ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಡಗು; 11 ಅತಿಥಿ ಶಿಕ್ಷಕರ ಹುದ್ದೆ, ಅಕ್ಟೋಬರ್ 30ರೊಳಗೆ ಅರ್ಜಿ ಹಾಕಿ

|
Google Oneindia Kannada News

ಕೊಡಗು, ಅಕ್ಟೋಬರ್ 13; ಕೊಡಗು ಜಿಲ್ಲೆಯಲ್ಲಿ 11 ಅತಿಥಿ ಶಿಕ್ಷಕರನ್ನು ಗೌರವಧನದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಅಕ್ಟೋಬರ್ 30 ಕೊನೆ ದಿನವಾಗಿದೆ.

ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ ಪ್ರತಿ ಶಾಲೆಗೆ ಒಬ್ಬರಂತೆ 11 ಜನ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ.

ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ನೇಮಕಾತಿ; ಸಿಹಿಸುದ್ದಿ ಕೊಟ್ಟ ಸರ್ಕಾರಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ನೇಮಕಾತಿ; ಸಿಹಿಸುದ್ದಿ ಕೊಟ್ಟ ಸರ್ಕಾರ

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿರುವಂತೆ ಗೌರವಧನ ಮಾಸಿಕ 7,500 ರೂ. ನಿಗದಿ ಮಾಡಲಾಗಿದೆ. ಅರ್ಜಿಗಳನ್ನು ಸಲ್ಲಿಸುವವರು ಕಡ್ಡಾಯವಾಗಿ ಇಂಗ್ಲೀಷ್ ಐಚ್ಛಿಕ ವಿಷಯದಲ್ಲಿ ಪದವಿ ಮತ್ತು ಬಿ.ಎಡ್ ಪೂರ್ಣಗೊಳಿಸಿರಬೇಕು.

ನಬಾರ್ಡ್ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ, ತಕ್ಷಣ ಅರ್ಜಿ ಹಾಕಿನಬಾರ್ಡ್ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ, ತಕ್ಷಣ ಅರ್ಜಿ ಹಾಕಿ

Apply For 11 Guest Teacher Post At Kodagu

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಅರ್ಜಿಗಳನ್ನು ಮಂಡಿಸಿ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ರೈಲ್ವೆ ನೇಮಕಾತಿ: 4103 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ ರೈಲ್ವೆ ನೇಮಕಾತಿ: 4103 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ, ಜಿಲ್ಲಾ ಪಂಚಾಯತ್ ಕಟ್ಟಡ ಇಲ್ಲಿಗೆ ಸಲ್ಲಿಸಬೇಕು.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08272-200500 ಅನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿಗಳು ತಿಳಿಸಿದ್ದಾರೆ.

ಅಪ್ರೆಂಟಿಸ್ ತರಬೇತಿ; ಹಾಸನ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳುವ ಮತ್ತು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 10 ತಿಂಗಳ ಅಪ್ರೆಂಟಿಸ್ ತರಬೇತಿ ನೀಡುತ್ತಿದೆ.

2021-22 ನೇ ಸಾಲಿನ ಹಾಸನ ಜಿಲ್ಲಾ ಕಚೇರಿಯಲ್ಲಿ ಅಪ್ರೆಂಟಿಸ್ ತರಬೇತಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದು.

ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 15 ಸಾವಿರ ರೂ. ಗಳ ಸೈಫಂಡ್ ನೀಡಲಾಗುತ್ತದೆ. ಇಲಾಖೆಯ ಕ್ಷೇತ್ರಗಳಲ್ಲಿ ಸುದ್ದಿ ಸಂಗ್ರಹ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆ ದಿನ. ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಕನ್ನಡ ಭಾಷೆಯಲ್ಲಿ ಪ್ರಬುದ್ಧತೆ ಇರಬೇಕು.

ಅಭ್ಯರ್ಥಿಗಳು ಅರ್ಜಿಯೊಂದಿಗೆ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಸ್ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇತರೆ ಪೂರಕ ದಾಖಲೆಗಳನ್ನು ದ್ವಿಪ್ರತಿಯಲ್ಲಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬಿ. ಎಂ ರಸ್ತೆ, ಹಾಸನ ಇಲ್ಲಿಗೆ ಭೇಟಿ ನೀಡಬಹುದು.

ತರಬೇತಿಗೆ ಅರ್ಜಿ ಹಾಕಿ; ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ ದೇಶದ ಪಾಲಿಮರ್/ ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡುತ್ತಿದೆ.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ 2021-22ನೇ ಸಾಲಿನ ಡಿಪ್ಲೊಮಾ ಮತ್ತು ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೊಮಾ ನೇರ ಪ್ರವೇಶ ಪಡೆಯಲು ಕೊನೆಯ ದಿನಾಂಕವನ್ನು 20/10/2021ರ ತನಕ ವಿಸ್ತರಿಸಲಾಗಿದೆ. ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ 3 ವರ್ಷ. ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ 3 ವರ್ಷ, ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಪ್ರೋಸೆಸ್ಸಿಂಗ್ & ಟೆಸ್ಟಿಂಗ್ 2 ವರ್ಷವಾಗಿದೆ.

ಈ ಕೋರ್ಸ್‌ಗಳಿಗೆ ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಸಿಪೆಟ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಎಸ್. ಎಸ್. ಎಲ್. ಸಿ, ಪಿ. ಯು. ಸಿ. (ವಿಜ್ಞಾನ) , ಐಟಿಐ (ಫಿಟ್ಟರ್, ಟರ್ನರ್, ಮೆಷಿನಿಸ್ಟ್) ಮತ್ತು ಬಿ.ಎಸ್.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು/ ಹಾಜರಾದವರು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ 0821-2510618 / 9791431827/ 9480253024 / 9141075968 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

English summary
Applications invited from candidates for 11 guest teacher recruitment at Kodagu district. Candidates can apply till October 30, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X