13 ಶೀಘ್ರಲಿಪಿಗಾರರ ಹುದ್ದೆಗೆ ಅರ್ಜಿ ಸಲ್ಲಿಸಿ

ಬೆಂಗಳೂರು, ಜನವರಿ 27; ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 25/2/2021ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಬೆಂಗಳೂರು, ಬೆಳಗಾವಿ ಮತ್ತು ಕಲಬುರಗಿ ಪೀಠದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಒಟ್ಟು 13 ಹುದ್ದೆಗಳಿದ್ದು, 30350-58250 ರೂ.ಗಳ ವೇತನ ಶ್ರೇಣಿ ನಿಗದಿ ಮಾಡಲಾಗಿದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆ ಪ್ರೌಢ ದರ್ಜೆ (ಸೀನಿಯರ್ ಗ್ರೇಡ್) ಹಾಗೂ ಆಂಗ್ಲ ಮತ್ತು ಕನ್ನಡ ಭಾಷೆಯ ಶೀಘ್ರಲಿಪಿ ಪ್ರೌಢ ದರ್ಜೆ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

Apply For 13 Stenographer Post

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವ ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ತುಂಬಿರಬೇಕು. ಸಾಮಾನ್ಯ ವರ್ಗ 35, ಎಸ್‌ಸಿ/ ಎಸ್‌ಟಿ/ ಪ್ರವರ್ಗ -1ರ ಅಭ್ಯರ್ಥಿಗಳಿಗೆ 40 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ಸಾಮಾನ್ಯ, ಒಬಿಸಿ ವರ್ಗದ ಅಭ್ಯರ್ಥಿಗಳು 150 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಇತರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಶುಲ್ಕವನ್ನು ಐಪಿಒ/ ಡಿಡಿ ಮೂಲಕ ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆ. ಜಿ. ರಸ್ತೆ, ಬೆಂಗಳೂರು 560009 ಇವರ ಹೆಸರಿಗೆ ಸಂದಾಯವಾಗುವಂತೆ ಪಡೆದು ಅರ್ಜಿಯೊಂದಿಗೆ ಲಗತ್ತಿಸಬೇಕು.

ಅಭ್ಯರ್ಥಿಗಳು ವೆಬ್ ಸೈಟ್‌ನಲ್ಲಿ ಅರ್ಜಿ ಡೌನ್ ಲೋಡ್ ಮಾಡಿಕೊಳ್ಳಬೇಕು. ನಂತರ ಭರ್ತಿ ಮಾಡಿ ಅಗತ್ಯ ದಾಖಲೆಗಳ ಜೊತೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ವಿಳಾಸ; ವಿಲೇಖನಾಧಿಕಾರಿ, ಶೀಘ್ರಲಿಪಿಗಾರರ ಹುದ್ದೆಗಳ ನೇಮಕಾತಿ ಪ್ರಾಧಿಕಾರ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆಂಪೇಗೌಡ ರಸ್ತೆ, ಬೆಂಗಳೂರು 560009. ಅರ್ಜಿಗಳನ್ನು ಅಂಚೆ ಅಥವ ಖುದ್ದಾಗಿ ಸಲ್ಲಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+