ಕೊಪ್ಪಳ; 16 ಬಿಎಫ್‌ಟಿ ಹುದ್ದೆ ನೇಮಕಾತಿ, 12 ಸಾವಿರ ವೇತನ

ಕಲಬುರಗಿ, ಮಾರ್ಚ್ 12; ಕೊಪ್ಪಳ ಜಿಲ್ಲಾ ಪಂಚಾಯಿತಿ 2020-21ನೇ ಸಾಲಿನಲ್ಲಿ ಖಾಲಿ ಇರುವ ಬಿಎಫ್‌ಟಿ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 25ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.

ಜಿಲ್ಲಾ ಪಂಚಾಯತಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ 16 ಬಿಎಫ್‌ಟಿ (Bare Foot Technician) ಹುದ್ದೆಗಳಿಗೆ ಅರ್ಜಿ ಕರೆದಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 12 ಸಾವಿರ ರೂ. ವೇತನ ನೀಡಲಾಗುತ್ತದೆ.

ಇದು ಖಾಯಂ ಹುದ್ದೆಯಲ್ಲ. ಸೇವೆಯನ್ನು ಒಂದು ವರ್ಷಕ್ಕೆ ಮಿತಿಗೊಳಿಸಲಾಗಿದೆ. ಅರ್ಜಿ ಸಲ್ಲಿಸುವವರು ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರರಾಗಿರಬೇಕು. ಅಂದರೆ, ಹಿಂದಿನ ಮೂರು ವರ್ಷಗಳ ಕಾಲ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸಿರಬೇಕು.

Apply For 16 BTF Post In Koppal Under MGNREGA

ಕನಿಷ್ಠ 2 ವರ್ಷಗಳಲ್ಲಿ 25 ದಿನಗಳಿಗೆ ಕಡಿಮೆ ಇಲ್ಲದಂತೆ ಯೋಜನೆಯಡಿ ಕೂಲಿಕಾರರಾಗಿ ಕೆಲಸ ಮಾಡಿರಬೇಕು. ಅಭ್ಯರ್ಥಿಗಳು ಕನಿಷ್ಠ ಎಸ್. ಎಸ್. ಎಲ್. ಸಿ. ಉತ್ತೀರ್ಣರಾಗಿರಬೇಕು, 18 ರಿಂದ 45 ವರ್ಷದೊಳಗಿರಬೇಕು.

ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಮಹಿಳೆಯರಿಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನಿಯಮಾನುಸಾರ ಆದ್ಯತೆ ಇದೆ. ಆಸಕ್ತರು ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿಯನ್ನು ಸಂಬಂಧಪಟ್ಟ ತಾಲೂಕು ಪಂಚಾಯತಿ ಮಹಾತ್ಮಗಾಂಧಿ ನರೇಗಾ ವಿಭಾಗದಲ್ಲಿ ಪಡೆದುಕೊಂಡು ಭರ್ತಿಮಾಡಿ, ಪೂರಕ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲೂಕು ಪಂಚಾಯತಿಗೆ ಸಲ್ಲಿಸಬೇಕು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ 08539-220399, ಗಂಗಾವತಿ 08533-230230, ಕುಕನೂರು 9880942636, ಕುಷ್ಟಗಿ 8747903332, ಕನಕಗಿರಿ 9743120230, ಕಾರಟಗಿ 8150093294 ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+