ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಾಗಲಕೋಟೆ ಸಹಕಾರ ಬ್ಯಾಂಕ್ ನೇಮಕಾತಿ; 110 ಹುದ್ದೆಗೆ ಅರ್ಜಿ ಹಾಕಿ

|
Google Oneindia Kannada News

ಬಾಗಲಕೋಟೆ, ಮಾರ್ಚ್ 12; ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಬಾಗಲಕೋಟೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 4/4/2022ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ 110 ವಿವಿಧ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಾಗಿದೆ. ಖುದ್ದಾಗಿ/ ಅಂಚೆ/ ಕೋರಿಯರ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿಲ್ಲ.

ವಾರ್ತಾ ಇಲಾಖೆ; 289 ಹುದ್ದೆಗಳಿಗೆ ಶೀಘ್ರವೇ ನೇಮಕಾತಿವಾರ್ತಾ ಇಲಾಖೆ; 289 ಹುದ್ದೆಗಳಿಗೆ ಶೀಘ್ರವೇ ನೇಮಕಾತಿ

ಸಾಫ್ಟ್‌ವೇರ್ ಇಂಜಿನಿಯರ್ 1, ಸಿವಿಲ್ ಇಂಜಿನಿಯರ್ 1, ಗಣಕಯಂತ್ರ ಸಂಯೋಜಕ 2, ಪ್ರಥಮ ದರ್ಜೆ ಸಹಾಯಕರು 20, ದ್ವಿತೀಯ ದರ್ಜೆ ಸಹಾಯಕರು 30, ಸಿಪಾಯಿ 54, ವಾಹನ ಚಾಲಕ 2 ಸೇರಿದಂತೆ ಒಟ್ಟು 110 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಬಿಎಂಟಿಸಿ ಅಪ್ರೆಂಟಿಸ್ ನೇಮಕಾತಿ; 300 ಹುದ್ದೆಗಳಿಗೆ ಅರ್ಜಿ ಹಾಕಿ ಬಿಎಂಟಿಸಿ ಅಪ್ರೆಂಟಿಸ್ ನೇಮಕಾತಿ; 300 ಹುದ್ದೆಗಳಿಗೆ ಅರ್ಜಿ ಹಾಕಿ

Apply For 110 Post At District Cooperative Central Bank Bagalkot

ವಯೋಮಿತಿ ವಿವರ; ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು 18 ವರ್ಷಗಳಾಗಿರಬೇಕು. ಕರ್ನಾಟಕ ರಾಜ್ಯ ಸರ್ಕಾರದ ರಿತ್ಯಾ ಈ ಕೆಳಕಂಡ ವಯೋಮಿತಿ ನಿಗದಿ ಮಾಡಲಾಗಿದೆ.

ಸಿವಿಲ್ ಕಾನ್ಸ್‌ಟೇಬಲ್ ಹುದ್ದೆಗಳ ಹಂಚಿಕೆ; ಏಪ್ರಿಲ್‌ನಿಂದ ನೇಮಕಾತಿಸಿವಿಲ್ ಕಾನ್ಸ್‌ಟೇಬಲ್ ಹುದ್ದೆಗಳ ಹಂಚಿಕೆ; ಏಪ್ರಿಲ್‌ನಿಂದ ನೇಮಕಾತಿ

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ. ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ (2ಎ, 2ಬಿ, 3ಎ, 3ಬಿ) ಅಭ್ಯರ್ಥಿಗಳಿಗೆ 38 ವರ್ಷಗಳು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು.

ಮಾಜಿ ಸೈನಿಕ ಅಭ್ಯರ್ಥಿಗೆ ಕನಿಷ್ಠ 15 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿರಬೇಕು ಹಾಗೂ 45 ವರ್ಷ ಮೀರರಬಾರದು. ಅಂಗವಿಕಲ/ ವಿಧವೆ ಅಭ್ಯರ್ಥಿಗೆ ಗರಿಷ್ಠ ವಯೋಮಿತಿ ಮೇಲ್ಕಂಡಂತೆ ವರ್ಗವಾರು ನಿಗದಿಪಡಿಸಿರುವ ವಯೋಮಿತಿಗೆ 10 ವರ್ಷ ಸೇರಿಸಿ ಪರಿಗಣಿಸಲಾಗುತ್ತದೆ.

