹಾರಕ್ಕೆ ಸಹ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

English summary
Apply For 102 village accountant post at Uttara Kannada district. Candidates can apply online till May 10, 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X