ಹೊಸಕೋಟೆ; ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಹಾಕಿ
ಬೆಂಗಳೂರು, ಮಾರ್ಚ್ 31; ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 15 ಅಂಗನವಾಡಿ ಕಾರ್ಯಕರ್ತೆ ಮತ್ತು 36 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಆಫ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಆಸಕ್ತರು ಮತ್ತು ಅರ್ಹರು 2023ರ ಏಪ್ರಿಲ್ 24 ರವರೆಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ ಎಂದು ಪ್ರಕಟಣೆ ಹೇಳಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಹೊಸಕೋಟೆ ತಾಲೂಕಿನ ಶಿಶು ಅಭಿವೃದ್ದಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ 15 ಅಂಗನವಾಡಿ ಕಾರ್ಯಕರ್ತೆ ಮತ್ತು 36 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ.

ನಿಗದಿ ಪಡಿಸಿದ ವಿದ್ಯಾರ್ಹತೆ ಹೊಂದಿರುವ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಕಛೇರಿ ವೇಳೆಯಲ್ಲಿ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾ ಕಛೇರಿ, ಹೊಸಕೋಟೆ ಇಲ್ಲಿ ಪಡೆದು, ಏಪ್ರಿಲ್ 24 ರವರೆಗೆ ಭರ್ತಿ ಮಾಡಿ ಸಲ್ಲಿಸುವುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ನಿಗದಿತ ದಿನಾಂಕ ಮತ್ತು ಸಮಯದೊಳಗೆ ಎಲ್ಲಾ ದಾಖಲಾತಿಗಳನ್ನೊಳಗೊಂಡ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಟಿ.ಎ.ಪಿ.ಸಿ.ಎಂ.ಎಸ್. ಆವರಣ, ಹೊಸಕೋಟೆ ಇಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080 27931493 ಹಾಗೂ ಹೊಸಕೋಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ಧಾರವಾಡದಲ್ಲಿಯೂ ಕೆಲಸ ಖಾಲಿ ಇದೆ; ಧಾರವಾಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆ ಕಲಘಟಗಿ ವ್ಯಾಪ್ತಿಯಲ್ಲಿ 2022-23 ನೇ ಸಾಲಿನ ಖಾಲಿ ಇರುವ 11 ಅಂಗನವಾಡಿ ಕಾರ್ಯಕರ್ತೆ ಹಾಗೂ 26 ಅಂಗನವಾಡಿ ಸಹಾಯಕಿಯರನ್ನು ಹುದ್ದೆಗಳಿಗೆ ಆಯ್ಕೆ ಮಾಡಲು ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕಲಘಟಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಏಪ್ರಿಲ್ 25ರೊಳಗಾಗಿ ಕಲಘಟಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಲು ದೂರವಾಣಿ ಸಂಖ್ಯೆ 08370-284532.
ಕುಂದಗೋಳದಲ್ಲಿಯೂ ಕೆಲಸ ಖಾಲಿ ಇದೆ; ಧಾರವಾಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆ ಕುಂದಗೋಳ ತಾಲೂಕ ವ್ಯಾಪ್ತಿಯಲ್ಲಿಯೂ 2022-23ನೇ ಸಾಲಿನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆಯ್ಕೆ ಮಾಡಲು ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಕುಂದಗೋಳ ತಾಲೂಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಏಪ್ರಿಲ್ 22ರೊಳಗೆ ಕುಂದಗೋಳ ತಾಲೂಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು 08304-290561.












Click it and Unblock the Notifications