ಆರೋಗ್ಯ ಇಲಾಖೆಯಲ್ಲಿ 1,582 ಹುದ್ದೆಗಳಿವೆ
ಬೆಂಗಳೂರು, ಏ. 14 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶದ 6 ಜಿಲ್ಲೆಗಳಲ್ಲಿ ಖಾಲಿ ಇರುವ ಗ್ರೂಪ್ 'ಡಿ' ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 1,582 ಹುದ್ದೆಗಳಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏ.30, 2015.
ಒಟ್ಟು 1,582 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕ ಮತ್ತು ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ : ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಕನಿಷ್ಠ ವಯೋಮಿತಿ 18 ವರ್ಷ. ಸಾಮಾನ್ಯ ವರ್ಗಕ್ಕೆ ಗರಿಷ್ಠ 35 ವರ್ಷಗಳು. ಪ್ರವರ್ಗ 2ಎ/1-ಬಿ/3ಎ/3ಬಿ 38 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು. [ಕನ್ನಡದಲ್ಲಿ ನೇಮಕಾತಿ ಆದೇಶ]

ಅರ್ಜಿ ಶುಲ್ಕ : ಸಾಮಾನ್ಯ ವರ್ಗ, ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 300 ರೂ., ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 100 ರೂ.. ಅರ್ಜಿಯನ್ನು ಸಲ್ಲಿಸಿದ ತಕ್ಷಣ ಲಭ್ಯವಾಗುವ ಚಲನ್ ಡೌನ್‌ಲೋಡ್ ಮಾಡಿಕೊಂಡು ಶುಲ್ಕವನ್ನು ಎಲೆಕ್ಟ್ರಾನಿಕ್ ಅಂಚೆ ಕಚೇರಿಯಲ್ಲಿ ಪಾವತಿ ಮಾಡಬಹುದು. [ಅರ್ಜಿ ಸಲ್ಲಿಸಲು ವಿಳಾಸ]
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಗಳು ಕಂಡುಬಂದರೆ 9343733051, 7483121852 ಮೊಬೈಲ್ ನಂಬರ್‌ಗೆ ಕರೆ ಮಾಡಬಹುದಾಗಿದೆ.












Click it and Unblock the Notifications