ಕೊಪ್ಪಳ ನ್ಯಾಯಾಲಯದಲ್ಲಿ 12 ಹುದ್ದೆಗಳು ಖಾಲಿ ಇವೆ

ಕೊಪ್ಪಳ, ಸೆಪ್ಟೆಂಬರ್ 29 : ಕೊಪ್ಪಳ ಜಿಲ್ಲಾ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ 12 ಶೀಘ್ರ ಲಿಪಿಗಾರರ (Stenographer)ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 19, 2015.

ಒಟ್ಟು 12 ಹುದ್ದೆಗಳಲ್ಲಿ ಹೈದ್ರಾಬಾದ್-ಕರ್ನಾಟಕ ಸ್ಥಳೀಯ ವೃಂದಕ್ಕೆ 9 ಹುದ್ದೆಗಳನ್ನು ಮೀಸಲಾಗಿಡಲಾಗಿದೆ. ಅಕ್ಟೋಬರ್ 19ರ ಸಂಜೆ 5.45ರೊಳಗೆ ಅರ್ಜಿಗಳನ್ನು ಅಭ್ಯರ್ಥಿಗಳು ಸಲ್ಲಿಸಬಹುದಾಗಿದೆ. ಸ್ವಂತ ಕೈ ಬರಹದಿಂದಲೇ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸಬೇಕು. [ಅರ್ಜಿ ನಮೂನೆಗಾಗಿ ಕ್ಲಿಕ್ ಮಾಡಿ]

koppala

ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ದರ್ಜೆ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು. [ಉತ್ತರ ಕನ್ನಡದಲ್ಲಿ ಕೆಲಸ ಖಾಲಿ ಇದೆ]

ಕರ್ನಾಟಕ ತಾಂತ್ರಿಕ ಶಿಕ್ಷಣ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಾಸ ಮಾಡಿದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ : ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, 2ಎ/2ಬಿ/3ಎ/3ಬಿ ವರ್ಗದವರಿಗೆ 38 ಹಾಗೂ ಪ.ಜಾ/ಪ.ಪಂ/ಪ್ರವರ್ಗ - 1 ರ ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಅಕ್ಟೋಬರ್ 19ರೊಳಗೆ ಅರ್ಜಿಯೊಂದಿಗೆ ಅಗತ್ಯ ದಾಖಲೆ ಮತ್ತು 5ರೂ.ಗಳ ಅಂಚೆ ಚೀಟಿ ಹೊಂದಿರುವ ಸ್ವ-ವಿಳಾಸದ ಲಕೋಟೆಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೊಪ್ಪಳ ಇವರಿಗೆ ಸಲ್ಲಿಸಬಹುದಾಗಿದೆ. [ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ನೋಡಿ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+