ವಿವಿಧ ಹುದ್ದೆಗೆ ತುಮಕೂರು ಜಿಲ್ಲಾಧಿಕಾರಿ ಕಚೇರಿಯಿಂದ ಅರ್ಜಿ ಆಹ್ವಾನ
ತುಮಕೂರು, ಜುಲೈ 14; ತುಮಕೂರು ಜಿಲ್ಲಾಧಿಕಾರಿ ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜಿಲ್ಲೆಯ ಪುರಸಭೆಗಳಲ್ಲಿ ಖಾಲಿ ಇರುವ ಒಟ್ಟು 11 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಜಿಲ್ಲೆಯ ತಾಲೂಕುಗಳಲ್ಲಿ ಖಾಲಿ ಇರುವ 6 ಲೋಡರ್ ಮತ್ತು 1 ಕ್ಲೀನರ್ ಹುದ್ದೆಗಳಲ್ಲಿ ಕೆಲಸ ಮಾಡಲು ಸಿದ್ದವಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಚಿಕ್ಕನಾಯಕನಹಳ್ಳಿ ಪುರಸಭೆಯಲ್ಲಿ ಲೋಡರ್, ಕ್ಲೀನರ್ಸ್ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ, ಹೊರಗುತ್ತಿಗೆ ಕಾರ್ಯದಡಿ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಹೊರಗುತ್ತಿಗೆ ಕಾರ್ಮಿಕರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

ತುರುವೇಕೆರೆ ಪಟ್ಟಣ ಪಂಚಾಯಿತಿಯಲ್ಲಿ 4 ಲೋಡರ್ ಹುದ್ದೆ ಖಾಲಿ ಇದ್ದು, ತುರುವೇಕೆರೆ ಪುರಸಭೆಯಲ್ಲಿ ಲೋಡರ್ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ, ಹೊರಗುತ್ತಿಗೆ ಕಾರ್ಯದಡಿ ಕೆಲಸ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಕ್ಕಾಗಿ ತುಮಕೂರು ನಗರಾಭಿವೃದ್ಧಿ ಕೋಶ ಮತ್ತು ಆಯಾ ನಗರ ಸ್ಥಳೀಯ ಸಂಸ್ಥೆಗಳನ್ನು ಸಂಪರ್ಕಿಸಬಹುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ 17000-28950 ರುಪಾಯಿ ವೇತನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕನ್ನಡ ಮಾತನಾಡಲು ತಿಳಿದಿರಬೇಕು. ವಿದ್ಯಾರ್ಹತೆ ಅನ್ವಯಿಸುವುದಿಲ್ಲ.
ವಯೋಮಿತಿ: ಜಿಲ್ಲಾಧಿಕಾರಿ ಕಚೇರಿ ತುಮಕೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55 ವರ್ಷಗಳನ್ನು ಹೊಂದಿರಬೇಕು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು. 30 ಜುಲೈ 2022 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ tumkur.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.
ನಿಗದಿತ ಅರ್ಜಿಗಳನ್ನು ತುಮಕೂರು ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಚೇರಿ ಮತ್ತು ಚಿಕ್ಕನಾಯಕನಹಳ್ಳಿ ಪುರಸಭೆ, ತುರುವೇಕೆರೆ ಪಟ್ಟಣ ಪಂಚಾಯಿತಿಯಲ್ಲಿ ಪಡೆಯಬಹುದು.
ಅರ್ಜಿದಾರರು ಅರ್ಜಿ ನಮೂನೆಯನ್ನು ಪಡೆದ ಬಳಿಕ ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ, ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ (DUDC), ತುಮಕೂರು ಇಲ್ಲಿಗೆ ಖುದ್ದು ಅಥವಾ ಪೋಸ್ಟ್ ಮೂಲಕ ಸಲ್ಲಿಸಬೇಕು.











Click it and Unblock the Notifications