ಹಾಸನದಲ್ಲಿ ಕೆಲಸ ಖಾಲಿ ಇದೆ; 10ನೇ ತರಗತಿ ವಿದ್ಯಾರ್ಹತೆ

ಹಾಸನ, ಜನವರಿ 16; ಹಾಸನ ಜಿಲ್ಲಾ ಪಂಚಾಯಿತಿ 16 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನವಾಗಿದೆ.

ಜಿಲ್ಲಾ ಪಂಚಾಯತಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ಬಿಎಫ್‌ಟಿ (Bare Foot Technician) ಹುದ್ದೆಗಳಿಗಾಗಿ ಅರ್ಜಿ ಕರೆದಿದೆ. ಅಭ್ಯರ್ಥಿಗಳಿಗೆ 18 ರಿಂದ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 10ನೇ ತರಗತಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವವರು ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರನಾಗಿರಬೇಕು. ಅಂದರೆ ನರೇಗಾ ಅಡಿ ಹಿಂದಿನ ಮೂರು ವರ್ಷಗಳಲ್ಲಿ ಕನಿಷ್ಟ 2 ವರ್ಷ 25 ದಿನಗಳಿಗೆ ಕಡಿಮೆ ಇಲ್ಲದಷ್ಟು ಯೋಜನೆಯಡಿ ಕೂಲಿ ಕೆಲಸ ಮಾಡಿಡಬೇಕು.

Apply For 16 Bare Foot Technician Post At Hassan

ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ hassan.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ; ವಿಜಯನಗರ ಜಿಲ್ಲಾ ಪಂಚಾಯಿತಿಯಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಖಾಲಿ ಇರುವ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ಜಿಲ್ಲಾ ಸಮಾಲೋಚಕರ ಹುದ್ದೆಗೆ ಅರ್ಜಿ ಕರೆಯಲಾಗಿದೆ.

ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಬೇಕಿದೆ. ಸದರಿ ಹುದ್ದೆಗೆ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು. ನೀರು, ನೈರ್ಮಲ್ಯ ಮತ್ತು ಗ್ರಾಮೀಣ ಅಭಿವೃದ್ಧಿ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷಗಳ ಕಾಲ ಕೆಲಸ ಮಾಡಿರುವ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು. 45 ವರ್ಷ ಮೀರಿರಬಾರದು. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 25 ಸಾವಿರ ರೂ. ಸಮಲೋಚನಾ ಶುಲ್ಕವಾಗಿ ಹಾಗೂ 2 ಸಾವಿರ ರೂ. ಗಳನ್ನು ಪ್ರವಾಸ ಭತ್ಯೆಯಾಗಿ ನೀಡಲಾಗುತ್ತದೆ.

ಆಸಕ್ತರು ಅರ್ಜಿಯ ನಮೂನೆಯನ್ನು ವಿಜಯನಗರ ಜಿಲ್ಲಾ ಪಂಚಾಯಿತಿ ಕಚೇರಿ, ಎಂ. ಪಿ. ಪ್ರಕಾಶ್ ನಗರ, ಹೊಸಪೇಟೆ-583201 ಇಲ್ಲಿ ಜನವರಿ 20ರೊಳಗೆ ಪಡೆದು, ಭರ್ತಿ ಮಾಡಿ, ವಿದ್ಯಾರ್ಹತೆ ಮತ್ತು ಅನುಭವದ ಅಗತ್ಯ ದಾಖಲೆಗಳ ಪ್ರತಿಗಳನ್ನು ಲಗತ್ತಿಸಿ ಜನವರಿ 31ರೊಳಗೆ ಜಿಲ್ಲಾ ಪಂಚಾಯಿತಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸಬಹುದು.