ಅರ್ಜಿ ಶುಲ್ಕ; ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ಹಾಗೂ ಹಿಂದುಳಿದ ಅಭ್ಯರ್ಥಿಗಳಿಗೆ 1000 ರೂ., ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1, ಅಂಗವಿಕಲ ಹಾಗೂ ಮಾಜಿ ಸೈನಿಕ ಮತ್ತು ವಿಧವಾ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್‌/ ಕ್ರೆಡಿಟ್ ಕಾರ್ಡ್‌/ ಆನ್‌ಲೈನ್/ ಯುಪಿಐ ಮೂಲಕ ಪಾವತಿ ಮಾಡಬೇಕು.

ಅರ್ಜಿಗಳನ್ನು ಸಲ್ಲಿಕೆ ಮಾಡಲು ಮತ್ತು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.bagalkotdccbank.com

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವಾಗ ಯಾವುದಾದರೂ ತಾಂತ್ರಿಕ ತೊಂದರೆ ಅಥವ ಸಮಸ್ಯೆ ಎದುರಾದಲ್ಲಿ ಸಹಾಯವಾಣಿ ಸಂಖ್ಯೆ 9036072155 ನಂಬರ್‌ಗೆ ಕರೆ ಮಾಡಬಹುದಾಗಿದೆ ಅಥವ [email protected] ವಿಳಾಸಕ್ಕೆ ಇ-ಮೇಲ್‌ ಕಳಿಸಬಹುದಾಗಿದೆ.

ಸೂಚನೆಗಳು

* ಲಿಖಿತ ಪರೀಕ್ಷೆಗೆ ಅರ್ಹವಿರುವ ಅಭ್ಯರ್ಥಿಗಳಿಗೆ ಮಾತ್ರವೇ ಪ್ರವೇಶ ಪತ್ರ ಹಾಗೂ ಲಿಖಿತ ಪರೀಕ್ಷೆಯ ದಿನಾಂಕ, ಸ್ಥಳ ಮತ್ತು ಸಮಯವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ತಿಳಿಸಲಾಗುತ್ತದೆ. ಅಭ್ಯರ್ಥಿಗಳು ವೆಬ್ ಸೈಟ್ ಮೂಲಕ ಹಾಲ್ ಟಿಕೆಟ್ ಡೌನ್ ಲೋಡ್ ಮಾಡಿಕೊಳ್ಳಬೇಕು. ಲಿಖಿತ ಪರೀಕ್ಷೆ/ ಸಂದರ್ಶನಕ್ಕೆ ಅಭ್ಯರ್ಥಿಗಳು ಸ್ವಂತ ಖರ್ಚಿನಲ್ಲಿ ಹಾಜರಾಗಬೇಕಿದೆ.

* ಆನ್‌ಲೈನ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡುವಾಗ ವೆಬ್‌ಸೈಟ್‌ನಲ್ಲಿ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಸ್ಪಷ್ಟ ಮಾಹಿತಿ ಇಲ್ಲದ, ಅಪೂರ್ಣ ಮಾಹಿತಿಯ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

* ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದಲ್ಲಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿ, ಪ್ರತ್ಯೇಕವಾಗಿ ಶುಲ್ಕವನ್ನು ಪಾವತಿ ಮಾಡಬೇಕು. ಒಮ್ಮೆ ಪಾವತಿ ಮಾಡಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ವಾಪಸ್ ನೀಡಲಾಗುವುದಿಲ್ಲ.

* ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಅಪ್‌ಲೋಡ್ ಮಾಡಬೇಕಾದ ದಾಖಲೆಗಳನ್ನು ಸ್ಪಷ್ಟವಾಗಿ ಕಾಣುವಂತೆ ಮತ್ತು ಓದಲು ಅನುಕೂಲವಾಗುವಂತೆ ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಬೇಕು. ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆ ಹೊರತುಪಡಿಸಿ ಬೇರೆ ವಿದ್ಯಾರ್ಹತೆ ಪರಿಗಣಿಸಲಾಗುವುದಿಲ್ಲ.

* ಅಗತ್ಯವಿರುವ ಹುದ್ದೆಗಳಿಗೆ ಅಗತ್ಯ ವಿದ್ಯಾರ್ಹತೆ ನಂತರ ಆಯಾ ಹುದ್ದೆಗೆ ಸಂಬಂಧಪಟ್ಟ ಸೇವಾ ಅನುಭವದ ದೃಡೀಕರಣ ಪತ್ರವನ್ನು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ಅಪ್ ಲೋಡ್ ಮಾಡಬೇಕು.

English summary
District cooperative central bank Bagalkot invited applications for 110 post. Candidates can apply online till April 4, 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X