ಕೆಯುಐಡಿಎಫ್‌ಸಿಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್, ಸಹಾಯಕ ಇಂಜಿನಿಯರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್‌ಸಿ) ಯಿಂದ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುಬ್ಬಳ್ಳಿ ಧಾರವಾಡ, ಬೆಳಗಾವಿ ಮತ್ತು ಕಲಬುರ್ಗಿ ವಿಭಾಗಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ವಿಭಾಗದದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಆಗಸ್ಟ್ 18ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಒಂದು ವರ್ಷದ ಅವಧಿಗೆ ಮಾತ್ರ ನೇಮಕ ಮಾಡಲಾಗುತ್ತಿದ್ದು ನಂತರ ಉದ್ಯೋಗಿಗಳ ಕಾರ್ಯಕ್ಷಮತೆಯ ಮಾನದಂಡದ ಮೇಲೆ ಗುತ್ತಿಗೆ ಅವಧಿಯನ್ನು ವಿಸ್ತರಣೆ ಮಾಡುವ ಇಲ್ಲವೆ ಕೊನೆಗೊಳಿಸುವ ನಿರ್ಧಾರ ಮಾಡಲಾಗುತ್ತದೆ.

ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

Apply For 11 Executive Engineer MIS Expert Post In KUIDFC

ಸಂಸ್ಥೆಯ ಹೆಸರು: ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ
ಖಾಲಿ ಇರುವ ಹುದ್ದೆಗಳು: ಎಕ್ಸಿಕ್ಯೂಟಿವ್ ಇಂಜಿನಿಯರ್, ಎಂಐಎಸ್ ಪರಿಣಿತರು
ಖಾಲಿ ಇರುವ ಹುದ್ದೆಗಳ ಸಂಖ್ಯೆ: 11
ಉದ್ಯೋಗ ಸ್ಥಳ: ಹುಬ್ಬಳ್ಳಿ, ಕಲಬುರಗಿ, ಬೆಳಗಾವಿ, ಬೆಂಗಳೂರು,

ಹುದ್ದೆಗಳು, ವಿದ್ಯಾರ್ಹತೆ, ವಯೋಮಿತಿ, ವೇತನದ ವಿವರ

5 ಕಾರ್ಯನಿರ್ವಾಹಕ ಇಂಜಿನಿಯರ್ ಹುದ್ದೆಗಳು ಖಾಲಿ ಇದ್ದು ಬಿಇ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಯೋಮಿತಿ ಗರಿಷ್ಠ 65 ವರ್ಷಗಳು. ವೇತನ ಮಾಸಿಕ 86,510 ರುಪಾಯಿ ನಿಗದಿಪಡಿಸಲಾಗಿದೆ.

2 ಸಹಾಯಕ ಇಂಜಿನಿಯರ್ ಹುದ್ದೆಗಳು ಖಾಲಿ ಇದ್ದು ಬಿಇ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಯೋಮಿತಿ ಗರಿಷ್ಠ 45 ವರ್ಷಗಳು. ವೇತನ ಮಾಸಿಕ 65,789 ರುಪಾಯಿ ನಿಗದಿಪಡಿಸಲಾಗಿದೆ.

Apply For 11 Executive Engineer MIS Expert Post In KUIDFC

ಎಂಐಎಸ್‌ ತಜ್ಞ ವಿಭಾಗದಲ್ಲಿ ಒಂದು ಹುದ್ದೆ ಖಾಲಿ ಇದ್ದು, ಎಲೆಕ್ಟ್ರಾನಿಕ್ಸ್​, ಕಮ್ಯೂನಿಕೇಷನ್​, ಸಿಎಸ್​, ಐಟಿಯಲ್ಲಿ ಬಿಇ ಪದವಿ ಪಡೆದಿರುವ, 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 69116 ರುಪಾಯಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.

ಹಣಕಾಸು ವಿಭಾಗದ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿಎ, ಫೈನಾನ್ಸ್​ನಲ್ಲಿ ಎಂಬಿಎ ವಿಷಯದಲ್ಲಿ ಪದವಿ ಪಡೆದಿರಬೇಕು. 69116 ರುಪಾಯಿ ಮಾಸಿಕ ವೇತನ ನೀಡಲಾಗುತ್ತದೆ.

ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಭಾಗದಲ್ಲಿ 2 ಹುದ್ದೆಗಳು ಖಾಲಿ ಇದ್ದು, ಸಮಾಜವಿಜ್ಞಾನ, ಸಮಾಜ ಕಾರ್ಯ, ಸಂವಹನದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳ ವಯಸ್ಸು 45 ಮೀರಿರಬಾರದು, ಆಯ್ಕೆಯಾದ ಅಭ್ಯರ್ಥಿಗಳು 69116 ರುಪಾಯಿ ಮಾಸಿಕ ವೇತನ ಪಡೆಯುತ್ತಾರೆ.

ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಹತೆ ಮತ್ತು ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್: kuidfc.com ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ. ನಂತರ ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಫೋಟೊ, ಅಗತ್ಯ ದಾಖಲೆಗಳನ್ನು ಅರ್ಜಿಯಲ್ಲಿ ದಾಖಲಿಸಲು ಕೋರಲಾಗಿದೆ. ಎಲ್ಲಾ ಮಾಹಿತಿ ಪೂರ್ಣಗೊಳಿಸಿದ ನಂತರ, ನಮೂದಿಸಿರುವ ವಿವರಗಳು ಸರಿಯಾಗಿವೆಯೇ ಎಂದು ಮತ್ತೊಮ್ಮೆ ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+