ಸಕಾಲ ಮಿತ್ರರ ನೇಮಕ; ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ನಾಗರಿಕರಲ್ಲಿ ಸಕಾಲ ಸೇವೆಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಯೋಜನೆ ಕುರಿತು ಆಸಕ್ತಿ ಇರುವ ವ್ಯಕ್ತಿಗಳನ್ನು ಶೈಕ್ಷಣಿಕ ಸಂಸ್ಥೆ ಅಥವಾ ಸರ್ಕಾರೇತರ ಸಂಸ್ಥೆ (ಎನ್‌ಜಿಓ) ಮುಖಾಂತರ ಸಕಾಲ ಮಿತ್ರರನ್ನು ನೇಮಕ ಮಾಡಿಕೊಳ್ಳುವಂತೆ ಸಕಾಲ ಮಿಷನ್ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಪರ ಮಿಷನ್ ನಿರ್ದೇಶಕರು ತಿಳಿಸಿದ್ದಾರೆ.

ಸಕಾಲ ಮಿತ್ರ ಯೋಜನೆಗೆ ಆಸಕ್ತಿಯುಳ್ಳ ಯಾವುದೇ ಶೈಕ್ಷಣಿಕ ಸಂಸ್ಥೆ ಅಥವಾ ಸರಕಾರೇತರ ಸಂಸ್ಥೆ (ಎನ್‍ಜಿಒಗಳು) ಜನವರಿ 24 ರೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಂಪರ್ಕಿಸುವುದು. ಈ ಯೋಜನೆ ಅಡಿ ಯಾವುದೇ ರೀತಿಯ ಆರ್ಥಿಕ ಬಾದ್ಯತೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಕಾಲ ಸಮಾಲೋಚಕರಾದ ಸೈಯದ್ ಮೊಹಮ್ಮದ್ ಹುಸೈನಿ ಮೊಬೈಲ್ 9945732165 ಅಥವಾ ಜಿಲ್ಲಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದು.

ಸ್ವಯಂ ಉದ್ಯೋಗ ಸೌಲಭ್ಯಗಳಿಗೆ ಅರ್ಜಿ ಆಹ್ವಾನ; ಮಹಾನಗರ ಪಾಲಿಕೆ ವತಿಯಿಂದ ದೀನ್‍ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ಕಾರ್ಯಕ್ರಮ (ವೈಯಕ್ತಿಕ) ಘಟಕದಡಿ ವೈಯಕ್ತಿಕ ಸ್ವಯಂ ಉದ್ಯೋಗ ಕೈಗೊಳ್ಳಲು ಗರಿಷ್ಠ ರೂ.2 ಲಕ್ಷದವರೆಗೆ ಸೇವಾ ವಲಯ ಬ್ಯಾಂಕ್‍ಗಳಿಂದ ಸಾಲ ಸೌಲಭ್ಯ ಹಾಗೂ ಸಾಲದ ಮೇಲೆ ಬಡ್ಡಿ ದರ ಶೇ.7 ಕ್ಕಿಂತ ಮೇಲ್ಪಟ್ಟಿದ್ದರೆ ಬಡ್ಡಿ ಸಹಾಯಧನ ನೀಡಲಾಗುವುದು.

ಅಭ್ಯರ್ಥಿಗಳು ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘಗಳ ಸದಸ್ಯರಾಗಿರಬೇಕು ಅಥವಾ ಅವರ ಮನೆಯಲ್ಲಿ ಯಾರಾದರೂ ಒಬ್ಬರು ಸಂಘದ ಸದಸ್ಯರಾಗಿರಬೇಕು ಮತ್ತು ಅರ್ಜಿ ಸಲ್ಲಿಸುವವರು 18 ವರ್ಷ ವಯಸ್ಸು ಪೂರೈಸಿರಬೇಕು.

ಯೋಜನೆಯ ಮಾರ್ಗಸೂಚಿಯ ಅನ್ವಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಸೂಕ್ತ ದಾಖಲಾತಿಗಳೊಂದಿಗೆ ಜನವರಿ 21ರೊಳಗಾಗಿ ಮಹಾನಗರ ಪಾಲಿಕೆ ವಲಯ ಕಛೇರಿ-1(ಹಳೇ ಕಟ್ಟಡದ) ಡೇ-ನಲ್ಮ್ ಶಾಖೆಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಡೇ-ನಲ್ಮ್ ಶಾಖೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+